
ಬಾಲಿವುಡ್ ಕಂಡ ಸಂಗೀತ ದಂತಕಥೆ , ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ವದಂತಿ: ಎಸ್‌ಪಿಬಿ ಅಸಮಾಧಾನ!
ಏತನ್ಮಧ್ಯೆ ಅವರ ಆರೋಗ್ಯದ ಬಗ್ಗೆ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿವೆ. ಲತಾ ಮಂಗೇಶ್ಕರ್ ವಿಧಿವಶರಾಗಿದ್ದಾರೆ ಎಂದು ಸುದ್ದಿಗಳು ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆಯನ್ನು ತಿಳಿಯದ ಅಭಿಮಾನಿಗಳು ಕಣ್ಣೀರಿಟ್ಟಿದ್ದಾರೆ. ಲತಾ ಮಂಗೇಶ್ಕರ್ ಕುಟುಂಬದವರು ಆರೋಗ್ಯದ ಬಗ್ಗೆ ಸ್ಷಷ್ಟೀಕರಣ ಕೊಟ್ಟಿದ್ದಾರೆ.
ಲತಾ ಜೀ ಸೋದರ ಸಂಬಂಧಿ ರಚನಾ, 'ಲತಾ ಮಂಗೇಶ್ಕರ್ ಅವರು ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ. ಇಂತಹ ಸುಳ್ಳು ಸುದ್ದಿಗಳನ್ನು ನಂಬಬಾರದು' ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.
ಅದೇ ರೀತಿ ಆರ್‌ಪಿಜಿ ಎಂಟರ್‌ಪ್ರೈಸಸ್‌ನ ಚೇರ್‌ಮನ್ ಹರ್ಷ್ ಗೋಯಂಕ ಟ್ವೀಟ್ ಮಾಡಿ, ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನುವುದಕ್ಕೆ ಖುಷಿಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಾವಿ ಬಗ್ಗೆ ವದಂತಿಗಳು ಹರಿದಾಡುತ್ತಿದೆ. ಅದನ್ನು ನಂಬಬೇಡಿ ಎಂದು ಕುಟುಂಬದವರು ಸ್ಪಷ್ಟನೆ ನೀಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.