ಬರ್ತಡೇ ದಿನ ಮಹಾನಟಿ ಕೀರ್ತಿ ಸುರೇಶ್ ಪ್ರಗ್ನೆನ್ಸಿ ಫೋಟೋ ವೈರಲ್!

Published : Oct 17, 2019, 02:17 PM ISTUpdated : Oct 17, 2019, 02:18 PM IST
ಬರ್ತಡೇ ದಿನ ಮಹಾನಟಿ ಕೀರ್ತಿ ಸುರೇಶ್ ಪ್ರಗ್ನೆನ್ಸಿ ಫೋಟೋ ವೈರಲ್!

ಸಾರಾಂಶ

ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಫೋಟೋ ವೈರಲ್ | ಬರ್ತಡೇ ದಿನ ಪ್ರಗ್ನೆನ್ಸಿ ಫೋಟೋ ರಿವೀಲ್ | ಬರ್ತಡೇ ಗಿಫ್ಟ್ ಇದು!  

ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೀರ್ತಿ ಸುರೇಶ್ 'ಪೆಂಗ್ವೀನ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಚಿತ್ರತಂಡ ಬರ್ತಡೇ ಗಿಫ್ಟಾಗಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದೆ. 

ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಪ್ರಗ್ನೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್ ನಲ್ಲಿ She is aggressive, yet gentle.. She is majestic, yet modest.. She is #Penguin ಎಂದು ಬರೆದುಕೊಂಡಿರುವುದು ಗಮನ ಸೆಳೆದಿದೆ. 

 


ಈ ಸಿನಿಮಾ ಮುಂದಿನ ವರ್ಷ ಏಪ್ರಿಲ್- ಮೇಯಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ. ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದು, ಸಂತೋಷ್ ನಾರಾಯಣ್ ಸಂಗೀತವಿದೆ. ತಮಿಳು, ತೆಲುಗಿನಲ್ಲಿ ಸಿನಿಮಾ ಬರಲಿದೆ. ಸಿನಿಮಾ ತಾರಾಗಣದ ಬಗ್ಗೆ ಹೆಚ್ಚಿನ ಮಹಿತಿ ಹೊರ ಬಿದ್ದಿಲ್ಲ. 

ಇನ್ನು ಕೀರ್ತಿ ಸುರೇಶ್ ತೆಲುಗಿನಲ್ಲಿ 'ಮಿಸ್ ಇಂಡಿಯಾ' ಎನ್ನುವ ಸಿನಿಮಾ ಮಾಡುತ್ತಿದ್ದಾರೆ. ಮಿಸ್ ಇಂಡಿಯಾ ಆಗಲು ಕೀರ್ತಿ ಸುರೇಶ್ 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಎನ್ನಲಾಗಿದೆ.  ಇನ್ನು ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ರಿವೀಲ್ ಮಾಡಿಲ್ಲ. 

ಕೆಲವು ಮೂಲಗಳ ಪ್ರಕಾರ ಕೀರ್ತಿ ಸುರೇಶ್ ಮಾಡೆಲ್ ಪಾತ್ರವನ್ನು ಮಾಡುತ್ತಿದ್ದಾರೆ ಎನ್ನಲಾಗಿದೆ. ನರೇಂದ್ರ ನಾಥ್ ಮಿಸ್ ಇಂಡಿಯಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಜಗಪತಿ ಬಾಬು, ನವೀನ್ ಚಂದ್ರ, ರಾಜೇಂದ್ರ ಪ್ರಸಾದ್, ನರೇಶ್, ಭಾನುಶ್ರೀ ಮೆಹ್ರಾ, ಸುಮಂತ್ ಎಸ್, ಪೂಜಿತಾ ಪೊನ್ನಡ, ಕಮಲ್ ಕಾಮರಾಜು ಈ ಚಿತ್ರದಲ್ಲಿ ನಟಿಸಲಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!