
ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು(Mahesh Babu) ಸಿಕ್ಕಾಪಟ್ಟೆ ಬ್ಯುಸಿ ಇರುವ ನಟ. ತೆಲುಗು ಸೇರಿದಂತೆ ದೇಶದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿ ಬಳಗಹೊಂದಿರುವ ನಟ ಮಹೇಶ್ ಬಾಬು ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ, ಹಿಂದಿ ಸಿನಿಮಾ ಮಾಡುತ್ತಾರೆ ಎನ್ನುವ ಮಾತು ಕೇಳಿಬರುತ್ತಿತ್ತು. ಬಾಲಿವುಡ್ ಚೊಚ್ಚಲ ಚಿತ್ರಕ್ಕಾಗಿ ಮಹೇಶ್ ಬಾಬು ಕಾಯುತ್ತಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ದಿನಗಳಿಂದ ವೈರಲ್ ಆಗಿತ್ತು. ಇದೀಗ ಮಹೇಶ್ ಬಾಬು ಬಾಲಿವುಡ್ ಎಂಟ್ರಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೂಲಕ ಹರಿದಾಡುತ್ತಿದ್ದ ಸುದ್ದಿಗೆ ಬ್ರೇಕ್ ಹಾಕಿದ್ದಾರೆ.
ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಮಹೇಶ್ ಬಾಬು ಬಾಲಿವುಡ್ ಎಂಟ್ರಿಯ ವದಂತಿಗೆ ಖಡಕ್ ಉತ್ತರ ನೀಡಿದ್ದಾರೆ. ಹಿಂದಿ ಚಿತ್ರಗಳನ್ನು ಮಾಡುವ ಅಗತ್ಯವಿಲ್ಲ ಎಂದು ಮಹೇಶ್ ಬಾಬು ನೇರವಾಗಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ನೀಡಿರು ಮಹೇಶ್ ಬಾಬು, 'ನನಗೆ ಹಿಂದಿ ಸಿನಿಮಾಗಳನ್ನು ಮಾಡುವ ಅಗತ್ಯವಿಲ್ಲ. ನಾನು ತೆಲುಗು ಸಿನಿಮಾಗಳನ್ನು ಮಾತ್ರ ಮಾಡುತ್ತೇನೆ. ಇದು ಪ್ರಪಂಚದಾದ್ಯಂತ ಕಾಣಿಸುತ್ತದೆ. ಇದು ಈಗ ನಡೆಯುತ್ತಿದೆ' ಎಂದು ಮಹೇಶ್ ಬಾಬು ಹೇಳಿದ್ದಾರೆ. ಮಹೇಶ್ ಬಾಬು ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
Upendra: ಮಹೇಶ್ ಬಾಬು ಅಣ್ಣನಾಗ್ತಾರಾ ಸ್ಯಾಂಡಲ್‌ವುಡ್‌ನ ರಿಯಲ್ ಸ್ಟಾರ್?
ಮಹೇಶ್ ಬಾಬು ಸದ್ಯ ಸರ್ಕಾರಿ ವಾರ ಪಾಟ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಳಿಕ ಮಹೇಶ್ ಬಾಬು ಖ್ಯಾತ ನಿರ್ದೇಶಕ ರಾಜಮೌಳಿ ಅವರ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಮೊದಲ ಬಾರಿಗೆ ರಾಜಮೌಳಿ ಮತ್ತು ಮಹೇಶ್ ಬಾಬು ಇಬ್ಬರು ಒಟ್ಟಿಗೆ ಸಿನಿಮಾ ಮಾಡುತ್ತಿದ್ದು ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹೇಶ್ ಬಾಬು, 'ರಾಜಮೌಳಿ ಅವರ ಪ್ರಜೆಕ್ಟ್ ಬಗ್ಗೆ ನಾನು ಕೂಡ ಉತ್ಸುಕನಾಗಿದ್ದೇನೆ' ಎಂದು ಹೇಳಿದರು.
ಮಹೇಶ್ ಬಾಬು ಸಿನಿಮಾ ಜರ್ನಿ ಬಗ್ಗೆ ಹೇಳುವುದಾದರೆ ಮಹೇಶ್ ಬಾಬು ಚಿಕ್ಕ ವಯಸ್ಸಿನಲ್ಲೇ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು. 1979ರಲ್ಲಿ ಬಾಲಕಲಾವಿದನಾಗಿ ಬಣ್ಣ ಹಚ್ಚಿದರು. ಬಳಿಕ ರಾಜಕುಮಾರುಡು ಸಿನಿಮಾ ಮೂಲಕ ನಾಯಕನಾಗಿ ಮೊದಲ ಬಾರಿಗೆ ತೆರೆಮೇಲೆ ಮಿಂಚಿದ್ದರು. ಈ ಸಿನಿಮಾ ಮಹೇಶ್ ಬಾಬುಗೆ ಅತ್ಯುತ್ತಮ ನಟ ನಂದಿ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಬಳಿಕ ಅನೇಕ ಸಿನಿಮಾಗಳಲ್ಲಿ ಮಹೇಶ್ ಬಾಬು ನಟಿಸಿದ್ದಾರೆ, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅನೇಕ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಮುಂದಿನ ಸಿನಿಮಾದ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ರಿವೀಲ್ ಮಾಡಿದ ರಾಜಮೌಳಿ
ಸದ್ಯ ಮಹೇಶ್ ಬಾಬು ಅವರ ಸರ್ಕಾರಿ ವಾರ ಪಾಟ ಬಿಡುಗಡೆ ಸಿದ್ಧವಾಗಿದ್ದು, ಈ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆ ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಇನ್ನು ತ್ರಿವಿಕ್ರಮ್ ಜೊತೆ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದು ಆ ಸಿನಿಮಾದ ಕೆಲಸಗಳು ಸಹ ನಡೆಯುತ್ತಿದೆ. ಈ ಎರಡು ಸಿನಿಮಾ ಕೆಲಸಗಳು ಸಂಪೂರ್ಣವಾದ ಬಳಿಕ ಮಹೇಶ್ ಬಾಬು, ರಾಜಮೌಳಿ ಸಿನಿಮಾ ಪ್ರಾರಂಭ ಮಾಡಲಿದ್ದಾರೆ. ರಾಜಮೌಳಿ ಸಿನಿಮಾ ಅಂದ್ಮೇಲೆ ನಿರೀಕ್ಷೆ ಹೆಚ್ಚಾಗಿರುತ್ತದೆ. ಹಾಗಾಗಿ ಕುತೂಹಲದಿಂದ ಕಾಯುತ್ತಿದ್ದಾರೆ ಅಭಿಮಾನಿಗಳು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.