ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಟ್ರೇಲರ್, ಆಡಿಯೋ ಲಾಂಚ್ ಮಾಡಿದ ಧೋನಿ!

Published : Jul 12, 2023, 06:14 PM IST
ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಟ್ರೇಲರ್, ಆಡಿಯೋ ಲಾಂಚ್ ಮಾಡಿದ ಧೋನಿ!

ಸಾರಾಂಶ

ಧೋನಿ ಚಿತ್ರ ನಿರ್ಮಾಣ ಸಂಸ್ಥೆಯ ಮೊದಲ ಸಿನಿಮಾದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆಯಾಗಿದೆ. ಲೆಟ್ಸ್ ಗೆಟ್ ಮ್ಯಾರೀಡ್ ತಮಿಳು ಚಿತ್ರದ ಟ್ರೇಲರ್ ಭಾರಿ ಸಂಚಲನ ಸೃಷ್ಟಿಸಿದೆ. ಈ ಸಿನಿಮಾ ಕುರಿತು ಹಲವು ರೋಚಕ ಮಾಹಿತಿಗಳನ್ನು ಧೋನಿ ಹಂಚಿಕೊಂಡಿದ್ದಾರೆ.

ಚೆನ್ನೈ(ಜು.12) ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ ಸಿನಿಮಾ ಜಗತ್ತಿಗೂ ಎಂಟ್ರಿ ಕೊಟ್ಟಿರುವುದು ಗೊತ್ತೇ ಇದೆ. ತಮ್ಮದೇ ಧೋನಿ ಎಂಟರ್ ಟೈನ್ಮೆಂಟ್ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಈ ಸಂಸ್ಥೆಯಡಿ ಧೋನಿ ಪತ್ನಿ ಸಾಕ್ಷಿ ಧೋನಿ ಲೆಟ್ಸ್ ಗೆಟ್ ಮ್ಯಾರೀಡ್ ಎಂಬ ತಮಿಳು ಸಿನಿಮಾ ನಿರ್ಮಾಣ ಮಾಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಚಿತ್ರದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆ ಮಾಡಲಾಗಿದೆ. ಕ್ಯಾಪ್ಟನ್ ಕೂಲ್ ತಮ್ಮದೇ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾದ ಟ್ರೇಲರ್ ಅನಾವರಣ ಮಾಡಿ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

ನಾನು ಈ ಸಿನಿಮಾವನ್ನು ನೋಡಿದ್ದೇನೆ. ತುಂಬಾ ಎಂಟರ್‌ಟೈನರ್ ಆಗಿದೆ. ನಾನು ನನ್ನ ಮಗಳ ಜೊತೆ ಸಿನಿಮಾ ನೋಡಬಹುದು. ಅವಳು ತುಂಬಾ ಪ್ರಶ್ನೆಗಳನ್ನು ಕೇಳುತ್ತಾಳೆ. ಇಡೀ ಚಿತ್ರತಂಡ ಅದ್ಭುತ ಕೆಲಸ ಮಾಡಿದೆ. ಈ ಪ್ರಾಜೆಕ್ಟ್ ನ್ನು ಅವರು ನಿಭಾಯಿಸಿದ ರೀತಿ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಧೋನಿ ಹೇಳಿದ್ದಾರೆ.  ನನ್ನ ಹೆಂಡತಿಗೆ ಸಿನಿಮಾ ಮಾಡಬೇಕು ಎಂದಾಗ ನಾನು ಹೇಳಿದ್ದು ಒಂದೇ, ಸಿನಿಮಾ ಮಾಡುವುದೆಂದರೆ ಮನೆ ವಿನ್ಯಾಸ ಮಾಡಿದಂತೆ ಅಲ್ಲ. ನೀವು ಗೋಡೆಗೆ ಬಣ್ಣ ಹಾಕುತ್ತೀರ. ನಿಮಗೆ ಇಷ್ಟವಿಲ್ಲ, ನೀವು ಬಣ್ಣವನ್ನು ಬದಲಾಯಿಸುತ್ತೀರಿ. ನಂತರ, ಮೊದಲ ಬಣ್ಣವು ಉತ್ತಮವಾಗಿದೆ ಎಂದು ನೀವು ಅರಿತುಕೊಳ್ಳುತ್ತೀರಿ ಮತ್ತು ನಂತರ ನೀವು ಅದನ್ನು ಮತ್ತೆ ಬಣ್ಣಿಸುತ್ತೀರಿ. ಸಿನಿಮಾಗಳಲ್ಲಿ ಹಾಗೆ ಮಾಡಲು ಸಾಧ್ಯವಿಲ್ಲ. ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಸ್ವಲ್ಪ ದಿನಗಳಲ್ಲಿ ಥಿಯೇಟರ್ ಗೆ ಬರಲಿದೆ. ಅತ್ತೆ ಸೊಸೆ ಹಾಗೂ ಮಗನ ನಡುವೆ ನಡೆಯುವ ಕಥೆ ಎಂದು ಧೋನಿ ಹೇಳಿದ್ದಾರೆ.

"ತಮಿಳಿನ ಒಂದೇ ಒಂದು ಕೆಟ್ಟ ಪದ ನನಗೆ ಗೊತ್ತಿಲ್ಲ ಆದ್ರೆ ಹೆಂಡತಿಗೆ ಗೊತ್ತು": ಇಂಟ್ರೆಸ್ಟಿಂಗ್ ಸ್ಟೋರಿ ಬಿಚ್ಚಿಟ್ಟ ಧೋನಿ

ನನ್ನ ಬಹಳಷ್ಟು ಸ್ನೇಹಿತರು ಮತ್ತು ನಮ್ಮ ಸುತ್ತಮುತ್ತಲಿನ ಪ್ರತಿಯೊಬ್ಬರೂ ಸಾಮಾನ್ಯವಾಗಿ ಜೀವನದಲ್ಲಿ ಇಂತಹ ಸನ್ನಿವೇಶಗಳನ್ನು ಎದುರಿಸಿದ್ದಾರೆ. ಹೀಗಾಗಿ ಇದನ್ನು ಚಲನಚಿತ್ರವಾಗಿ ಏಕೆ ಮಾಡಬಾರದು ಎಂದು ನಾವು ಯೋಚಿಸಿದ್ದೇವೆ ಎಂದು ಸಾಕ್ಷಿ ಧೋನಿ ಹೇಳಿದ್ದಾರೆ. ಇದು ನಮ್ಮ ಮೊದಲ ಸಿನಿಮಾ ಆಗಿದ್ದರಿಂದ ತಮಿಳಿನಲ್ಲಿ ಮಾಡಲು ಬಯಸಿದ್ದೆವು. ಈ ಸಿನಿಮಾ ಮಾತ್ರವಲ್ಲದೆ ನಮ್ಮಲ್ಲಿರುವ ಉಳಿದ ಸಿನಿಮಾಗಳು ಚೆನ್ನೈನಿಂದಲೇ ಶುರು ಮಾಡುತ್ತೇವೆ ಎಂದರು. 

ರಮೇಶ್ ತಮಿಳಮಣಿ ನಿರ್ದೇಶನದ ಈ ಚಿತ್ರದಲ್ಲಿ ಹರೀಶ್ ಕಲ್ಯಾಣ್ ಮತ್ತು ಇವಾನಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರವಾಗಿರುವ ಲೆಟ್ಸ್ ಗೆಟ್ ಮ್ಯಾರೀಡ್ ಆದಷ್ಟು ಬೇಗ ತೆರೆಗೆ ಬರಲಿದೆ.

 

ಚೆನ್ನೈಗೆ ಬಂದಿಳಿದ ಎಂ ಎಸ್ ಧೋನಿ; ಹೂ ಮಳೆ ಸುರಿಸಿ ಸ್ವಾಗತಿಸಿದ ಫ್ಯಾನ್ಸ್‌..! ವಿಡಿಯೋ ವೈರಲ್

ಈ ಚಿತ್ರದ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆಗೆ ಧೋನಿ ಹಾಗೂ ಸಾಕ್ಷಿ ಧೋನಿಗೆ ಅದ್ಧೂರಿ ಸ್ವಾಗತ ಕೋರಲಾಗಿತ್ತು. ಅಭಿಮಾನಿಗಳು ಹೂಮಳೆಯಿಂದ ಸ್ವಾಗತ ನೀಡಿದ್ದರು. ಎಲ್ಲೆಡೆ ಧೋನಿ ಧೋನಿ ಜಯಘೋಷಗಳು ಕೇಳಿಬಂದಿತ್ತು. ಅಭಿಮಾನಿಗಳ ಪ್ರೀತಿಗೆ ಧೋನಿ ಎಲ್ಲರತ್ತ ಕೈಬೀಸಿ ಧನ್ಯವಾದ ಹೇಳಿದ್ದರು. ಜುಲೈ 7ರಂದು ಧೋನಿ 42ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಧೋನಿ ತಮ್ಮ ಸಾಕು ನಾಯಿ ಜೊತೆ ಹುಟ್ಟು ಹಬ್ಬ ಆಚರಿಸಿ ಎಲ್ಲರ ಗಮನಸೆಳೆದಿದ್ದರು. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
ಕೊನೆಗೂ ಅದಿತಿ ರಾವ್ ಹೈದರಿ ಗುಟ್ಟು ರಟ್ಟಾಯ್ತು.. ಎಷ್ಟು ದಿನ ಅಂತ ಮುಚ್ಚಿಡೋಕಾಗುತ್ತೆ ಹೇಳಿ..!?