ಹಿಂದೊಮ್ಮೆ ಅಪೂರ್ವ ಜೋಡಿ ಎನಿಸಿಕೊಂಡಿದ್ದ ನಾಗಚೈತನ್ಯ ಮತ್ತು ಸಮಂತಾ ಜೋಡಿ ಬೇರ್ಪಟ್ಟು ವರ್ಷಗಳೇ ಕಳೆದಿವೆ. ಈಗ ಈ ಕುರಿತು ನಾಗಚೈತನ್ಯ ಹೇಳಿದ್ದೇನು?
ಹಿಂದೊಮ್ಮೆ ಇದ್ದರೆ ಇಂಥ ಜೋಡಿ ಇರಬೇಕು ಎಂದು ಹೇಳಿದ್ದು ನಟ ನಾಗ ಚೈತನ್ಯ (Naga Chaitanya) ಹಾಗೂ ಸಮಂತಾ ರುತ್ ಪ್ರಭು ಸ್ಟಾರ್ ಜೋಡಿಗಳ ಕುರಿತು. ಆದರೆ ಮದುವೆಯಾಗಿ ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಕೊನೆಗೊಳಿಸಿತು ಈ ಜೋಡಿ. 2020ರಲ್ಲಿ ಇಬ್ಬರೂ ವಿಚ್ಛೇದನ ಪಡೆದಿದ್ದು ಇದಾಗಲೇ ಮೂರು ವರ್ಷ ಗತಿಸಿದೆ. ಆದರೆ ಇವರ ಡಿವೋರ್ಸ್ ಸುದ್ದಿ ಮಾತ್ರ ಇಂದಿಗೂ ಸದ್ದು ಮಾಡುತ್ತಲೇ ಇದೆ. ನಾಗಚೈತನ್ಯ ವಿಚ್ಛೇದನದ ಬಳಿಕ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಈ ವರ್ಷ ನಾಗ ಚೈತನ್ಯ ಸಿನಿಮಾ ವಿಚಾರಕ್ಕಿಂತ ಡೇಟಿಂಗ್ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಸಮಂತಾ ಅವರಿಂದ ವಿಚ್ಛೇದನ ಪಡೆದ ಬಳಿಕ ನಾಗ ಚೈತನ್ಯ ಮತ್ತೋರ್ವ ನಟಿಯ ಜೊತೆ ಪ್ರೀತಿಯಲ್ಲಿ ಬಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳಿಂದ ಹರಿದಾಡುತ್ತಿದೆ. ತೆಲುಗು ನಟಿ ಶೋಭಿತಾ (Shobhita) ಜೊತೆ ನಾಗ ಚೈತನ್ಯ ಡೇಟಿಂಗ್ ಮಾಡುತ್ತಿದ್ದಾರೆ, ಇಬ್ಬರೂ ಆಗಾಗ ಪ್ರವಾಸ, ಔಟಿಂಗ್ ಅಂತ ಸುತ್ತಾಡುತ್ತಿದ್ದಾರೆ ಎನ್ನಲಾಗುತ್ತಿದ್ದು, ಅವರು ಹೋಟೆಲ್ ಒಂದರಲ್ಲಿ ಕಾಣಿಸಿಕೊಂಡು ಭಾರಿ ಸದ್ದು ಮಾಡಿದ್ದರು.
ಅದೇ ಇನ್ನೊಂದೆಡೆ, ಸಮಂತಾ (Samantha Ruth Prabhu) ಸದ್ಯ ಶಾಕುಂತಲಂ ಸಿನಿಮಾದ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷೆಯ ಶಾಕುಂತಲಂ ಸಿನಿಮಾ ಇದೇ ತಿಂಗಳು ರಿಲೀಸ್ ಆಗಲಿದೆ. ಶಾಕುಂತಲಂ (Shakuntalam) ಪ್ರಚಾರ ನಿಮಿತ್ತ ಸಂದರ್ಶನಗಳನ್ನು ನೀಡುತ್ತಿರೋ ಸಮಂತಾ, ಪತಿ ನಾಗ ಚೈತನ್ಯ ಅವರ ಬಗ್ಗೆಯೂ ಮಾತನಾಡಿದ್ದರು. ಅವರಿಂದ ತಾವು ದೂರ ಆದ ಬಳಿಕ ಎದುರಿಸಿದ ಕಷ್ಟಗಳ ಬಗ್ಗೆ ಹೇಳಿಕೊಂಡಿದ್ದ ನಟಿ, ನನ್ನ ಜೀವನದಲ್ಲಿ ಏನನ್ನು ಬದಲಾಯಿಸಿಕೊಳ್ಳಲು ಬಯಸುವುದಿಲ್ಲ ಅಲ್ಲದೇ ತೊಂದರೆಗೆ ಸಿಲುಕಿಕೊಳ್ಳಲು ಬಯಸಲ್ಲ ಎಂದಿದ್ದರು. ನಾನು ಏನನ್ನೂ ಮರೆಯಲು ಬಯಸುವುದಿಲ್ಲ ಏಕೆಂದರೆ ಎಲ್ಲವೂ ನನಗೆ ಜೀವನದಲ್ಲಿ ಏನನ್ನಾದರೂ ಕಲಿಸಿದೆ, ಆದ್ದರಿಂದ ನಾನು ಮರೆಯಲು ಬಯಸುವುದಿಲ್ಲ ಎನ್ನುವ ಮೂಲಕ ನಾಗ ಚೈತನ್ಯ ಅವರ ಮೇಲೆ ಇನ್ನೂ ಇರುವ ಪ್ರೀತಿಯನ್ನು ತೋರಿಸಿದ್ದರು.
ದೂರವಾದ್ರೂ ಹೊಟ್ಟೆ ಬಳಿ ನಾಗಚೈತನ್ಯ ಕುರುಹು: ಯಾಕಪ್ಪಾ ಇದು ಅಂತಿದ್ದಾರೆ ಫ್ಯಾನ್ಸ್!
ಇದೀಗ ನಾಗಚೈತನ್ಯ ಅವರು, ಯ್ಯೂಟೂಬ್ (Youtube) ಸಂದರ್ಶನವೊಂದರಲ್ಲಿ ಮಾತಾಡಿದ್ದು, ತಮ್ಮ ವಿಚ್ಛೇದನದ ಕುರಿತು ಹೇಳಿಕೆ ನೀಡಿದ್ದು, ಅದೀಗ ವೈರಲ್ ಆಗಿದೆ. ನಿಮ್ಮ ಜೀವನದ ಯಾವ ನಿರ್ಧಾರದ ಬಗ್ಗೆ ನಿಮಗೆ ಹೆಚ್ಚು ವಿಷಾದವಿದೆ ಎಂದು ನಾಗಚೈತನ್ಯ ಅವರಿಗೆ ಪ್ರಶ್ನೆ ಕೇಳಲಾಗಿತ್ತು. ಅಸಲಿಗೆ ಈ ಪ್ರಶ್ನೆ ಇವರ ವಿಚ್ಛೇದನದ ಹಿನ್ನೆಲೆಯಲ್ಲಿಯೇ ಕೇಳಲಾಗಿತ್ತು. ಸಮಂತಾ ಅವರ ಬಗ್ಗೆ ನಟ ಏನಾದರೂ ಸುಳಿವು ನೀಡಬಹುದೇ ಎಂದುಕೊಳ್ಳಲಾಗಿತ್ತು. ಆದರೆ ಅದಕ್ಕೆ ಉತ್ತರಿಸಿದ ನಾಗಚೈತನ್ಯ ಅವರು, ನನ್ನ ಜೀವನದ ಯಾವುದೇ ನಿರ್ಧಾರದ ಬಗ್ಗೆಯೂ ನನಗೆ ವಿಷಾದ ಇಲ್ಲ. ಎಲ್ಲವೂ ಒಂದು ರೀತಿಯ ಪಾಠ ಎಂದು ಹೇಳಿ ಮುಂದೆ ಯಾವ ಪ್ರಶ್ನೆಗೂ ಅವಕಾಶ ನೀಡಲಿಲ್ಲ! ಇದರಿಂದಾಗಿ ನಾಗ ಚೈತನ್ಯಗೆ ಸಮಂತಾ ಅವರಿಂದ ವಿಚ್ಛೇದನ ಪಡೆದ ಬಗ್ಗೆ ಯಾವುದೇ ಬೇಸರವಿಲ್ಲ ಎಂದು ಕಾಣುತ್ತದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.
ಇನ್ನು ಇವರಿಬ್ಬರು ಮದುವೆಯಾಗಿದ್ದ ವಿಚಾರದ ಕುರಿತು ಹೇಳುವುದಾದರೆ, ಯೇ ಮಾಯಾ ಚೇಸಾವೆ ಸಿನಿಮಾ ಮೂಲಕ ಆತ್ಮೀಯರಾದ ನಾಗ ಚೈತನ್ಯ ಹಾಗೂ ನಟಿ ಸಮಂತಾ, ಸ್ನೇಹವನ್ನು ಪ್ರೇಮವಾಗಿ ಬದಲಾಯಿಸಿ ನಂತರ ಅದ್ಧೂರಿಯಾಗಿ ಮದುವೆಯಾದರು. ಇಬ್ಬರೂ ಕುಟುಂಬ ಸದಸ್ಯರ ಮನವೊಲಿಸಿ ಸಾಂಪ್ರದಾಯಿಕ ಹಿಂದೂ ಮತ್ತು ಕ್ರೈಸ್ತ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಯ ಬಳಿಕ ಈ ಜೋಡಿ ಸಂತೋಷದ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಲೇ ಇದ್ದರು. ಆದರೆ ಅದೇನಾಯಿತೋ ಗೊತ್ತಿಲ್ಲ, ಸಾಮಾಜಿಕ ಜಾಲತಾಣದ (Social Media) ಮೂಲಕವೇ ವಿಚ್ಛೇದನ ಘೋಷಿಸಿದ್ದರು.
ಡೇಟಿಂಗ್ ವದಂತಿ ಬೆನ್ನಲ್ಲೇ ಶೋಭಿತಾ ಜೊತೆ ನಾಗ ಚೈತನ್ಯ ಫೋಟೋ ವೈರಲ್; ಕನ್ಫರ್ಮ್ ಎಂದ ನೆಟ್ಟಿಗರು