
ಬಹುಭಾಷಾ ನಟಿ, ಸೌತ್ ಇಂಡಿಯನ್ ಬ್ಯೂಟಿ ನಯನತಾರಾ ಮದುವೆಯಾಗುವ ಸಂಭ್ರಮದಲ್ಲಿದ್ದಾರೆ. ಬಹುಕಾಲದ ಸ್ನೇಹಿತ ವಿಘ್ನೇಶ್ ಶಿವನ್ ಜೊತೆ ಮದುವೆಯಾಗಲು ನಿರ್ಧರಿಸಿದ್ದಾರೆ.
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಅದೀಗ ಎಂಗೇಜ್ ಮೆಂಟ್ ವರೆಗೂ ಬಂದು ನಿಂತಿದೆ. ಈ ವರ್ಷ ಈ ಜೋಡಿ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ. 2020 ರ ವೇಳೆಗೆ ಮದುವೆಯಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ನಯನತಾರಾ ವಿಘ್ನೇಶ್ ತಾಯಿ ಜೊತೆಗಿನ ಅಂದರೆ ಭಾವೀ ಅತ್ತೆಯ ಕೈ ಹಿಡಿದಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಇದು ವೈರಲ್ ಆಗಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಇವರಿಬ್ಬರೂ ಈ ವರ್ಷವೇ ಮದುವೆಯಾಗಲಿದ್ದಾರೆ ಎಂದು ಹೇಳುತ್ತಿದ್ದಾರೆ.
ನಯನತಾರಾ ಸದ್ಯಕ್ಕೆ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಜನೀಕಾಂತ್ ಜೊತೆ ’ದರ್ಬಾರ್’, ಮೆಗಾಸ್ಟಾರ್ ಚಿರಂಜೀವಿ ಜೊತೆ ಸೈರಾ ನರಸಿಂಹ ರೆಡ್ಡಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.