
ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿ ಮಧ್ಯರಾತ್ರಿ ನಡೆಯುತ್ತಿದ್ದ ರೇವ್ ಪಾರ್ಟಿ (Rave Party) ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಅನೇಕ ಪ್ರಭಾವಿ ವ್ಯಕ್ತಿಗಳ ಮಕ್ಕಳು, ಸೆಲೆಬ್ರಿಟಿಗಳು ಇದ್ದರು ಎಂಬ ಮಾಹಿತಿ ಸಿಕ್ಕಿದೆ. ಇದರಲ್ಲಿ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ನಟಿ ನಿಹಾರಿಕಾ ಕೊನಿಡೆಲಾ (Niharika Konidela) ಕೂಡ ಭಾಗಿಯಾಗಿದ್ದು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿರಂಜೀವಿ ಸಹೋದರ ನಾಗಬಾಬು ಅವರ ಪುತ್ರಿ ನಿಹಾರಿಕಾ ಸೇರಿದಂತೆ ಒಟ್ಟು 150 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಕೆಲವು ಗಂಟೆಗಳ ಕಾಲ ನಿಹಾರಿಕಾ ವಿಚಾರಣೆ ನಡೆಸಿದ ಬಂಜಾರಾ ಹಿಲ್ಸ್ ಠಾಣೆಯ ಪೊಲೀಸರು ಬಳಿಕ ಅವರನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ನಿಹಾರಿಕಾ ಅವರು ಪೊಲೀಸ್ ಠಾಣೆಯಿಂದ ಹೊರಬರುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದ್ದಕ್ಕಿದ್ದಂತೆ ಖಾತೆ ಡಿಲೀಟ್, ಚಿರಂಜೀವಿ ಕುಟುಂಬದ ಏಕೈಕ ನಟಿ ನಿಹಾರಿಕಾ ಕೊಟ್ಟ ಬಿಗ್ ಶಾಕ್!
ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಐಷಾರಾಮಿ ಹೋಟೆಲ್ನಲ್ಲಿ ಶನಿವಾರ (ಏಪ್ರಿಲ್ 2) ಮಧ್ಯರಾತ್ರಿ ರೇವ್ ಪಾರ್ಟಿ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, 150 ಜನರನ್ನು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ನಿಹಾರಿಕಾ ಕೊನಿಡೆಲಾ, ಬಿಗ್ ಬಾಸ್ ತೆಲುಗು ವಿನ್ನರ್ ರಾಹುಲ್ ಕೂಡ ಇದ್ದರು. ಇನ್ನೂ ಅನೇಕ ಸೆಲೆಬ್ರಿಟಿಗಳ ಮಕ್ಕಳ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮಧ್ಯರಾತ್ರಿಯ ನಂತರ ಪಬ್ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಆದರೂ ಪಾರ್ಟಿ ಮಾಡುತ್ತಿದ್ದರು ಎಂದು ವರದಿಯಾಗಿದೆ.
ಈ ಬಗ್ಗೆ ಬಂಜಾರಾ ಹಿಲ್ಸ್ ಪೊಲೀಸರು ಮಾಹಿತಿ ನೀಡಿದ್ದು, ಕಳೆದ ರಾತ್ರಿ ಸುಮಾರು 150 ಜನ ಪಬ್ ನಲ್ಲಿ ಪಾರ್ಟಿ ಮಾಡುತ್ತಿದ್ದರು. ಮಧ್ಯರಾತ್ರಿ ನಂತರ ಪಬ್ ಕಾರ್ಯನಿರ್ವಹಿಸಲು ಅನುಮತಿ ಇಲ್ಲ. ಆದರೂ ಪಬ್ ನಲ್ಲಿ ಪಾರ್ಟಿ ನಡೆಯುತ್ತಿತ್ತು. ಪಬ್ ನಲ್ಲಿ ನಿಷೇಧಿತ ವಸ್ತು ಪತ್ತೆಯಾಗಿದೆ. ಬಂಧಿತರಲ್ಲಿ ಗಾಯಕರು, ಕಲಾವಿದರು ಇದ್ದಾರೆ. ಈ ಬಗ್ಗೆ ಇನ್ನೂ ವಿಚಾರಣೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಬಹಿರಂಗ ಪಡಿಸಲಿದ್ದೇವೆ.
Wedding Gossip: ನಿಹಾರಿಕಾ ನಟಿಸುವುದು ಪತಿಗೆ ಇಷ್ಟವಿಲ್ವಾ?
ನಿಹಾರಿಕಾ ವಿಡಿಯೋ ವೈರಲ್ ಆಗುತ್ತಿದ್ದಂತೆ ತಂದೆ ನಾಗಬಾಬು ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿ ಸ್ಪಷ್ಟನೆ ನೀಡಿದ್ದಾರೆ. ಪೊಲೀಸರು ನಿಹಾರಿಕಾಗೆ ಕ್ಲೀನ್ ಚಿಟ್ ನೀಡಿದ್ದಾರೆ. ಅನಗತ್ಯ ಊಹಾಪೋಹಗಳನ್ನು ಹಬ್ಬಿಸಬೇಡಿ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ ಬಿಗ್ ಬಾಸ್ ವಿನ್ನರ್ ರಾಹುಲ್ ಅವರನ್ನು ಭಾನುವಾರ (ಏಪ್ರಿಲ್ 03) ಬೆಳಗ್ಗೆ 8 ಗಂಟೆಗೆ ಬಿಡಲಾಯಿತು. ನಿಹಾರಿಕಾ ಅವರನ್ನು 12 ಗಂಟೆಗೆ ಬಿಡಲಾಯಿತು ಎಂದು ವರದಿಯಾಗಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಸದ್ಯದಲ್ಲೇ ಬಹಿರಂಗವಾಗಲಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.