ಸುಭಾಷ್ ಚಂದ್ರ ಭೋಸ್ ಸಾವಿನ ನಿಗೂಢತೆ ಅರಸಿ ಹೊರಟ ಸ್ಪೈ: ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ನಿಖಿಲ್ ಸಿದ್ಧಾರ್ಥ್

Published : Jun 26, 2023, 12:20 PM ISTUpdated : Jun 26, 2023, 12:24 PM IST
ಸುಭಾಷ್ ಚಂದ್ರ ಭೋಸ್ ಸಾವಿನ ನಿಗೂಢತೆ ಅರಸಿ ಹೊರಟ ಸ್ಪೈ: ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದ ನಿಖಿಲ್ ಸಿದ್ಧಾರ್ಥ್

ಸಾರಾಂಶ

ಟಾಲಿವುಡ್ ಚಿತ್ರರಂಗದ ಟ್ಯಾಲೆಂಟೆಡ್ ನಟ ನಿಖಿಲ್ ಸಿದ್ಧಾರ್ಥ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸ್ಪೈ ಇದೇ 29ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. 

ಟಾಲಿವುಡ್ ಚಿತ್ರರಂಗದ ಟ್ಯಾಲೆಂಟೆಡ್ ನಟ ನಿಖಿಲ್ ಸಿದ್ಧಾರ್ಥ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಸ್ಪೈ ಇದೇ 29ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿರುವ ಸ್ಪೈ ಟೀಂ ಈಗ ಬೆಂಗಳೂರಿಗೆ ಬಂದಿಳಿದಿದೆ. 

ನಾಯಕ ನಿಖಿಲ್ ಸಿದ್ಧಾರ್ಥ್, ನಾಯಕಿ ಐಶ್ವರ್ಯ ಮೆನನ್ ಸಿಲಿಕಾನ್ ಸಿಟಿಯಲ್ಲಿ ಪ್ರಚಾರ ನಡೆಸಲಿದ್ದಾರೆ. ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ. 

ರಿಲೀಸ್​ಗೂ ಮುನ್ನವೇ ದಾಖಲೆ ನಿಖಿಲ್ ನಟನೆಯ SPY: ಬಾಚಿತು 40 ಕೋಟಿ ರೂ!

ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಈಗಾಗಲೇ ಕಾರ್ತಿಕೇಯ, ಕಾರ್ತಿಕೇಯ-2 ನಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್ ಸ್ಪೈ ಮೇಲೆ ನಿರೀಕ್ಷೆ ಹೆಚ್ಚಿದೆ.

ಈಗಾಗಲೇ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವಿನ ಕುರಿತಾದ ವಿಚಾರಗಳನ್ನು ಬೆನ್ನತ್ತುವ ಗೂಢಾಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದಾರೆ. ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. 

ಸುಭಾಷ್ ಚಂದ್ರಬೋಸ್ ಜೀವನ ರಹಸ್ಯ ಬಿಚ್ಚಿಡಲು 'ಸ್ಪೈ' ಆದ ನಟ ನಿಖಿಲ್: ರಾಜ್ ಪಥ್‌ನಲ್ಲಿ ಟೀಸರ್ ರಿಲೀಸ್

ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಸ್ಪೈ ಜೂನ್ 29ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.  ನಟ ನಿಖಿಲ್ ಸಿದ್ಧಾರ್ಥ್ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಸಿದ್ಧಾರ್ಥ್ ನಟನೆಯ 18 ಪೇಜ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಕಾರ್ತಿಕೇಯ, ಸಿನಿಮಾ ಕೂಡ ಸಕ್ಸಸ್ ತಂದುಕೊಟ್ಟಿತ್ತು. ಇದೀಗ ಸ್ಪೈ ಮೂಲಕ ಮತ್ತೊಂದು ಹಿಟ್‌ಗಾಗಿ ಕಾಯುತ್ತಿದ್ದಾರೆ. ಈ ಸಿನಿಮಾ ಕೂಡ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಾಣುವ ನಿರೀಕ್ಷೆಯಲ್ಲಿದ್ದಾರೆ ನಿಖಿಲ್. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಹೀರೋ ಆಗುವ ಮುನ್ನ ಶಾಕ್ ಕೊಟ್ಟ ಅಕೀರಾ ನಂದನ್: ರೇಣು ದೇಸಾಯಿ ಫೋನ್ ಮಾಡಿದಾಗ ಪವನ್ ನಕ್ಕಿದ್ದೇಕೆ?
'ನನಗೆ ಡೈವೋರ್ಸ್‌ ಸಿಗೋದು ಪಕ್ಕಾ..' ನ್ಯಾಷನಲ್‌ ಕ್ರಶ್‌ ಗಿರಿಜಾ ಓಕ್‌ ಫೋಟೋಗೆ ಫ್ಯಾನ್ಸ್ ರಿಯಾಕ್ಷನ್‌