ಟಾಲಿವುಡ್‌ನಲ್ಲಿ ಯಾವುದೇ ಸಮಸ್ಯೆಯಾಗಿಲ್ಲ ಆದರೆ...: ಕಾಸ್ಟಿಂಗ್ ಕೌಚ್ ಬಗ್ಗೆ ನಿತ್ಯಾ ಮೆನನ್ ಶಾಕಿಂಗ್ ಹೇಳಿಕೆ

Published : Jun 17, 2023, 05:34 PM IST
ಟಾಲಿವುಡ್‌ನಲ್ಲಿ ಯಾವುದೇ ಸಮಸ್ಯೆಯಾಗಿಲ್ಲ ಆದರೆ...: ಕಾಸ್ಟಿಂಗ್ ಕೌಚ್ ಬಗ್ಗೆ ನಿತ್ಯಾ ಮೆನನ್ ಶಾಕಿಂಗ್ ಹೇಳಿಕೆ

ಸಾರಾಂಶ

ಟಾಲಿವುಡ್‌ನಲ್ಲಿ ಯಾವುದೇ ಸಮಸ್ಯೆಯಾಗಿಲ್ಲ ಆದರೆ ಬೇರೆ ಸಿನಿಮಾರಂಗದಲ್ಲಿ ಆಗಿದೆ ಎಂದು ನಟಿ ನಿತ್ಯಾ ಮೆನನ್ ಕಾಸ್ಟಿಂಗ್ ಕೌಚ್ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ. 

ಕಾಸ್ಟಿಂಗ್ ಕೌಚ್ ಸಿನಿಮಾರಂಗವನ್ನು ಕಾಡುತ್ತಿರುವ ಪಿಡುಗು. ಅವಕಾಶಕ್ಕಾಗಿ ಪಲ್ಲಂಗ ಏರುವ ಬಗ್ಗೆ ಅನೇಕರ ನಟಿಯರು ಸಿಡಿದೆದಿದ್ದಾರೆ. ಕಾಸ್ಟಿಂಗ್ ಕೌಚ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಮೀ ಟೂ ಅಭಿಯಾನದ ಮೂಲಕ ಅನೇಕ ಕಾಮುಕರ ಬಣ್ಣ ಬಯಲು ಮಾಡಿದ್ದಾರೆ ನಟಿಯರು. ಮೀ ಟೂ ಅಭಿಯಾನದ ಬಳಿಕ ಅನೇಕ ನಟಿಯರು ತಾವು ಸಿನಿಮಾರಂಗದಲ್ಲಿ ಎದುರಿಸಿದ ಸಮಸ್ಯೆ ಬಗ್ಗೆ ಬಹಿರಂಗ ಪಡಿಸುತ್ತಿದ್ದಾರೆ. ಅನೇಕ ನಟಿಯರು ಚಿತ್ರರಂಗದ ಕರಾಳ ಮುಖ ತೆರೆದಿಟ್ಟಿದ್ದಾರೆ. ಇದೀಗ ನಟಿ ನಿತ್ಯಾ ಮೆನನ್ ಕೂಡ ಕಾಸ್ಟಿಂಗ್ ಕೌಚ್ ಅನುಭವ ಬಿಚ್ಚಿಟ್ಟಿದ್ದು ಅಚ್ಚರಿ ಮೂಡಿಸಿದೆ. 

ಸಂದರ್ಶನವೊಂದರಲ್ಲಿ ಮಾತನಾಡಿದ ನಿತ್ಯಾ ಮೆನನ್ ಎಲ್ಲಾ ಕ್ಷೇತ್ರದಲ್ಲೂ ಪ್ರೇಮಿಗಳಿದ್ದಾರೆ ಎಂದು ಹೇಳಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಯಲ್ಲೂ ನಿತ್ಯಾ ಮೆನನ್ ನಟಿಸಿದ್ದಾರೆ. ಈ ಬಗ್ಗೆ ಮಾತನಾಡಿ, ಎಲ್ಲಾ ಭಾಷೆಯಲ್ಲಿ ನಟಿಸಿದ್ದೀನಿ, ಆದರೆ ಟಾಲಿವುಡ್‌ನಲ್ಲಿ ಯಾವುದೇ ಸಮಸ್ಯೆಯಾಗಿಲ್ಲ, ತೆಲುಗು ಚಿತ್ರರಂಗದಲ್ಲಿ ತನಗೆ ಯಾರೂ ತೊಂದರೆ ಕೊಟ್ಟಿಲ್ಲ ಎಂದು ಹೇಳಿದ್ದಾರೆ.  ಆದರೆ ತಮಿಳು ಸಿನಿಮಾರಂಗದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದ್ದೇನೆ ಎಂದು ಹೇಳುವ ಮೂಲಕ  ಶಾಕ್ ನೀಡಿದ್ದಾರೆ. 

'ಕಾಲಿವುಡ್‌ನ ನಾಯಕನೊಬ್ಬ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಮತ್ತು ಶೂಟಿಂಗ್ ಸಮಯದಲ್ಲಿ ಅವರು ತನ್ನನ್ನು ಸ್ಪರ್ಶಿಸುವ ಮೂಲಕ ತುಂಬಾ ಹಿಂಸಾತ್ಮಕವಾಗಿ ನಡೆದುಕೊಂಡಿದ್ದರು' ಎಂದು  ನಿತ್ಯಾ ಹೇಳಿದರು. ಆದರೆ ಆ ನಾಯಕ ಯಾರು ಎನ್ನುವ ಬಗ್ಗೆ ನಿತ್ಯಾ ಬಹಿರಂಗಪಡಿಸಿಲ್ಲ.

'ನಾಯಕನ ಹುಚ್ಚು ವರ್ತನೆಯಿಂದ ಸರಿಯಾಗಿ ಶೂಟಿಂಗ್ ನಲ್ಲಿ ಭಾಗವಹಿಸಲು ಆಗುತ್ತಿರಲಿಲ್ಲ' ಎಂದು ನಿತ್ಯಾ ಮೆನನ್ ಹೇಳಿದ್ದಾರೆ. ಮಹಿಳೆಯರಿಗೆ ಆ ರೀತಿ ತೊಂದರೆ ಕೊಟ್ಟರೆ ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ ಎಂದು ಸೆನ್ಸೇಷನಲ್ ಕಾಮೆಂಟ್ಸ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾಗಿಯೇ ಈಗ ಎಷ್ಟೋ ಮಹಿಳೆಯರು ಹೊರಗೆ ಹೋಗಿ ಕೆಲಸ ಮಾಡಲು ಹೆದರುತ್ತಿದ್ದಾರೆ ಎಂದು ನಿತ್ಯಾ ಹೇಳಿದ್ದಾರೆ. 

ನಿತ್ಯ ಮೆನನ್ ಲೆಸ್ಬಿಯನ್ ಲಿಪ್‌ಲಾಕ್: ನಟಿಯ ಬೋಲ್ಡ್ ಲುಕ್ ವೈರಲ್

MeToo ಆಂದೋಲನ ಆರಂಭವಾದಾಗಿನಿಂದ ಅನೇಕ ನಟಿಯರು ಚಿತ್ರರಂಗದಲ್ಲಿ ಕಿರುಕುಳವನ್ನು ಬಹಿರಂಗಪಡಿಸುತ್ತಲೇ ಬಂದಿದ್ದಾರೆ. ಗಾಯಕಿ ಚಿನ್ಮಯಿಯಂತಹವರು ಲೈಂಗಿಕ ಕಿರುಕುಳದ ವಿರುದ್ಧ ವರ್ಷಗಳಿಂದ ಹೋರಾಡುತ್ತಿದ್ದಾರೆ. ಇದೀಗ ಈ ಹೋರಾಟಕ್ಕೆ ನಿತ್ಯಾ ಮೆನನ್ ಬೆಂಬಲ ಸಿಕ್ಕಿದೆ. ಆದರೆ ನಿತ್ಯಾ ಮೆನನ್ ಗೆ ಇಷ್ಟೊಂದು ಕಿರುಕುಳ ನೀಡಿದ ತಮಿಳಿನ ಹೀರೋ ಯಾರು ಎಂಬ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಹೆಚ್ಚಾಗಿದೆ. ಯಾರೆಂದು ತಲೆಕೆಡಿಸಿಕೊಂಡಿದ್ದಾರೆ. ತಮಿಳಿನ ಅನೇಕ ಸಿನಿಮಾಗಳಲ್ಲಿ ನಿತ್ಯಾ ನಟಿಸಿದ್ದಾರೆ. ಹಾಗಾಗಿ ಯಾರೆಂದು ಗುರುತಿಸುವುದು ಕಷ್ಟವಾಗಿದೆ.

ಹಸೆಮಣೆ ಏರಲು ಸಜ್ಜಾದ ನಿತ್ಯಾ ಮೆನನ್; ಮಲಯಾಳಂ ಹೀರೋ ಜೊತೆ 'ಮೈನಾ' ಬ್ಯೂಟಿ ಮದುವೆ?

ನಿತ್ಯಾ ಮೆನನ್ ಸಿನಿಮಾ ವಿಚಾರಕ್ಕೆ ಬರುವುದಾದರೆ ತಮಿಳಿನಲ್ಲಿ ನಿತ್ಯಾ ಕೊನೆಯದಾಗಿ ತಿರುಚಿತ್ರಾಂಬಲಂ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಧನುಷ್ ಜೊತೆ ನಟಿಸಿದ್ದರು. ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಬಳಿಕ ವಂಡರ್ ವುಮೆನ್, ಕಲಾಂಬಿ ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಅನೇಕ ಸಿನಿಮಾಗಳಲ್ಲಿ ನಿತ್ಯಾ ಬ್ಯುಸಿಯಾಗಿದ್ದಾರೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಾಜ್ ಜೊತೆ ರೊಮ್ಯಾಂಟಿಕ್ ಹನಿಮೂನ್ ಟ್ರಿಪ್ ಪ್ಲಾನ್ ಮಾಡಿದ ಸಮಂತಾ.. ಎಲ್ಲಿಗೆ ಹೋಗ್ತಿದ್ದಾರೆ?
ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?