
ಬಾಲಿವುಡ್ ಸ್ಟಾರ್ ನಟಿ ಅಲಿಯಾ ಭಟ್ ನಟನೆಯ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿದೆ. ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅಲಿಯಾ ಭಟ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಭಿಮಾನಿಗಳು ಮಾತ್ರವಲ್ಲದೆ ಅನೇಕ ಕಲಾವಿದರು ಸಹ ಅಲಿಯಾ ಅವರನ್ನು ಹಾಡಿ ಹೊಗಳಿದ್ದಾರೆ.
ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಅಲಿಯಾ ಸಿನಿಮಾವನ್ನು ನೋಡಿ ಮೆಚ್ಚಿಕೊಂಡಿದ್ದಾರೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸಾರಥ್ಯದಲ್ಲಿ ಬಂದ ಗಂಗೂಬಾಯಿ ಸಿನಿಮಾವನ್ನು ಪಾಕಿಸ್ತಾನದ ಅಭಿಮಾನಿಗಳು ನೋಡಿ ಸಂಭ್ರಮಿಸುತ್ತಿದ್ದಾರೆ. ಪಾಕಿಸ್ತಾನದ ನಟ ಅಲಿಯಾ ಸಿನಿಮಾವನ್ನು ನೋಡಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಪಾಕ್ ನಟ ಮುನೀಬ್ ಬಟ್ ತನ್ನ ಪತ್ನಿ ಅಮಾನ್ ಖಾನ್ ಜೊತೆ ಸೇರಿ ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ್ದಾರೆ. ಸದ್ಯ ದುಬೈನಲ್ಲಿರುವ ಮುನೀಬ್ ಅಲ್ಲೇ ಇಡಿ ಥಿಯೇಟರ್ ಬುಕ್ ಮಾಡಿದ್ದಾರೆ. ಪತ್ನಿ ಜೊತೆ ಸಿನಿಮಾ ವೀಕ್ಷಿಸುತ್ತಿರುವ ಮುನೀಬ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟ ಮುನೀಬ್ ಪತ್ನಿ ಮತ್ತು ಮಗಳ ಜೊತೆ ದುಬೈನಲ್ಲಿ ರಜೆಯ ಕಳೆಯುತ್ತಿದ್ದಾರೆ. ಪತ್ನಿಗಾಗಿ ಮುನೀಬ್ ಅಲಿಯಾ ಭಟ್ ಸಿನಿಮಾವನ್ನು ಬುಕ್ ಮಾಡಿದ್ದಾರೆ.
RRR: ನಾಟು..ನಾಟು.. ಹಾಡಿಗೆ ಅಮೀರ್ ಖಾನ್ ಸ್ಟೆಪ್ಸ್, ಬಿದ್ದು ಬಿದ್ದು ನಕ್ಕ ಅಲಿಯಾ, ವಿಡಿಯೋ ವೈರಲ್!
ಪಾಕಿಸ್ತಾನಿ ನಟ ಮುನೀಬ್ ಬಟ್ ಉರ್ದು ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೆ ದೂರದರ್ಶನದಲ್ಲಿ ಕೆಲಸ ಮಾಡುತ್ತಿದ್ದಾರೆ. 2012ರಲ್ಲಿ ತಮ್ಮ ವೃತ್ತಿ ಜೀವನ ಪ್ರಾರಂಭ ಮಾಡಿದ ಮುನೀಬ್ ಅನೇಕ ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಇತ್ತೀಚಿಗೆ ನಟ ಯೇ ನಾಥಿ ಹಮಾರಿ ಕಿಸ್ಮತ್ ನಲ್ಲಿ ಕಾಣಿಸಿಕೊಂಡಿದ್ದರು. 2018ರಲ್ಲಿ ಮುನೀಬ್ ಬಟ್ ಮದುವೆಯಾಗಿದ್ದು, 2019ರಲ್ಲಿ ಮೊದಲ ಮಗು ಸ್ವಾಗತಿಸಿದ್ದಾರೆ.
ಗಂಗೂಬಾಯಿ ಸಿನಿಮಾದ ಬಗ್ಗೆ ಹೇಳುವುದಾದರೆ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲಿಯಾ ಜೊತೆಗೆ ಅಜಯ್ ದೇವಗನ್, ವಿಜಯ್ ರಾಜ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಆಲಿಯಾ ರಣಬೀರ್ ಮದುವೆಯ ಡೇಟ್ ಬಹಿರಂಗ; ಸದ್ಯದಲ್ಲೇ ಹಸೆಮಣೆ ಏರಲಿರುವ ಕಪಲ್?
ಇನ್ನು ಬಾಲಿವುಡ್ ಭಾರಿ ಬೇಡಿಕೆ ಹೊಂದಿರುವ ನಟ ಅಲಿಯಾ ಸದ್ಯ ಬ್ರಹ್ಮಾಸ್ತ್ರ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ರಣಬೀರ್ ಕಪೂರ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಮೂರ್ನಾಲ್ಕು ವರ್ಷಗಳಿಂದ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದೆ. ಸದ್ಯ ಅಲಿಯಾ ಭಟ್ ಸದ್ಯ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಮೊದಲ ಬಾರಿಗೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಕಾಣಿಸಿಕೊಂಡಿರುವ ಅಲಿಯಾ ಚಿತ್ರದ ಬಗ್ಗೆ ಸಖತ್ ಎಕ್ಸಾಯಿಟ್ ಆಗಿದ್ದಾರೆ. ರಾಜಮೌಳಿ ಸಾರಥ್ಯದಲ್ಲಿ ಮೂಡಿಬಂದಿರುವ ಸಿನಿಮಾ ಮಾರ್ಚ್ 25ರಂದು ಅದ್ದೂರಿಯಾಗಿ ತೆರೆಗೆ ಬರುತ್ತಿದೆ. ಚಿತ್ರದಲ್ಲಿ ರಾಮ್ ಚರಣ್ ಮತ್ತು ಜೂ ಎನ್ ಟಿ ಆರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ಬಾಲಿವುಡ್ ನಟ ಅಜಯ್ ದೇವಗನ್ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.