ಆಪ್ ನಾಯಕನ ಜೊತೆ ಪ್ರಿಯಾಂಕಾ ಚೋಪ್ರಾ ಸಹೋದರಿಯ ಡೇಟಿಂಗ್; ಫೋಟೋ ವೈರಲ್

Published : Mar 24, 2023, 12:16 PM IST
ಆಪ್ ನಾಯಕನ ಜೊತೆ ಪ್ರಿಯಾಂಕಾ ಚೋಪ್ರಾ ಸಹೋದರಿಯ ಡೇಟಿಂಗ್; ಫೋಟೋ ವೈರಲ್

ಸಾರಾಂಶ

ಬಾಲಿವುಡ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಸಹೋದರಿ ಪರಿಣೀತಿ ಚೋಪ್ರಾ ಆಪ್ ನಾಯಕ ರಾಘವ್ ಚಡ್ಡಾ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.  

ಬಾಲಿವುಡ್ ನಟಿ, ಪ್ರಿಯಾಂಕಾ ಚೋಪ್ರಾ ಸಹೋದರಿ ಪರಿಣೀತಿ ಚೋಪ್ರಾ ಡೇಟಿಂಗ್ ವಿಚಾರಕ್ಕೆ ಸದ್ದು ಮಾಡುತ್ತಿದ್ದಾರೆ. ಅಂದಹಾಗೆ ಪರಿಣೀತಿ ಪ್ರೀತಿ ಪ್ರೇಮ ಅಂತ ಸುದ್ದಿಯಾಗಿರುವುದು ಬಾಲಿವುಡ್ ನಟನ ಜೊತೆ ಅಂತ ಅಂದ್ಕೋಬೇಡಿ. ಪರಿಣೀತಿ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಜೊತೆ ಡೇಟಿಂಗ್ ನಲ್ಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ಇದಕ್ಕೆ ಕಾರಣವಾಗಿದ್ದು ಇತ್ತೀಚಿನ ಅವರ ಫೋಟೋಗಳು ಮತ್ತು ವಿಡಿಯೋ. ಹೌದು ಪರಿಣೀತಿ ಇತ್ತೀಚೆಗಷ್ಟೆ ಆಪ್ ನಾಯಕ ರಾಘವ್ ಚಡ್ಡಾ ಜೊತೆ ಲಂಚ್, ಜಿನ್ನರ್ ಅಂತ ಸುತ್ತಾಡುತ್ತಿದ್ದಾರೆ. ಇಬ್ಬರೂ ಮುಂಬೈನ ರೆಸ್ಟೋರೆಂಟ್‌ನಲ್ಲಿ ಕಾಣಿಸಿಕೊಂಡಿದ್ದರು. ರಾತ್ರಿ ಒಟ್ಟಿಗೆ ಊಟಕ್ಕೆ ಹೋಗಿದ್ದ ಈ ಜೋಡಿ ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಇಬ್ಬರೂ ಮರುದಿನವೂ ಮತ್ತೆ ಊಟಕ್ಕೆ ಹಾಜರಾಗಿದ್ದರು. ಪಾಪಾರಾಜಿಗಳ ಕ್ಯಾಮರಾಗೆ ಸೆರೆಯಾದ ಈ ಜೋಡಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಪರಿಣೀತಿ ಮತ್ತು ರಾಘವ್ ಇಬ್ಬರೂ ಊಟ ಮುಗಿಸಿ ರೆಸ್ಟೋರೆಂಟ್‌ನಿಂದ ಹೊರಬಂದು ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಇಬ್ಬರೂ ಪಾಪರಾಜಿಗಳಿಗೆ ಪೋಸ್ ನೀಡಿದ್ದಾರೆ. ಇಬ್ಬರ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಇಬ್ಬರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಪದೇ ಪದೆ ಇಬ್ಬರೂ ಒಟ್ಟಿಗೆ ಡಿನ್ನರ್ ಮಾಡುತ್ತಿರುವುದು ನೋಡಿದ್ರೆ ಗೊತ್ತಾಗುತ್ತೆ ಪಕ್ಕಾ ಇಬ್ಬರೂ ಪ್ರೀತಿಯಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ. 

ಆಮ್ ಆದ್ಮಿ ಪಕ್ಷದಲ್ಲಿರುವ ರಾಘವ್ ಚಡ್ಡಾ ಸಂಸತ್ತಿನ ಅತ್ಯಂತ ಕಿರಿಯ ಸದಸ್ಯರಾಗಿದ್ದಾರೆ. ದೆಹಲಿ ಮೂಲದವರಾದ ರಾಘವ್ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ವಿದೇಶದಲ್ಲಿ ಅಧ್ಯಯನ ಮಾಡಿದ್ದಾರೆ. ಪರಿಣೀತಿ ಚೋಪ್ರ ಮ್ಯಾಂಚೆಸ್ಟರ್ ಬ್ಯುಸಿನೆಸ್ ಸ್ಕೂಲ್‌ UK ಯಲ್ಲಿ ಅಧ್ಯಯನ ಮಾಡಿದ್ದಾರೆ. 2009 ರಲ್ಲಿ ಪರಿಣೀತಿ, ಯಶ್ ರಾಜ್ ಫಿಲ್ಮ್ಸ್ ನ ಮಾರ್ಕೆಟಿಂಗ್ ವಿಭಾಗಕ್ಕೆ ಕೆಲಸಕ್ಕೆ ಸೇರಿದರು. ಬಳಿಕ ಅವರು ರಣ್‌ವೀರ್ ಸಿಂಗ್ ಮತ್ತು ಅನುಷ್ಕಾ ಶರ್ಮಾ ನಟನೆಯ ರೊಮ್-ಕಾಮ್ ಲೇಡೀಸ್ ವರ್ಸಸ್ ರಿಕಿ ಬಹ್ಲ್ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟರು. ಮೊದಲ ಬಾರಿಗೆ ತೆರೆಮೇಲೆ ಕಾಣಿಸಿಕೊಂಡರು. ಅಲ್ಲಿಂದ ನಟನೆ ವೃತ್ತಿ ಜೀವನ ಪ್ರಾರಂಭಿಸಿದ ಪರಿಣಿತಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 

ಮಕ್ಕಳು ಬೇಕು... ಹುಡುಗನನ್ನು ಹುಡುಕಿ ಕೊಡಿ ಎಂದ ನಟಿ Parineeti Chopra!

2019 ರಲ್ಲಿ ನಿರ್ದೇಶಕ ಚರಿತ್ ದೇಸಾಯಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿ ಇತ್ತು. ಬಳಿಕ ಇಬ್ಬರೂ ಬ್ರೇಕಪ್ ಮಾಡಿಕೊಂಡರು. ಈ ಬಗ್ಗೆ ಸಂದರ್ಶನವೊಂದರಲ್ಲಿ ಪ್ರತಿಕ್ರಿಯೆ ನೀಡಿದ್ದ ಪರಿಣಿತಿ, ' ಹಾರ್ಟ್‌ಬ್ರೇಕಿಂಗ್ ಅನುಭವ. ಅದು ನನ್ನ ಜೀವನದ ಕೆಟ್ಟ ಸಮಯವಾಗಿತ್ತು. ಏಕೆಂದರೆ ಅಲ್ಲಿಯವರೆಗೆ ನಾನು ಯಾವುದೇ ನಿರಾಕರಣೆಯನ್ನು ನೋಡಿರಲಿಲ್ಲ. ನನಗೆ ನನ್ನ ಕುಟುಂಬ ಅತ್ಯಂತ ಅಗತ್ಯವಾಗಿತ್ತು. ಆದರೆ ಪ್ರಬುದ್ಧತೆಯ ವಿಷಯದಲ್ಲಿ ಏನಾದರೂ ಬದಲಾದರೆ, ಅದೆಲ್ಲವೂ ಅದೇ ಕಾರಣ. ನನ್ನ ಜೀವನದ ಆರಂಭದಲ್ಲೇ ಆ ಹಂತವನ್ನು ಕೊಟ್ಟಿದ್ದಕ್ಕಾಗಿ ನಾನು ದೇವರಿಗೆ ಧನ್ಯವಾದ ಹೇಳುತ್ತೇನೆ' ಎಂದು ಹೇಳಿದ್ದರು.

ಬಿಸಿಲಿಗೆ ಮೈಯೊಡ್ಡಿ ಕುಳಿತ ಪ್ರಿಯಾಂಕಾ ಚೋಪ್ರ ತಂಗಿ; ಅಬ್ಬಾ! ಸಖತ್ ಹಾಟ್ ಎಂದ ಫ್ಯಾನ್ಸ್

ಪರಿಣಿತಿ ಕೊನೆಯದಾಗಿ ಸೂರಜ್ ಬರ್ಜಾತ್ಯಾ ಅವರ ಅಮಿತಾಬ್ ಬಚ್ಚನ್ ಮತ್ತು ಅನುಪಮ್ ಖೇರ್ ಜೊತೆ ಊಂಚೈನಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಟ ಅಕ್ಷಯ್ ಕುಮಾರ್ ಜೊತೆ ಕ್ಯಾಪ್ಸುಲ್ ಗಿಲ್ ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಜೊತೆಗೆ ಮತ್ತೊಂದು ಸಿನಿಮಾದಲ್ಲೂ ನಟಿ ಬ್ಯುಸಿಯಾಗಿದ್ದಾರೆ. ಈ ನಡುವೆ ಡೇಟಿಂಗ್ ವಿಚಾರ ಸದ್ದು ಮಾಡುತ್ತಿದ್ದು ಸದ್ಯದಲ್ಲೇ ಹಸಮೆಣೆ ಏರುವ ಸಾಧ್ಯತೆ ಇದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?