Mahesh Babu Father Death; ಸೂಪರ್ ಸ್ಟಾರ್ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Published : Nov 15, 2022, 01:16 PM ISTUpdated : Nov 15, 2022, 01:17 PM IST
Mahesh Babu Father Death; ಸೂಪರ್ ಸ್ಟಾರ್ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಸಾರಾಂಶ

ಟಾಲಿವುಡ್ ಸ್ಟಾರ್ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ಇಂದು ಮಂಗಳವಾರ (ನವೆಂಬರ್ 15) ಬೆಳಗ್ಗೆ ಇಹಲೋಕ ತ್ಯಜಿಸಿದರು.ಕೃಷ್ಣ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.  

ಟಾಲಿವುಡ್ ಸ್ಟಾರ್ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ಇಂದು ಮಂಗಳವಾರ (ನವೆಂಬರ್ 15) ಬೆಳಗ್ಗೆ ಇಹಲೋಕ ತ್ಯಜಿಸಿದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರಿಗೆ ಹೃದಯಾಘತ ಸಂಭವಿಸಿತ್ತು. ತಕ್ಷಣ ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೃಷ್ಣ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಿಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಕೃಷ್ಣ ಅವರ ನಿಧನಕ್ಕೆ ಟಾಲಿವುಡ್ ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮಹೇಶ್ ಬಾಬು ಅವರಿಗೆ ಧೈರ್ಯ ತುಂಬಿ ಸಂದೇಶ ಕಳುಹಿಸುತ್ತಿದ್ದಾರೆ. ಒಂದೂವರೇ ತಿಂಗಳ ಹಿಂದೆಯಷ್ಟೆ ಮಹೇಶ್ ಬಾಬು ತಾಯಿಯನ್ನು ಕಳೆದುಕೊಂಡಿದ್ದರು. ಇದೀಗ ತಂದೆಯನ್ನು ಕಳೆದುಕೊಂಡು ತೀವ್ರ ದುಃಖದಲ್ಲಿದ್ದಾರೆ. ನಟ ಮಹೇಶ್ ಬಾಬು ತಂದೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. 

'ಕೃಷ್ಣ ಅವರು ತಮ್ಮ ಅದ್ಭುತ ನಟನಾ ಕೌಶಲ್ಯ ಮತ್ತು ಸ್ನೇಹಪರ ವ್ಯಕ್ತಿತ್ವದಿಂದ ಜನರ ಹೃದಯವನ್ನು ಗೆದ್ದ ಲೆಜೆಂಡರಿ ಸೂಪರ್‌ಸ್ಟಾರ್. ಅವರ ನಿಧನ ಭಾರತೀಯ ಸಿನಿಮಾರಂಗಕ್ಕೆ ದೊಡ್ಡ ನಷ್ಟ. ದುಃಖ ಭರಿಸುವ ಶಕ್ತಿ ನೀಡಲಿ ಮಹೇಶ್ ಬಾಬು ಕುಟುಂಬಕ್ಕೆ. ಆತ್ಮಕ್ಕೆ ಶಾಂತಿ' ಎಂದು ಹೇಳಿದ್ದಾರೆ. 

ನಿನ್ನೆ ಮಧ್ಯಾಹ್ನ ಆಸ್ಪತ್ರೆ ಬುಲೆಟಿನ್ ಬಿಡುಗಡೆಯಾಗಿತ್ತು. ಅದರಲ್ಲಿ ಹಿರಿಯ ನಟ ಕೃಷ್ಣ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ಬಹಿರಂಗ ಪಡಿಸಿದ್ದರು. ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದ ಕೃಷ್ಣ ಅವರ ಆರೋಗ್ಯ ಸ್ಥಿತಿ ಮಹೇಶ್ ಬಾಬು ಕುಟುಂಬಕ್ಕೆ ಆತಂಕ ಮೂಡಿಸಿತ್ತು. ಇಡೀ ಕುಟುಂಬ ಆತಂಕದಲ್ಲಿತ್ತು. ಕೃಷ್ಣ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದರು. ಆದರೆ ಮಹೇಶ್ ಬಾಬು ತಂದೆ ಬದುಕಿ ಬರಲಿಲ್ಲ.

Actor Krishna Death: ಟಾಲಿವುಡ್‌ ಸೂಪರ್‌ಸ್ಟಾರ್‌ ಮಹೇಶ್‌ ಬಾಬು ತಂದೆ ಇನ್ನಿಲ್ಲ

ಹಿರಿಯ ನಟ ಕೃಷ್ಣ ಅವರು 6 ದಶಕಗಳಿಂದ ತೆಲುಗು ಚಿತ್ರರಂಗದಲ್ಲಿ ಸಕ್ರೀಯರಾಗಿದ್ದರು. ಅವರು 'ಕುಲ ಗೋತ್ರಲು' , 'ಪರವು ಪ್ರತಿಷ್ಠಾ' ಮತ್ತು 'ಪದಂಡಿ ಮುಂದುಕು' ಚಿತ್ರಗಳಲ್ಲಿ ಸಣ್ಣ ಪಾತ್ರಗಳನ್ನು ಮಾಡುವ ಮೂಲಕ  ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಬಳಿಕ ಸ್ಟಾರ್ ಹೊರಹೊಮ್ಮಿದರು. ಕೃಷ್ಣ, ಮೂಲ ಹೆಸರು ಘಟ್ಟಮನೇನಿ ಶಿವ ರಾಮ ಕೃಷ್ಣ ಮೂರ್ತಿ, ಅವರು 350 ಚಿತ್ರಗಳಲ್ಲಿ ನಟಿಸಿದ್ದಾರೆ. ನಟನೆ ಜೊತೆಗೆ ಯಶಸ್ವಿ ನಿರ್ದೇಶಕ ಮತ್ತು ನಿರ್ಮಾಪಕರೂ ಆಗಿದ್ದರು. ಅವರಿಗೆ 2009 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Mahesh Babu Mother Death; ಅಜ್ಜಿ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಸಿತಾರಾ; ಮಗಳನ್ನು ಸಂತೈಸಿ ಕಣ್ಣೀರಿಟ್ಟ ನಟ

ಕೃಷ್ಣ ಅವರ ಪತ್ನಿ, ಮಹೇಶ್ ಬಾಬು ತಾಯಿ ಇಂದಿರಾ ದೇವಿ ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಧನರಾದರು. ಅವರ ಹಿರಿಯ ಮಗ ರಮೇಶ್ ಬಾಬು ಜನವರಿಯಲ್ಲಿ ಮೃತಪಟ್ಟಿದ್ದರು. ಕೃಷ್ಣ ಅವರ ಎರಡನೇ ಪತ್ನಿಯಾಗಿದ್ದ ನಟಿ ವಿಜಯ ನಿರ್ಮಲಾ ಅವರು ಸಹ 2019 ರಲ್ಲಿ ಕೊನೆಯುಸಿರೆಳೆದಿದ್ದರು. ಈ ವರ್ಷ ಮಹೇಶ್ ಬಾಬು ಕುಟುಂಬಕ್ಕೆ ತುಂಬಾ ಕಷ್ಟದ ಸಮಯವಾಗಿದ್ದು ಅಭಿಮಾನಿಗಳು ಧೈರ್ಯ ತುಂಬುವ ಪೋಸ್ಟ್ ಕಳುಹಿಸುತ್ತಿದ್ದಾರೆ.  

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು: Jaya Bachchan ಬಾಯ್ಕಾಟ್‌ ಆಗ್ತಾರಾ?
ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?