
ನಟಿ ಪೂಜಾ ಹೆಗ್ಡೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಆಲಾ ವೈಕುಂಠಪುರರಾಮುಲೋ ನಟಿ ಭಾನುವಾರ ತನಗೆ ಕೊರೋನಾ ಪಾಸಿಟಿವ್ ಬಂದಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿದ್ದಾರೆ.
ಎಲ್ಲರಿಗೂ ನಮಸ್ಕಾರ. ನನಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ ನಾನು ಕ್ವಾರೆಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಸೋಷಿಯಲ್ ಮಿಡಿಯಾ ಪೋಸ್ಟ್ ಶೇರ್ ಮಾಡಿದ್ದಾರೆ.
ಶಿವಣ್ಣ ಜತೆ ಸಿಂಗರ್ ಮಂಗ್ಲಿ ನಟನೆ; ಜೂನ್ ತಿಂಗಳಲ್ಲಿ ಚಿತ್ರೀಕರಣ ಮಾಡಿಕೊಳ್ಳಲಿರುವ 124ನೇ ಚಿತ್ರ!
ಪೂಜಾ ಹೆಗ್ಡೆ ಅವರು 2014 ರಲ್ಲಿ ಒಕ ಲೈಲಾ ಕೋಸಮ್ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಟಾಲಿವುಡ್ನಲ್ಲಿ ಪ್ರಮುಖ ಹಿರೋಯಿನ್ ಆಗಿ ಹೊರಹೊಮ್ಮಿದ್ದಾರೆ. ದುವಾಡಾ ಜಗನ್ನಾಥಮ್, ಅರವಿಂದ ಸಮೇತ ವೀರ ರಾಘವ, ಮತ್ತು ಅಲಾ ವೈಕುಂಠಪುರಮಲೂ ಸಿನಿಮಾಗಳಲ್ಲಿ ಮಿಂಚಿದ್ದಾರೆ.
ಪ್ರಸ್ತುತ, ಪೂಜಾ ಹೆಗ್ಡೆ ಬಿಗ್ ಬಜೆಟ್ ಸಿನಿಮಾಗಳನ್ನು ಹೊಂದಿದ್ದಾರೆ. ಮೋಸ್ಟ್ ಎಲಿಜಿಬಲ್ ಬ್ಯಾಚುಲರ್, ರಾಧೆ ಶ್ಯಾಮ್, ಆಚಾರ್ಯ, ಮತ್ತು ದಳಪತಿ 65 ಪೂಜಾ ಕೈಯಲ್ಲಿರೋ ಸಿನಿಮಾಗಳು. ರಣವೀರ್ ಜೊತೆ ಸರ್ಕಸ್ ಎಂಬ ಹಿಂದಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.