Innocent Passes Away: ಮಲಯಾಳಂ ನಟ, ಮಾಜಿ ಸಂಸದ ಇನ್ನೋಸೆಂಟ್‌ ನಿಧನ

Published : Mar 27, 2023, 05:22 AM IST
Innocent Passes Away: ಮಲಯಾಳಂ ನಟ, ಮಾಜಿ ಸಂಸದ ಇನ್ನೋಸೆಂಟ್‌ ನಿಧನ

ಸಾರಾಂಶ

ಮಲಯಾಳಂ ಸಿನಿಮಾದ ಖ್ಯಾತ ನಟ, ಮಾಜಿ ಸಂಸದ ಇನ್ನೋಸೆಂಟ್‌ (75) ಅವರು ಅನಾರೋಗ್ಯ ಕಾರಣದಿಂದ ಭಾನುವಾರ ನಿಧನರಾದರು. ಶನಿವಾರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. 

ಕೊಚ್ಚಿ (ಮಾ.27): ಮಲಯಾಳಂ ಸಿನಿಮಾದ ಖ್ಯಾತ ನಟ, ಮಾಜಿ ಸಂಸದ ಇನ್ನೋಸೆಂಟ್‌ (75) ಅವರು ಅನಾರೋಗ್ಯ ಕಾರಣದಿಂದ ಭಾನುವಾರ ನಿಧನರಾದರು. ಶನಿವಾರ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದಗೇ ಅವರು ವಿಧಿವಶರಾಗಿದ್ದಾರೆ. ಇನ್ನೋಸೆಂಟ್‌ ಅವರು 2014-19ನೇ ಲೋಕಸಭಾ ಅವಧಿಯಲ್ಲಿ ಸಂಸದರಾಗಿಯೂ ಸೇವೆ ಸಲ್ಲಿಸಿದ್ದರು. 

1972ರಲ್ಲಿ ತಮ್ಮ ವಿಶೇಷವಾದ ಕಾಮಿಡಿ ವಿಧಾನದಿಂದ ಭಾರಿ ಜನಪ್ರಿಯತೆ ಗಳಿಸಿದ್ದ ಇನ್ನೋಸೆಂಟ್‌ ಅವರು ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾನಾ ಪಾತ್ರಗಳನ್ನು ನಿಭಾಯಿಸಿದ್ದಾರೆ. 2012ರಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು ಬದುಕುಳಿದಿದ್ದರು. ಆದರೆ, ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ  ಮಾರ್ಚ್ 3ರಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಹಲವಾರು ವರ್ಷಗಳ ಕಾಲ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷರಾಗಿಯೂ ಇನ್ನೋಸೆಂಟ್‌ ಸೇವೆ ಸಲ್ಲಿಸಿದ್ದಾರೆ. 

ತಮಿಳಿನ ಖ್ಯಾತ ಕಾಮಿಡಿ ನಟ ಮೈಲ್ ಸ್ವಾಮಿ ಹೃದಯಾಘಾತದಿಂದ ನಿಧನ

ಮಲಯಾಳಿ ನಿರ್ದೇಶಕ ಜೋಸೆಫ್‌ ನಿಧನ: ತನ್ನ ಮೊದಲ ಚಿತ್ರ ಬಿಡುಗಡೆಯಾಗುವ ಕೆಲವೇ ದಿನಗಳ ಮುಂಚೆ ಮಲಯಾಳಂ ನಿರ್ದೇಶಕ ಜೋಸೆಫ್‌ ಮನು ಜೇಮ್ಸ್‌ (31) ಅನಾರೋಗ್ಯದಿಂದ ಫೆ.24ರ ಶುಕ್ರವಾರ ಮೃತ ಪಟ್ಟಿರುವ ದುರದೃಷ್ಟಕರ ಘಟನೆ ನಡೆದಿದೆ. ಹೆಪಟೈಟಿಸ್‌ ರೋಗದಿಂದ ಬಳಲುತ್ತಿದ್ದ ಜೋಸೆಫ್‌, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿರ್ದೇಶನದ ‘ನ್ಯಾನ್ಸಿ ರಾಣಿ’ ಚಿತ್ರ ಬಿಡುಗಡೆಗೆ ತಯಾರಾಗಿತ್ತು. ಕನ್ನಡ, ಮಲಯಾಳಂ ಹಾಗೂ ಹಿಂದಿ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಜೋಸೆಫ್‌ 2004ರಲ್ಲಿ ಬಾಲನಟನಾಗಿಯೂ ನಟಿಸಿದ್ದರು. ಭಾನುವಾರ ಅವರ ಅಂತ್ಯಕ್ರಿಯೆ ನೇರವೇರಿಸಲಾಗಿದ್ದು ಅನೇಕ ಸಿನಿಮಾ ಗಣ್ಯರು ಜೋಸೆಫ್‌ ಸಾವಿಗೆ ಸಂತಾಪ ಸೂಚಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಕೊಳಕು ಪ್ಯಾಂಟ್‌ ಬಗ್ಗೆ ಮಾತನಾಡಿದ್ರು, ಮೊಮ್ಮಗನ ಸಿನಿಮಾಕ್ಕೆ ಸಮಸ್ಯೆ ತಂದ್ರು: Jaya Bachchan ಬಾಯ್ಕಾಟ್‌ ಆಗ್ತಾರಾ?
ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?