
ನಟಿ ಪ್ರಿಯಾಂಕಾ ಚೋಪ್ರಾ ಸದ್ಯ ಅಮೆರಿಕದ ಸೊಸೆ. ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ (Nick Jonas) ಅವರು ತಮ್ಮ ಪುತ್ರಿ ಮಾಲ್ತಿ ಮೇರಿಯ ಜೊತೆ ಲೈಫ್ ಎಂಜಾಯ್ ಮಾಡುತ್ತಿದ್ದಾರೆ. ಅಮೆರಿಕದ ಪಾಪ್ ಸಿಂಗರ್ ನಿಕ್ ಜೋನಸ್ ಅವರನ್ನು 2018ರಲ್ಲಿ ಮದುವೆಯಾದ ಬಳಿಕ ನಟಿ, ಬಾಲಿವುಡ್ ಜಗತ್ತಿನಿಂದ ದೂರವೇ ಉಳಿದಿದ್ದಾರೆ. ಹಾಲಿವುಡ್ ವೆಬ್ ಸಿರೀಸ್ ಮಾಡುತ್ತಾ, ಅಲ್ಲಿ ಹಲವಾರು ಟಿವಿ ಶೋ, ಸಂದರ್ಶನಗಳು ಹಾಗೂ ಸುತ್ತಾಟಗಳಲ್ಲಿ ನಟಿ ಪ್ರಿಯಾಂಕಾ ಚೋಪ್ರಾ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. 2017ರಲ್ಲಿ, ಹಾಲಿವುಡ್‍ನಲ್ಲಿ ವಿಶ್ವದ ಎರಡನೇ ಅತ್ಯಂತ ಸುಂದರ ಮಹಿಳೆಯಾಗಿ ಪ್ರಿಯಾಂಕಾ ಚೋಪ್ರಾ ಆಯ್ಕೆಯಾಗಿದ್ದರು. ಹಾಲಿವುಡ್ ನಟಿಯರಾದ ಏಂಜಲಿನಾ ಜೋಲಿ, ಎಮ್ಮಾ ವಾಟ್ಸನ್, ಬ್ಲೆಕ್ ಲೈವ್ಲಿ ಹಾಗೂ ಮಿಶೆಲ್ ಒಬಾಮ ಅವರನ್ನು ಹಿಂದಿಕ್ಕಿ ಈ ಸಾಧನೆಗೆ ಪಾತ್ರರಾಗಿದ್ದರು.
2022ರಲ್ಲಿ ಬಾಡಿಗೆ ತಾಯ್ತನದ (Surrogacy) ಮೂಲಕ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ಸದ್ಯ ಬಾಲಿವುಡ್ಗೆ ಬೈ ಬೈ ಹೇಳಿದ್ದಾರೆ. ಸದ್ಯ ನಟಿ ಪ್ರಿಯಾಂಕಾ ಚೋಪ್ರಾ ಯಾವುದೇ ಹಿಂದಿ ಚಿತ್ರದಲ್ಲಿ ನಟಿಸುತ್ತಿಲ್ಲ, ಯಾವುದೇ ಬಾಲಿವುಡ್ ಚಿತ್ರದ ಆಫರ್‌ಅನ್ನು ಅವರು ಒಪ್ಪಿಕೊಂಡಿಲ್ಲ. ಹಾಲಿವುಡ್ ಸಿನಿಮಾ, ಸೀರಿಯಲ್ ಹಾಗೂ ವೆಬ್ ಸಿರೀಸ್‌ನಲ್ಲಿ ಮಾತ್ರ ನಟಿಸುತ್ತಿದ್ದಾರೆ. ತಮಿಳು ಸಿನಿಮಾ ತಮಿಳನ್ (2002)ರ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ನಟಿ, 2000ರಲ್ಲಿ ವಿಶ್ವಸುಂದರಿ ಕಿರೀಟ ಮುಡಿಗೇರಿಸಿಕೊಂಡ ಬಳಿಕ ಸಿನಿಮಾ ಅವಕಾಶವನ್ನು ಪಡೆದರು. ಬಾಲಿವುಡ್ನಲ್ಲಿ ಹೀರೋ: ಲವ್ ಸ್ಟೋರಿ ಆಫ್ ಎ ಸ್ಪೈ ಎಂಬ ಸಿನಿಮಾದ (2003) ಮೂಲಕ ಸಿನಿಮಾ ಜರ್ನಿಯನ್ನು ಶುರು ಮಾಡಿದರು. ಸದ್ಯ ಹಾಲಿವುಡ್ನಲ್ಲಿ ಬಿಜಿಯಾಗಿದ್ದು, ಮಗಳ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಪತಿಯ ಜೊತೆ ಅಮೆರಿಕದಲ್ಲಿ ಸೆಟ್ಲ್ ಆಗಿದ್ದಾರೆ. ಅವರು ಅಲ್ಲಿ ಹೋಟೆಲ್ ಉದ್ಯಮವನ್ನೂ ಆರಂಭಿಸಿದ್ದರು. ಪಾರ್ಟನರ್ ಜೊತೆ ಹೊಂದಾಣಿಕೆ ಆಗದ ಕಾರಣ ಅವರು ಉದ್ಯಮದಿಂದ ಹೊರ ಬಂದರು.
ನಟ ನೋಡಲು ಸುಂದರನಲ್ಲವೆಂದು ಕಿಸ್ ಮಾಡದೇ ಕಥೆ ಬದಲಿಸಲು ಪಟ್ಟು ಹಿಡಿದ ಪ್ರಿಯಾಂಕಾ ಚೋಪ್ರಾ!
ಆಗಾಗ ಹಾಲಿವುಡ್ ಪಾಡ್‌ಕಾಸ್ಟ್ ಮತ್ತು ಸಂದರ್ಶನಗಳಲ್ಲಿ ಭಾಗಿಯಾಗುವ ಪ್ರಿಯಾಂಕಾ ತಮ್ಮ ಲೈಫ್ ಜರ್ನಿ ಬಗ್ಗೆ ಹೇಳಿಕೊಳ್ಳುತ್ತಾರೆ. ಈ ಹಿಂದೆ ಬಾಲಿವುಡ್ ಬಗ್ಗೆ ನಟಿ ಹೇಳಿರುವ ವಿಡಿಯೋ ಒಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪುನಃ ಹಲ್ಚಲ್ ಸೃಷ್ಟಿಸುತ್ತಿದೆ. ಪ್ರಿಯಾಂಕ ಚೋಪ್ರಾ 'ಎಮಿ ಅವಾರ್ಡ್ 2016'ರ ಕಾರ್ಯಕ್ರಮದಲ್ಲಿ ವರದಿಗಾರರ ಜತೆ ಮಾತನಾಡುತ್ತ ಹೇಳಿರುವ ಮಾತೊಂದು ಪುನಃ ವೈರಲ್ ಆಗಿದೆ. ಭಾರತೀಯ ಸಿನಿಮಾಗಳ ಬಗ್ಗೆ ಈಕೆ ಹೇಳಿರುವ ಮಾತುಗಳ ಬಗ್ಗೆ ಟೀಕೆ ಹಾಗೂ ಆಕ್ರೋಶ ವ್ಯಕ್ತವಾಗುತ್ತಿದೆ.
ಅಷ್ಟಕ್ಕೂ ನಟಿ ಹೇಳಿದ್ದೇನೆಂದರೆ, ಬಾಲಿವುಡ್ನ ಎಲ್ಲಾ ಡ್ಯಾನ್ಸ್‌ಗಳಲ್ಲಿ ಎಲ್ಲ ಮೂವ್‌ಮೆಂಟ್‌ಗಳು ಸೇರಿದಂತೆ ಇಂಡಸ್ಟ್ರಿ ಹಿಪ್ಸ್ ಮತ್ತು ಬೂಬ್ಸ್ (ಸೊಂಟ ಮತ್ತು ಸ್ತನಗಳು) ಮೇಲೆ ನಿಂತಿವೆ ಎಂದಿದ್ದರು. ಇವೆರಡು ಪಾರ್ಟ್ ಚೆನ್ನಾಗಿದ್ದರೆ ಪಟ್ಟ ಕಟ್ಟುತ್ತಾರೆ, ಇಲ್ಲದಿದ್ದರೆ ಅವರಿಗೆ ಚಟ್ಟನೇ ಗತಿ ಎನ್ನುವ ಅರ್ಥದಲ್ಲಿ ನಟಿ ಹೇಳಿದ್ದರು. ಹೀಗೆ ಹೇಳುತ್ತಲೇ ಅದರ ಕುರಿತು ಒಂದೆರಡು ಹೆಜ್ಜೆ ಹಾಕಿ ತೋರಿಸಿದ್ದರು. ಈಕೆ ನೀಡಿರುವ ಈ ಹೇಳಿಕೆ ಇದೀಗ ಪುನಃ ಸಾಮಾಜಿಕ ತಾಣಗಳಲ್ಲಿ ಟ್ರೋಲ್ ಆಗುತ್ತಿದೆ. ಬಾಲಿವುಡ್ನಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ನಿಜವೇ. ಆದರೆ ಬಾಲಿವುಡ್ ನಟಿಯೊಬ್ಬಳು ಇಷ್ಟು ವರ್ಷ ಬಾಲಿವುಡ್ನಲ್ಲಿ ಕೆಲಸ ಮಾಡಿದ ಬಳಿಕ ಈ ರೀತಿ ಇಂಡಸ್ಟ್ರಿಯ ಹೆಸರನ್ನು ಕೆಡಿಸುತ್ತಿರುವುದು ಸರಿಯಲ್ಲ ಎಂದು ಹಲವಾರು ಮಂದಿ ಹೇಳುತ್ತಿದ್ದಾರೆ. ಆದರೆ ಕೆಲವರು ನಟಿಯ ಪರವಾಗಿದ್ದು, ಪ್ರಿಯಾಂಕಾ ಏನೂ ತಪ್ಪು ಹೇಳಿಲ್ಲ, ಇರುವ ವಿಷಯವನ್ನೇ ಹೇಳಿದ್ದಾರೆ. ಈಕೆ ಹೇಳಿದ್ದರಲ್ಲಿ ತಪ್ಪೇನಿದೆ ಎನ್ನುತ್ತಿದ್ದಾರೆ. ಇವತ್ತಿನ ನಟಿಯರು ವೇಷ ಭೂಷಣ ನೋಡಿದರೆ ಪ್ರಿಯಾಂಕಾ ಹೇಳಿರುವುದರಲ್ಲಿ ಏನಾದರೂ ತಪ್ಪು ಕಾಣಿಸ್ತಿದೆಯಾ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ಇಷ್ಟು ವರ್ಷ ನೀವೇನು ಮಾಡಿದ್ದು ಇದೇ ಅಲ್ವಾ ಎಂದು ಪ್ರಶ್ನಿಸುತ್ತಿದ್ದಾರೆ.
ನಟರ ಜಾಹೀರಾತುಗಳ ಮೋಡಿಗೆ ಒಳಗಾಗಿ ಅದನ್ನೇ ಬಳಸ್ತೀರಾ? ಈ ವಿಡಿಯೋದಲ್ಲಿದೆ ನೋಡಿ ಭಯಾನಕ ಅಸಲಿಯತ್ತು!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.