
ಮೊಹಾಲಿ (ಸೆ.28) ಖ್ಯಾತ ಗಾಯಕ, ನಟ ರಾಜ್ವೀರ್ ಜವಾಂಡ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಮ್ಮ ರಾಯಲ್ ಎನ್‌ಫೀಲ್ಡ್ ಬೈಕ್ ಮೂಲಕ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಾಜ್ವೀರ್ ತಲೆಗೆ ಹಾಗೂ ದೇಹಕ್ಕೆ ಗಂಭೀರ ಗಾಯವಾಗಿದೆ. 35 ವರ್ಷದ ಗಾಯಕ ರಾಜ್ವೀರ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಫೋರ್ಟಿಸ್ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್ ನೆರವು ನೀಡಲಾಗಿದೆ ಎಂದು ಮೂಲಗಳು ಹೇಳಿವೆ.
ಪಂಜಾಬ್ ಗಾಯಕ, ನಟನಾಗಿರುವ ರಾಜ್ವೀರ್ ಜವಾಂಡ ಹಿಮಾಚಲ ಪ್ರದೇಶ ಪ್ರವಾಸದಲ್ಲಿರುವ ಅಪಘಾತ ಸಂಭವಿಸಿದೆ. ಬಡ್ಡಿ ರಸ್ತ ಮೂಲಕ ವೇಗವಾಗಿ ಸಾಗುತ್ತಿರುವಾಗ ರಸ್ತೆಯಲ್ಲಿ ಏಕಾಏಕಿ ದನ ಅಡ್ಡಬಂದಿದೆ. ಇದರ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್ ಮೇಲಿದ್ದ ಕಾರಣ ಅಪಘಾತದ ತೀವ್ರತೆ ಹೆಚ್ಚಾಗಿದೆ.
ಅಪಘಾತದ ಬೆನ್ನಲ್ಲೇ ಗಂಬೀರವಾಗಿ ಗಾಯಗೊಂಡ ರಾಜ್ವೀರನ ತಕ್ಷಣ ಸಿವಿಲ್ ಆಸ್ಪತ್ರೆಗೆ ದಾಖಲಿಲಾಗಿದೆ. ತಲೆಗೆ ಹಾಗೂ ಬೆನ್ನು ಮೂಳೆಗೆ ಗಂಭೀರವಾಗಿ ಗಾಯವಾಗಿತ್ತು.ಚಿಕಿತ್ಸೆ ವೇಳೆ ರಾಜ್ವೀರ್‌ಗೆ ಹೃದಯಾಘಾತ ಸಂಭವಿಸಿದೆ. ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದ್ದಂತೆ ಸಿವಿಲ್ ಆಸ್ಪತ್ರೆಯಿಂದ ಫೋರ್ಟಿಸ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ರಾಜ್ವೀರ್ ಜವಾಂಡ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ಫೋರ್ಟಿಸ್ ಆಸ್ಪತ್ರೆಯ ತೀವ್ರ ನಿಘಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್ ನೆರವು ನೀಡಲಾಗಿದೆ. ವೈದ್ಯರ ಪ್ರಕಾರ, ರಾಜ್ವೀರ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ವೈದ್ಯರ ತಂಡ ತೀವ್ರ ನಿಘಾವಹಿಸಿದೆ ಎಂದಿದೆ.
ಪಂಜಾಬ್ ಮೂಲದ ಗಾಯಕನಾಗಿರುವ ರಾಜ್ವೀರ್ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಫೋರ್ಟಿಸ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ರಾಜ್ವೀರ್ ಆರೋಗ್ಯ ಕುರಿತು ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ.ಇದೇ ವೇಳೆ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಮದುವೆಯಾಗಿರುವ ರಾಜ್ವೀರ್, ಪಂಜಾಬಿಯಲ್ಲಿ ಸೂಪರ್ ಹಿಟ್ ಹಾಡುಗಳನ್ನು ನೀಡಿದ ಖ್ಯಾತಿ ಪಡೆದಿದ್ದಾರೆ. ಅಪಘಾತಕ್ಕೂ ಮೊದಲು ರಾಜ್ವೀರ್ ತಮ್ಮ ಹೊಸ ಆಲ್ಬಮ್ ಸಾಂಗ್ ಕುರಿತು ಸೋಶಿಯಲ್ ಮೀಡಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.