'ಲೈಗರ್' ಹೀನಾಯ ಸೋಲಿನ ಬಳಿಕ ಕೊನೆಗೂ ಹೊಸ ಸಿನಿಮಾ ಅನೌನ್ಸ್ ಮಾಡಿದ ಪುರಿ ಜಗನ್ನಾಥ್

Published : May 15, 2023, 01:25 PM IST
'ಲೈಗರ್' ಹೀನಾಯ ಸೋಲಿನ ಬಳಿಕ ಕೊನೆಗೂ ಹೊಸ ಸಿನಿಮಾ ಅನೌನ್ಸ್ ಮಾಡಿದ ಪುರಿ ಜಗನ್ನಾಥ್

ಸಾರಾಂಶ

ವಿಜಯ್ ದೇವರಕೊಂಡ ಜೊತೆ 'ಲೈಗರ್' ಹೀನಾಯ ಸೋಲಿನ ಬಳಿಕ ಖ್ಯಾತ ನಿರ್ದೇಶಕ  ಪುರಿ ಜಗನ್ನಾಥ್ ಕೊನೆಗೂ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. 

ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಲೈಗರ್ ಸಿನಿಮಾದ ಹೀನಾಯ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಲೈಗರ್ ಸೋಲು ಪುರಿ ಜಗನ್ನಾಥ್ ಅವರಿಗೆ  ದೊಡ್ಡ ಮಟ್ಟದ ಹಿನ್ನಡೆಯಾಗಿತ್ತು. ವಿಜಯ್ ದೇವರಕೊಂಡ ನಾಯಕನಾಗಿ ನಟಿಸಿದ್ದ ಲೈಗರ್ ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗಿ ಅದ್ದೂರಿಯಾಗಿ ತೆರೆಗೆ ಬಂದಿತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಹೀನಾಯ ಸೋಲು ಕಂಡಿತ್ತು. ಈ ಸೋಲಿನ ಬಳಿಕ ವಿಜಯ್ ದೇವಕೊಂಡ ಮತ್ತು ಪುರಿ ಜಗನ್ನಾಥ್ ಇಬ್ಬರೂ ಹೊಸ ಸಿನಿಮಾ ಅನೌನ್ಸ್ ಮಾಡಿರಲಿಲ್ಲ. ಇತ್ತೀಚಿಗಷ್ಟೆ ವಿಜಯ್ ದೇವರಕೊಂಡ ಹೊಸ ಸಿನಿಮಾ ಮುಹೂರ್ತ ಮಾಡಿಕೊಂಡಿದ್ದರು. ಇದೀಗ ಪುರಿ ಜಗನ್ನಾಥ್ ಕೂಡ ಹೊಸ ಸಿನಿಮಾ ಘೋಷಣೆ ಮಾಡಿದ್ದು 'ಡಬಲ್ ಇಸ್ಮಾರ್ಟ್' ಎಂದು ಟೈಟಲ್ ಇಟ್ಟಿದ್ದಾರೆ. 

ವಿಶೇಷ ಎಂದರೆ ಮತ್ತೆ ನಟ ಉಸ್ತಾದ್ ರಾಮ್ ಪೋತಿನೇನಿ ಜೊತೆ ಸಿನಮಾ ಮಾಡುತ್ತಿದ್ದಾರೆ. ಸೂಪರ್ ಹಿಟ್ ಇಸ್ಮಾರ್ಟ್ ಶಂಕರ್ ಸಿನಿಮಾ ನೀಡಿದ್ದ ಈ ಜೋಡಿ ಮತ್ತೆ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ವಿಶೇಷ ಎಂದರೆ ಇದು ಇಸ್ಮಾರ್ಟ್ ಶಂಕರ್ ಸೀಕ್ವೆಲ್. ಇಸ್ಮಾರ್ಟ್ ಶಂಕರ್ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಡೆಡ್ಲಿ ಕಾಂಬಿನೇಷನ್ ನಾಲ್ಕು ವರ್ಷದ ಬಳಿಕ ಸೀಕ್ವೆಲ್ ಗೆ  ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ.

ನಟ ರಾಮ್ ಪೋತಿನೇನಿ ಜನ್ಮದಿನ ಪ್ರಯುಕ್ತ ಹೊಸ ಸಿನಿಮಾದ ಟೈಟಲ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಈ ಚಿತ್ರಕ್ಕೆ ಡಬಲ್ ಇಸ್ಮಾರ್ಟ್ ಎಂಬ ಶೀರ್ಷಿಕೆ ಫಿಕ್ಸ್ ಮಾಡಲಾಗಿದೆ. ಮುಂದಿನ ವರ್ಷ ಅಂದ್ರೆ 2024‌ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.

'ಲೈಗರ್' ಹೀನಾಯ ಸೋಲು; ನಿರ್ದೇಶಕ ಪುರಿ ಜಗನ್ನಾಥ್‌ಗೆ ಬೆದರಿಕೆ, ಆಡಿಯೋ ಕ್ಲಿಪ್ ವೈರಲ್

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ಡಬಲ್ ಇಸ್ಮಾರ್ಟ್ ಸಿನಿಮಾವನ್ನು ಪುರಿ ಕನೆಕ್ಟ್ಸ್ ನಡಿ ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಕನೆಕ್ಟ್ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

'ಲೈಗರ್' ಬಂಡವಾಳದ ಮೇಲೆ ಅನುಮಾನ; ಇಡಿ ವಿಚಾರಣೆ ಎದುರಿಸಿದ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್

ಡಬಲ್ ಇಸ್ಮಾರ್ಟ್ ಪೋಸ್ಟರ್ ನಲ್ಲಿ ರಾಮ್ ಪೋತಿನೇನಿ ರಕ್ತದ ಗುರುತುಗಳ ತ್ರಿಶೂಲ್ ಹಿಡಿದು ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಇನ್ನು ಉಳಿದಂತೆ ನಾಯಕಿ ಯಾರು ಎನ್ನುವ ವಿಚಾರ ಇನ್ನು ಬಹಿರಂಗವಾಗಿಲ್ಲ. ಕನ್ನಡತಿ ನಭಾ ನಟೇಶ್ ಮತ್ತೆ ಪುರಿ ಜಗನ್ನಾಥ್ ಸಿನಿಮಾದಲ್ಲಿ ಮಿಂಚುತ್ತಾರಾ ಕಾದು ನೋಡಬೇಕಿದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಶಾರುಖ್ ಜೊತೆ ಡಾನ್ಸ್ ನಿರಾಕರಿಸಿದ ವಧು, ಅಸಮಾಧಾನಗೊಂಡ ಫ್ಯಾನ್ಸ್
ಜ್ಯೋತಿಷಿ ವೇಣು ಸ್ವಾಮಿ ಭವಿಷ್ಯ: ಸಮಂತಾ ಬಾಳಲ್ಲಿ ನಿಜವಾಯ್ತು, ಆದ್ರೆ ರಶ್ಮಿಕಾ ಲೈಫಲ್ಲಿ ಸುಳ್ಳಾಗಲಿ ಅಂತಿರೋ ಫ್ಯಾನ್ಸ್!