ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ ಪ್ರಾರಂಭಿಸಿದ ಕಿರಿಕ್ ಸುಂದರಿ ಸದ್ಯ ತೆಲುಗು, ತಮಿಳು ಮತ್ತೆ ಹಿಂದಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತೆಲುಗು ಸಿನಿಮಾರಂಗದಲ್ಲಿ ಸ್ಟಾರ್ ಆಗಿ ಹೊರಹೊಮ್ಮುತ್ತಿದ್ದಂತೆ ರಶ್ಮಿಕಾ ಇದೀಗ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ. ಹಾಗಾಗಿ ಮುಂಬೈ, ಹೈದರಾಬಾದ್, ಚೆನ್ನೈ ಅಂತ ಸದಾ ಓಡಾಡುತ್ತಿರುತ್ತಾರೆ. ಈ ನಡುವೆ ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ರಶ್ಮಿಕಾ ಇದೀಗ ಭಾರತದ ಟಾಪ್ ಆರ್ಥೋಪಿಡಿಕ್ ಭೇಟಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್ಥೋಪಿಡಿಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಪುಷ್ಪ ನಟಿ ಸಮಯ ತೆಗೆದುಕೊಂಡು ವೈದ್ಯರನ್ನು ಭೇಟಿಯಾಗಿದ್ದಾರೆ. ಹೈದರಾಬಾದ್ ನಲ್ಲಿರುವ ಪ್ರಸಿದ್ಧ ಆರ್ಥೋಪಿಡಿಕ್ ಡಾ.ಗುರುವ ರೆಡ್ಡಿ ಅವರ ಆಸ್ಪತ್ರೆಯಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕಂಡಿದ್ದಾರೆ. ವೈದ್ಯರ ಪಕ್ಕ ನಿಂತು ಪೋಸ್ ನೀಡಿರುವ ರಶ್ಮಿಕಾ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ರಶ್ಮಿಕಾ ಅವರನ್ನು ಭೇಟಿಯಾದ ಬಗ್ಗೆ ಸ್ವತಃ ಡಾ.ಗುರುವ ರೆಡ್ಡಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂಡಿನೋವಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಆತಂಕ ಪಡುವ ಅವಶ್ಯಕತೆ ಇಲ್ಲ, ಶೀಘ್ರದಲ್ಲೇ ಗುಣಮುಖ ಆಗುತ್ತಾರೆ ಎಂದು ವೈದ್ಯರು ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಪ್ರಸಿದ್ಧ ಆರ್ಥೊ ರಶ್ಮಿಕಾ ಜೊತೆ ಫೋಟೋ ಶೇರ್ ಮಾಡಿ, ಶ್ರೀವಲ್ಲಿ ನಿನ್ನನ್ನು ಭೇಟಿಯಾಗಿದ್ದಾರೆ. ನಾನು ಅವರ ದೊಡ್ಡ ಅಭಿಮಾನಿ ಎಂದು ಹೇಳಿದ್ದಾರೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಪಾತ್ರ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ. ಅಲ್ಲದೆ ಸದ್ಯದಲ್ಲೇ ಅಲ್ಲು ಅರ್ಜುನ್ ಭುಜದ ನೋವಿನಿಂದ ನನ್ನನ್ನು ಸಂಪರ್ಕ ಮಾಡಬಹುದು ಎಂದು ಕಾಮಿಡಿ ಮಾಡಿದ್ದಾರೆ.
ಮುಂಬೈನಲ್ಲಿ ರಶ್ಮಿಕಾ ಹವಾ; 'ಗುಡ್‌ಬೈ' ಪ್ರಮೋಷನ್‌ನಲ್ಲಿ ಕಾಣಿಸಿಕೊಂಡಿದ್ದು ಹೀಗೆ
ರಶ್ಮಿಕಾ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ಹಿಂದಿಯಲ್ಲಿ ಗುಡ್‌ಬೈ ಸಿನಿಮಾದ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಅಮಿತಾಭ್ ಬಚ್ಚನ್ ಮತ್ತು ನೀನಾ ಗುಪ್ತಾ ಜತೆ ನಟಿಸಿದ್ದಾರೆ. ಅಮಿತಾಭ್-ನೀನಾ ಪುತ್ರಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಟ್ರೈಲರ್ ರಿಲೀಸ್ ಆಗಿದ್ದು ಅಭಿಮಾನಿಗಳ ಹೃದಯ ಗೆದ್ದಿದೆ. ಸದ್ಯ ಈ ಸಿನಿಮಾದ ಪ್ರಮೋಷನ್ ಮಾಡುತ್ತಿದ್ದು ರಶ್ಮಿಕಾ ಮುಂಬೈನಲ್ಲಿ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.
ಏರ್ಪೋರ್ಟ್‌ನಿಂದ ಹೊರಬಂದ ರಶ್ಮಿಕಾ; ಸೆಲ್ಫಿಗಾಗಿ ಮುಗಿಬಿದ್ದ ಲೇಡಿ ಫ್ಯಾನ್ಸ್
ಸೌತ್ ಬ್ಯೂಟಿ ಹಿಂದಿಯಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಇದುವರೆಗೂ ಒಂದು ಹಿಂದಿ ಸಿನಿಮಾ ರಿಲೀಸ್ ಆಗಿಲ್ಲ. ಮಿಷನ್ ಮಜ್ನು ಸಿನಿಮಾ ಮೂಲಕ ಬಾಲಿವುಡ್‌ಗೆ ಎಂಟ್ರಿ ರಶ್ಮಿಕಾ ಇನ್ನು ದೊಡ್ಡ ಪರದೆ ಮೇಲೆ ಮಿಂಚಿಲ್ಲ. ಹಾಗಾಗಿ ಮೊದಲ ಹಿಂದಿ ಸಿನಿಮಾ ರಿಲೀಸ್‌ಗೆ ರಶ್ಮಿಕಾ ಸಖತ್ ಉತ್ಸುಕರಾಗಿದ್ದಾರೆ. ಇನ್ನು ಹಿಂದಿಯಲ್ಲಿ ರಶ್ಮಿಕಾ ಅಭಿಷೇಕ್ ಬಚ್ಚನ್ ಜೊತೆ ನಟಿಸುತ್ತಿದ್ದಾರೆ. ಜೊತೆಗೆ ಟೈಗರ್ ಶ್ರಾಫ್ ಮುಂದಿನ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತೆಲುಗು, ತಮಿಳಿಗಿಂತ ರಶ್ಮಿಕಾ ಹಿಂದಿಯಲ್ಲಿ ಬ್ಯುಸಿಯಾಗಿದ್ದಾರೆ.