ಮತ್ತೆ ಒಂದಾಗಿದೆ ಬುಟ್ಟಾ ಬೊಮ್ಮಾದಿಂದಲೇ ಮೋಡಿ ಮಾಡಿದ ಅಲ್ಲು -ತ್ರಿವಿಕ್ರಿಮ ಜೋಡಿ!

By Shruthi Krishna  |  First Published Jul 3, 2023, 12:35 PM IST

ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಮತ್ತೆ ಒಂದಾಗಿದ್ದಾರೆ. ಸೂಪರ್ ಹಿಟ್ ಅಲ ವೈಕುಂಠಪುರಮುಲೋ ನೀಡಿರುವ ಈ  ಜೋಡಿ ಮತ್ತೆ ಒಂದಾಗಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. 


ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಸದ್ಯ ಪುಷ್ಪ-2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಪುಷ್ಪ-2 ಬಳಿಕ ಅಲ್ಲು ಅರ್ಜುನ್ ಮತ್ತೆ ಯಾರ ಜೊತೆ ಸಿನಿಮಾ ಮಾಡುತ್ತಾರೆ, ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಆ ಕುತೂಹಲಕ್ಕೆ ತೆರೆ ಎಳೆದಿದ್ದಾರೆ ಅಲ್ಲು ಅರ್ಜುನ್. ಪುಷ್ಪ-2 ಸಿನಿಮಾ ಶೂಟಿಂಗ್ ಹಂತದಲ್ಲೇ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದು ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಹೌದು ಬನ್ನಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡಿದ್ದಾರೆ. ಅಲ್ಲು ಅರ್ಜುನ್ ಮತ್ತೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಜೊತೆ ಕೈ ಜೋಡಿಸಿದ್ದಾರೆ. 

ಟಾಲಿವುಡ್‌ನಲ್ಲಿ ಹಿಟ್ ಜೋಡಿ ಎನಿಸಿಕೊಂಡಿರುವ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಮತ್ತೆ ಒಂದಾಗುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಈಗಾಗಲೇ 'ಜುಲಾಯಿ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲ ವೈಕುಂಠಪುರಮುಲೋ’ ಅಂತಹ ಮೆಗಾ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಈ ಕಾಂಬೋ ನಾಲ್ಕನೇ ಚಿತ್ರಕ್ಕೆ ಸಜ್ಜಾಗಿದ್ದಾರೆ. ಬಹಳ ದಿನಗಳಿಂದಲೂ ಅಲ್ಲು-ತ್ರಿವಿಕ್ರಮ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದೀಗ ಈ ಗಾಸಿಪ್ ಗೆ ಅಧಿಕೃತ ಮುದ್ರೆ ಬಿದ್ದಿದೆ.

Tap to resize

Latest Videos

undefined

ಅಲ್ಲು ಅರ್ಜುನ್ ಮೊದಲ ಗರ್ಲ್ ಫ್ರೆಂಡ್ ಇವರೇ: ತೆಲುಗು ಸೂಪರ್ ಸ್ಟಾರ್ ಬಿಚ್ಚಿಟ್ಟ ಸತ್ಯ ವೈರಲ್!

ಗುರು ಪೂರ್ಣಿಮಾ ದಿನದ ಅಂಗವಾಗಿ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ಹೊಸ ಸಿನಿಮಾ ಅನೌನ್ಸ್ ಆಗಿದೆ. ಪ್ಯಾನ್-ಇಂಡಿಯಾ ಮಟ್ಟದಲ್ಲಿ ತೆರೆ ಕಾಣಲಿದ್ದು, ಅದಕ್ಕೆ ಬೇಕಾದ ಎಲ್ಲಾ ತಯಾರಿ ಕೂಡ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅಲ್ಲು ಅರ್ಜುನ್ ಪುಷ್ಪ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿರುವ ಅಲ್ಲು ಅರ್ಜುನ್ ಮತ್ತೆ ತ್ರಿವಿಕ್ರಮ್ ಜೊತೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿದ್ದಾರೆ.  

ಚಿತ್ರೀಕರಣ ಮುಗಿಸಿ ವಾಪಾಸ್ ಆಗುತ್ತಿದ್ದ 'ಪುಷ್ಪ-2' ಕಲಾವಿದರ ಬಸ್ ಅಪಘಾತ

ಅಲ ವೈಕುಂಠಪುರಮುಲೂ ಸಿನಿಮಾದಂತಹ ಭರ್ಜರಿ ಹಿಟ್ ಕೊಟ್ಟಿರುವ ಹಾರಿಕಾ ಮತ್ತು ಹಾಸನ್ ಕ್ರಿಯೇಷನ್ಸ್  ಹಾಗೂ ಗೀತಾ ಆರ್ಟ್ಸ್ ಬ್ಯಾನರ್ ನಡಿಯಲ್ಲಿಯೇ ಅಲ್ಲು ಅರ್ಜುನ್ ಹಾಗೂ ತ್ರಿವಿಕ್ರಮ್ ನಾಲ್ಕನೇ ಸಿನಿಮಾ ತಯಾರಾಗಲಿದೆ. ಈಗಾಗಲೇ ಸೂಪರ್ ಹಿಟ್ ಜೋಡಿ ಎನಿಸಿಕೊಂಡಿರುವ ಇವರಿಬ್ಬರು ಮತ್ತೆ ಒಂದಾಗಿರುವುದು ಭಾರೀ ನಿರೀಕ್ಷೆ ಹೆಚ್ಚಿಸಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಅಪ್ ಡೇಟ್ ಕೊಡಲಿದೆ. ಅಲ್ಲಿವರಗೂ ಕಾಯಲೇ ಬೇಕು. 

click me!