
'ಅಲಾ ವೈಕುಂಠಪುರಮುಲೋ' ಚಿತ್ರದ ನಂತರ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಅವರ ಬಹುನಿರೀಕ್ಷಿತ ಚಿತ್ರ 'ಪುಷ್ಪ: ದಿ ರೈಸ್' (Pushpa: The Rise) ಚಿತ್ರದ ಒಂದೊಂದು ಅಪ್ಡೇಟ್‌ಗಳು ಮಿಲಿಯನ್ಸ್‌ಗಟ್ಟಲೆ ವೀವ್ಸ್ ಪಡೆದು ಅಭಿಮಾನಿಗಳ ಕಾತುರವನ್ನು ಕ್ಷಣ ಕ್ಷಣಕ್ಕೂ ಹೆಚ್ಚಿಸುತ್ತಿದೆ. ಇದೇ ಡಿಸೆಂಬರ್ 17 ರಂದು ಬಿಡುಗಡೆಯಗಲಿರುವ ಈ ಚಿತ್ರದ ಟ್ರೇಲರ್ (Trailer) ಇಂದು ಬಿಡುಗಡೆಯಾಗಿದೆ. ಮೈತ್ರಿ ಮೂವೀ ಮೇಕರ್ಸ್ ಸಂಸ್ಥೆ (Mythri Movie Makers) ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಅಲ್ಲು ಅರ್ಜುನ್ ರಕ್ತ ಚಂದನ ಕಳ್ಳಸಾಗಾಣಿಕೆ ಮಾಡುವ ಲಾರಿ ಚಾಲಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶ್ರೀವಲ್ಲಿಯಾಗಿ ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ (Rashmika Mandanna) ಅಲ್ಲು ಅರ್ಜುನ್‌ಗೆ ಜೋಡಿಯಾಗಿ ನಟಿಸಿದ್ದಾರೆ. ಸುಕುಮಾರ್ (Sukumar) ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್‌ರ ಗೆಟಪ್ ಬಾಡಿ ಲಾಂಗ್ವೇಜ್ ನೋಡಿದರೆ ನೈಜ ಲಾರಿ ಡ್ರೈವರ್‌ನಂತೆ ಕಂಡುಬರುತ್ತಿದ್ದು, ಪ್ರತಿಯೊಂದು ಪಾತ್ರದ ಲುಕ್ ಕೂಡ ವಿಭಿನ್ನವಾಗಿ ಮೂಡಿ ಬಂದಿದೆ. ಕನ್ನಡ ಡಾಲಿ ಧನಂಜಯ್ (Dolly Dhananjay) 'ಜಾಲಿ' ಹೆಸರಿನ ಪಾತ್ರ ನಿರ್ವಹಿಸಿದ್ದಾರೆ. ಇನ್ನೂ ಮಂಗಲಮ್ ಶ್ರೀನು ಹೆಸರಿನ ಪಾತ್ರದಲ್ಲಿ ನಟ ಸುನೀಲ್ (Sunil) ಕಾಣಿಸಿಕೊಳ್ಳುತ್ತಿದ್ದಾರೆ. ದಾಕ್ಷಾಯಿಣಿ ಪಾತ್ರದಲ್ಲಿ ಅನಸೂಯ ಭಾರಧ್ವಾಜ್ (Anasuya Bharadwaj) ಅಭಿನಯಿಸುತ್ತಿದ್ದು, ಮಲಯಾಳಂ ನಟ ಫಾಹದ್ ಫಾಸಿಲ್ (Fahadh Faasil) ಮುಖ್ಯ ಖಳ ನಾಯಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Pushpa Movie: ಟ್ರೇಲರ್ ದಿನಾಂಕದ ಜೊತೆಗೆ ವಿಡಿಯೋ ತುಣುಕನ್ನು ಹಂಚಿಕೊಂಡ ಅಲ್ಲು ಅರ್ಜುನ್
ಜೊತೆಗೆ ಟಾಲಿವುಡ್ ವಿಲನ್ ಜಗಪತಿ ಬಾಬು (Jagapati Babu), ಪ್ರಕಾಶ್ ರಾಜ್ (Prakash Raj), ವೆನ್ನೆಲ್ಲಾ ಕಿಶೋರ್ ಸೇರಿದಂತೆ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು, ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್ (Devi Sri Prasad) ಸಂಗೀತ ನಿರ್ದೇಶನವಿದೆ. ಚಿತ್ರದ ಹಾಡುಗಳು ಈಗಾಗಲೇ ಎಲ್ಲಾ 5 ಭಾಷೆಯಲ್ಲಿ ಮಿಲಿಯನ್ ಗಟ್ಟಲೆ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಮಿರೊಸ್ಲಾವ್ ಬ್ರೊಜೆಕ್‌ರ ಕ್ಯಾಮರಾ ಕೈಚಳಕ, ಕಾರ್ತಿಕ ಶ್ರೀನಿವಾಸ್ ಅವರ ಎಡಿಟಿಂಗ್‌ನಲ್ಲಿ ಚಿತ್ರದ ದೃಶ್ಯ ಅದ್ಭುತವಾಗಿ ಮೂಡಿ ಬಂದಿದೆ. ಇದೇ ಡಿಸೆಂಬರ್ 17 ರಂದು ತೆಲುಗು ಜೊತೆಗೆ ಕನ್ನಡ, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ 'ಪುಷ್ಪ' ತೆರೆಗೆ ಬರಲಿದೆ.
ವಿಶೇಷವಾಗಿ ತೆಲುಗಿನ ಖ್ಯಾತ ನಟಿ ಸಮಂತಾ (Samantha) ಈ ಚಿತ್ರದ ಐಟಂ ಸಾಂಗ್ಗೆ ಸೊಂಟ ಬಳುಕಿಸಲಿದ್ದಾರೆ. ಹೈದರಾಬಾದ್‌ನ ರಾಮೋಜಿ ಫಿಲಂ ಸಿಟಿಯಲ್ಲಿ ಅದ್ಧೂರಿ ಸೆಟ್‌ನಲ್ಲಿ ಹಾಡಿನ ಚಿತ್ರೀಕರಣ ನಡೆದಿದೆ. ಈ ಬಗ್ಗೆ ಚಿತ್ರತಂಡ ಟ್ವೀಟರ್‌ನಲ್ಲಿ, 'ಈ ವರ್ಷದ ರಾಕಿಂಗ್ ಹಾಡಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ಸಮಂತಾ ಪ್ರಭು ದೈತ್ಯಾಕಾರದ ಸೆಟ್‌ನಲ್ಲಿ ಹೆಜ್ಜೆ ಹಾಕಿರುವುದನ್ನು ಚಿತ್ರೀಕರಿಸಲಾಗಿದೆ. ಶೀಘ್ರದಲ್ಲಿಯೇ ಈ ವರ್ಷದ ರಾಕಿಂಗ್ ಹಾಡನ್ನು ನೋಡಲು ಸಿದ್ಧರಾಗಿ' ಎಂದು ಕ್ಯಾಪ್ಷನ್ ಬರೆದು ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದರು. ಈ ಪೆಪ್ಪಿ ಹಾಡಿಗೆ ಗಣೇಶ್ ಆಚಾರ್ಯ (Ganesh Acharya) ಮತ್ತು ದೇವಿ ಶ್ರೀ ಪ್ರಸಾದ್ ನೃತ್ಯ ಸಂಯೋಜಿಸಿದ್ದಾರೆ.
Item Song: 'ಪುಷ್ಪ' ಚಿತ್ರದ ಹಾಡಿಗೆ ಅಲ್ಲು ಅರ್ಜುನ್ ಜೊತೆ ಸೊಂಟ ಬಳುಕಿಸಲಿದ್ದಾರೆ ಸಮಂತಾ
ಇನ್ನು 'ಪುಷ್ಪ' ಚಿತ್ರದ ಟ್ರೇಲರ್ ಇಂದು ಸಂಜೆ 6 ಗಂಟೆ 03 ನಿಮಿಷಕ್ಕೆ ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಚಿತ್ರತಂಡ ಅನಿರೀಕ್ಷಿತ ತಾಂತ್ರಿಕ ಸಮಸ್ಯೆಗಳಿಂದಾಗಿ ಇಂದು ಸಂಜೆ 6 ಗಂಟೆ 03 ನಿಮಿಷಕ್ಕೆ 'ಪುಷ್ಪ' ಟ್ರೇಲರ್ ರಿಲೀಸ್ ಮಾಡಲು ಸಾಧ್ಯವಿಲ್ಲ, ವಿಳಂಬಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಚಿತ್ರತಂಡ ಟ್ವೀಟ್ ಮಾಡಿತ್ತು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.