ಬಾಲಿವುಡ್ ನಟನಿಗೆ ಜೋಡಿಯಾದ ರಾಧಿಕಾ ಕುಮಾರಸ್ವಾಮಿ; 7 ಭಾಷೆಯಲ್ಲಿ ಬರ್ತಿದೆ ಹೊಸ ಸಿನಿಮಾ

Published : May 15, 2023, 12:50 PM IST
ಬಾಲಿವುಡ್ ನಟನಿಗೆ ಜೋಡಿಯಾದ ರಾಧಿಕಾ ಕುಮಾರಸ್ವಾಮಿ; 7 ಭಾಷೆಯಲ್ಲಿ ಬರ್ತಿದೆ ಹೊಸ ಸಿನಿಮಾ

ಸಾರಾಂಶ

ಬಾಲಿವುಡ್ ನಟನ ಜೊತೆ ಕನ್ನಡದ ನಟಿ ರಾಧಿಕಾ ಕುಮಾರಸ್ವಾಮಿ ಸಿನಿಮಾ ಮಾಡುತ್ತಿದ್ದಾರೆ. ಸಪ್ತಭಾಷೆಯಲ್ಲಿ ಹೊಸ ಸಿನಿಮಾ ಮೂಡಿ ಬರುತ್ತಿದ್ದು ಅಜಾಗ್ರತ ಎಂದು ಟೈಟಲ್ ಇಡಲಾಗಿದೆ. 

ಸ್ಯಾಂಡಲ್‌ವುಡ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಮತ್ತೆ ಸಿನಿಮಾಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಅಪರೂಪಕ್ಕೆ ಅಭಿಮಾನಿಗಳ ಮುಂದೆ ಬರುವ ರಾಧಿಕಾ ಇದೀಗ ಮತ್ತೊಂದು ಹೊಸ ಸಿನಿಮಾ ಪ್ರಾರಂಭಿಸಿದ್ದಾರೆ. ಈಗಾಗಲೇ ಅದ್ದೂರಿ ಮುಹೂರ್ತ ಕೂಡ ನೆರವೇರಿದ್ದು ಚಿತ್ರೀಕರಣ ಪ್ರಾರಂಭವಾಗಿದೆ. ಮುಹೂರ್ತ ಫೋಟೋಗಳು ವೈರಲ್ ಆಗಿವೆ. ಅಂದಹಾಗೆ ರಾಧಿಕಾ ಈ ಬಾರಿ ಬಾಲಿವುಡ್ ನಟನ ಜೊತೆ ನಟಿಸುತ್ತಿದ್ದಾರೆ. ಹೌದು ರಾಧಿಕಾ ಹೊಸ ಸಿನಿಮಾ ಪ್ರಾರಂಭವಾಗಿದ್ದು ಚಿತ್ರಕ್ಕೆ ಅಜಾಗ್ರತ ಎಂದು ಟೈಟಲ್ ಇಡಲಾಗಿದೆ. 

ಅಜಾಗ್ರತ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು.  ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ  ಈ ಚಿತ್ರಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಅಂದಹಾಗೆ ರಾಧಿಕಾ ಜೊತೆ ನಾಯಕನಾಗಿ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಇಬ್ಬರೂ ಜೊತೆಯಾಗಿ ಸಿನಿಮಾ ಮಾಡುತ್ತಿದ್ದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಇನ್ನು ಉಳಿದಂತೆ ಈ ಸಿನಿಮಾದಲ್ಲಿ ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Radhika Kumaraswamy: ಏಳು ಭಾಷೆಗಳಲ್ಲಿ ಏಕಕಾಲದಲ್ಲಿ ನಾಯಕಿ- ಏನಿದು ಹೊಸ ಸುದ್ದಿ?

ಅಜಾಗ್ರತ ಸಿನಿಮಾ ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ. ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ವಿಶೇಷ ಎಂದರೆ ಏಳು ಭಾಷೆಗಳಲ್ಲೂ ಈ ಚಿತ್ರ ಬರಲಿದ್ದು ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿದೆ ಎಂದು ಸಿನಿಮಾತಂಡ ಬಹಿರಂಗ ಪಡಿಸಿದೆ. 

'ಅಘೋರಿ'ಯಾಗಿ ಬಂದ ರಾಧಿಕಾ: 'ಭೈರಾದೇವಿ' ಲುಕ್'ಗೆ ಫ್ಯಾನ್ಸ್ ಫಿದಾ

ರಾಧಿಕಾ ಕೊನೆಯದಾಗಿ ರವಿ ಬೊಪಣ್ಣ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದರು. ರಾಧಿಕಾ ನಟನೆಯ ಯಾವ ಸಿನಿಮಾಗಳು ಕೂಡ ಹೇಳಿಕೊಳ್ಳುವಂತ ಸಕ್ಸಸ್ ಕಾಣುತ್ತಿಲ್ಲ. ಹಾಗಾಗಿ ದೊಡ್ಡ ಬ್ರೇಕ್‌ಗಾಗಿ ರಾಧಿಕಾ ಎದುರು ನೋಡುತ್ತಿದ್ದಾರೆ. ಸದ್ಯ ಅಜಾಗ್ರತ ಮೂಲಕ ಬರ್ತಿರುವ ರಾಧಿಕಾಗೆ ಈ ಸಿನಿಮಾ ಸಕ್ಸಸ್ ತಂದುಕೊಡುತ್ತಾ ಎಂದು ಕಾದುನೋಡಬೇಕಿದೆ. ಸದ್ಯ ಚಿತ್ರೀಕರಣ ಪ್ರಾರಂಭವಾಗಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?