ಅಶ್ಲೀಲ ವಿಡಿಯೋ ಹಗರಣದಲ್ಲಿ ಸಿಲುಕಿರುವ ನಟಿ ಶಿಲ್ಪಾ ಶೆಟ್ಟಿಯವರ ಪತಿ, ಉದ್ಯಮಿ ರಾಜ್ ಕುಂದ್ರಾ ಮೊದಲ ಬಾರಿಗೆ ಈ ಕೇಸ್ನ ಕುರಿತು ಮೌನ ಮುರಿದಿದ್ದಾರೆ. ಅವರು ಹೇಳಿದ್ದೇನು?
ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಅವರು ಸದ್ಯ ಸುದ್ದಿಯಲ್ಲಿ ಇರುವುದು ಮಾಸ್ಕ್ ಮ್ಯಾನ್ ಎಂದೇ. ಅಶ್ಲೀಲ ವಿಡಿಯೋ ಹಗರಣದಲ್ಲಿ ಸಿಲುಕಿ ಜೈಲುಪಾಲಾಗಿದ್ದ ಇವರು, ಈಗ ಎಲ್ಲಿ ಹೋದರೂ ಮಾಸ್ಕ್ ಹಾಕಿಕೊಂಡೇ ಓಡಾಡುತ್ತಿದ್ದಾರೆ. ಇದು 2021ರಲ್ಲಿ ನಡೆದ ಘಟನೆ. ಉದ್ಯಮಿ ರಾಜ್ ಕುಂದ್ರಾ ನೀಲಿ ಚಿತ್ರ (porn film) ಕೇಸ್ನಲ್ಲಿ ಸಿಲುಕಿ ಬಿದ್ದಿದ್ದರು. ನಟಿಯರನ್ನು ಮತ್ತು ಮಾಡೆಲ್ಗಳನ್ನು ಬಳಸಿಕೊಂಡು ರಾಜ್ ಕುಂದ್ರಾ ಅವರು ನೀಲಿ ಚಿತ್ರಗಳನ್ನು ತಯಾರಿಸುತ್ತಿದ್ದರು ಎಂಬುದಕ್ಕೆ ಪೊಲೀಸರು ಹಲವು ಸಾಕ್ಷ್ಯಗಳನ್ನು ಒದಗಿಸಿದ್ದರು. ಬ್ಲೂ ಫಿಲ್ಮ್ ಆರೋಪದ ಮೇಲೆ ಅವರು 63 ದಿನಗಳವರೆಗೆ ಜೈಲಿನಲ್ಲಿ ಇದ್ದರು. ನೀಲಿ ಚಿತ್ರಗಳ ನಿರ್ಮಾಣ ದಂಧೆಯಲ್ಲಿ ತೊಡಗಿದ್ದ ಆರೋಪವನ್ನು ಇಂದಿಗೂ ರಾಜ್ ಕುಂದ್ರಾ ಇಂದಿಗೂ ಎದುರಿಸುತ್ತಿದ್ದಾರೆ. ‘ನಾನು ಮಾಡಿದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕದ ಸಿನಿಮಾ ಮಾತ್ರ’ ಎಂದು ರಾಜ್ ಕುಂದ್ರಾ ಹೇಳಿಕೆ ನೀಡಿದ್ದರು. ತಾವು ಬ್ಲೂಫಿಲ್ಮ್ ಮಾಡುವುದನ್ನು ಅವರು ಒಪ್ಪಿಕೊಂಡಿರಲಿಲ್ಲ. ಆದರೆ ಈ ಪ್ರಕರಣದಲ್ಲಿ ಹಲವು ನಟಿಯರ ಜೊತೆ ಖುದ್ದು ಶಿಲ್ಪಾ ಶೆಟ್ಟಿಯವರ (Shilpa Shetty) ಹೆಸರೂ ಥಳಕು ಹಾಕಿಕೊಂಡಿತ್ತು.
ಇದಾದ ಬಳಿಕ ಕೆಲ ತಿಂಗಳು ರಾಜ್ ಕುಂದ್ರಾ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ನಂತರ ಗಣೇಶೋತ್ಸವದ ವೇಳೆ ಕಾಣಿಸಿಕೊಂಡರೂ ಮಾಸ್ಕ್ ಧರಿಸಿಯೇ ಓಡಾಡುತ್ತಿದ್ದರು. ಇದೀಗ ಮೊದಲೇ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು ಆಗಲೂ ಮಾಸ್ಕ್ ಧರಿಸಿ ಬಂದಿದ್ದಾರೆ. ಈ ವಿಡಿಯೋದಲ್ಲಿ ಅವರು ಸ್ಟ್ಯಾಂಡ್-ಅಪ್ ಕಾಮಿಡಿ ಮಾಡುತ್ತಿದ್ದಾರೆ. ಕಪ್ಪು ಬಣ್ಣದ ಜಂಪ್ಸ್ಯೂಟ್ ಹಾಕಿ ಶೋಗೆ ಬಂದ ರಾಜ್ ಕುಂದ್ರಾ ಜೊತೆ ಸಾಕಷ್ಟು ಬಾಡಿಗಾರ್ಡ್ಸ್ ಇದ್ದರು. ಮುಖಕ್ಕೆ ಮಾಸ್ಕ್ ಹಾಕಿದ್ದರಿಂದ ತಮ್ಮನ್ನು ತಾವು ಅವರು ಪರಿಚಯಿಸಿಕೊಂಡರು. ‘ನಾನು ರಾಜ್ ಕುಂದ್ರಾ. ಮಾಸ್ಕ್ ಮ್ಯಾನ್ ಎಂದೇ ಫೇಮಸ್. ಶಿಲ್ಪಾ ಶೆಟ್ಟಿ ಪತಿ ಅಂತಲೂ ಜನಪ್ರಿಯತೆ ಪಡೆದಿದ್ದೇನೆ’ ಎಂದರು.
ಆರಂಭದಲ್ಲಿ ಅವರು ನಾನು ಸೆಕ್ಸ್ ಜೋಕ್ಸ್ ಹೇಳುತ್ತೇನೆ. ಯಾರಿಗಾದರೂ ಕೇಳಲು ಇಷ್ಟವಿಲ್ಲದಿದ್ದರೆ ಸ್ವಲ್ಪ ಹೊತ್ತು ಹೊರಗೆ ಹೋಗಬಹುದು ಎಂದರು. ಆದರೆ ಅಲ್ಲಿದ್ದ ಸಭಿಕರು ಒಬ್ಬರೂ ಎದ್ದೇಳಲಿಲ್ಲ! ಇದನ್ನು ನೋಡಿ ರಾಜ್ ಕುಂದ್ರಾ ಅಬ್ಬಬ್ಬಾ ಒಬ್ಬರೂಹೋಗಿಲ್ವಾ, ನೀವೆಲ್ಲಾ ವಿಕೃತ ಮನಸ್ಸಿನವರು ಎಂದು ತಮಾಷೆ ಮಾಡಿದರು. ನಂತರ ತಮ್ಮ ಜೀವನದ ಕೆಲವೊಂದು ವಿಷಯಗಳ ಬಗ್ಗೆ ಅವರು ಮಾತನಾಡಿದರು. 18 ನೇ ವಯಸ್ಸಿನಲ್ಲಿ ಲಂಡನ್‌ನಲ್ಲಿ ಕ್ಯಾಬ್ ಓಡಿಸುವ ಮೂಲಕ ತನ್ನ ವೃತ್ತಿಜೀವನವನ್ನು ಹೇಗೆ ಪ್ರಾರಂಭಿಸಿದೆ ಎಂದು ಅವರು ಹೇಳಿದ ರಾಜ್ ಕುಂದ್ರಾ, 21ನೇ ವಯಸ್ಸಿಗೆ ಸಾಮ್ರಾಜ್ಯ ಸ್ಥಾಪಿಸಿದೆ ಎಂದರು. 'ನಾನು ಯಾವಾಗಲೂ ಬಟ್ಟೆಗಳನ್ನು ಹಾಕುವ ಕೆಲಸವನ್ನು ಮಾಡಿದ್ದೇನೆ, ಅವುಗಳನ್ನು ತೆಗೆಯುವುದಿಲ್ಲ' ಎಂದು ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿಭಿನ್ನ ರೀತಿಯ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಇದು ಅಶ್ಲೀಲ ಸಿನಿಮಾ ನಿರ್ಮಾಣದ ಪ್ರಕರಣದ ಕುರಿತು ಹೇಳಿದ ಮಾತು ಎಂದು ಅನೇಕರು ಅಭಿಪ್ರಾಯಪಡಲಾಗುತ್ತಿದೆ.
ರಾಜ್ ಕುಂದ್ರಾ ಮಾಸ್ಕ್ ಧರಿಸುವ ವಿಚಾರವನ್ನು ಅನೇಕರು ಟೀಕೆ ಮಾಡುತ್ತಿದ್ದಾರೆ. ‘ಧೈರ್ಯವಿದ್ದರೆ ಮಾಸ್ಕ್ ತೆಗೆದು ಬನ್ನಿ’ ಎಂದು ಅವರಿಗೆ ಸವಾಲು ಹಾಕಿದ್ದಾರೆ. ಇದಕ್ಕೆ ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅಂದಹಾಗೆ ಸದ್ಯ ರಾಜ್ ಕುಂದ್ರಾ ಇವರು, ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ.
ಫ್ರೀಯಾಗಿ ಐಸ್ಕ್ರೀಂ ತಿಂದ ನಟಿ ಶೆರ್ಲಿನ್: ಥೂ ನಿನ್ ಜನ್ಮಕ್ಕೆ ಎಂದು ಮಂಚದ ವಿಷ್ಯ ಎಳೆದುತಂದ ನೆಟ್ಟಿಗರು!