ಗಂಡ ಆದಿಲ್ ಖಾನ್ ದುರ್ರಾನಿಯ ಖಾಸಗಿ ವಿಡಿಯೋ ಬಹಿರಂಗಗೊಳಿಸಿದ ರಾಖಿ ಸಾವಂತ್ಗೆ ಕೋರ್ಟ್ ಶಾಕ್ ನೀಡಿದ್ದು, ಯಾವುದೇ ಕ್ಷಣ ಅರೆಸ್ಟ್ ಮಾಡಬಹುದಾಗಿದೆ. ಆಗಿದ್ದೇನು?
ರಾಖಿ ಸಾವಂತ್ ಮತ್ತು ಆದಿಲ್ ಖಾನ್ ಜೋಡಿಯ ವಿಷಯ ಕಳೆದೊಂದು ವರ್ಷದಿಂದ ಸಿಕ್ಕಾಪಟ್ಟೆ ಸದ್ದು ಮಾಡುತ್ತಲೇ ಇದೆ. ಒಂದಾದ ಮೇಲೊಂದರಂತೆ ನಾಟಕೀಯ ಬೆಳವಣಿಗೆಗಳು ಈ ಜೋಡಿಯ ನಡುವೆ ನಡೆಯುತ್ತಲೇ ಇದೆ. ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ನಟಿ ರಾಖಿ ಸಾವಂತ್ (Rakhi Sawant) ಮತ್ತು ಆದಿಲ್ ಖಾನ್ ದುರ್ರಾನಿ ಅವರ ಮದುವೆಯ ಕಥೆ ಸಿನಿಮಾಕ್ಕಿಂತಲೂ ಕುತೂಹಲವಾಗಿದೆ. ಮೈಸೂರಿನ ಯುವಕ ಆದಿಲ್ ಖಾನ್ ಮದುವೆಯನ್ನು ನಿರಾಕರಿಸಿದ್ದು, ರಾಖಿ ರಂಪಾಟ ಮಾಡಿದ್ದು, ಕೊನೆಗೂ ಆದಿಲ್ ಮದುವೆಯನ್ನು ಒಪ್ಪಿಕೊಂಡಿದ್ದು ಎಲ್ಲವೂ ಯಾವ ಸಿನಿಮಾ ಕಥೆಗಿಂತಲೂ ಭಿನ್ನವಾಗಿರಲಿಲ್ಲ. ಎಲ್ಲವೂ ಸುಖಾಂತ್ಯಗೊಂಡಿತು ಎನ್ನುವಾಗಲೇ ಆದಿಲ್ ತಮಗೆ ಮೋಸ ಮಾಡುತ್ತಿದ್ದಾರೆ, ಹಲ್ಲೆ ಮಾಡಿದ್ದಾರೆ, ಇನ್ನೊಬ್ಬಳ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ, ಆದಿಲ್‌ಗಾಗಿ ಇಸ್ಲಾಂಗೆ ಮತಾಂತರ ಮಾಡಿಕೊಂಡಿರುವೆ. ನಾನು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡು ಆದಿಲ್‌ನ ಮದುವೆ ಆಗಿದ್ದೇನೆ ಎಂದೆಲ್ಲಾ ಆರೋಪಿಸಿದ್ದ ರಾಖಿ ಕೊನೆಗೆ ದೂರು ಕೊಟ್ಟರು. ಇದರಿಂದ ಆದಿಲ್ (Adil Khan Durrani) ವಿರುದ್ಧ ಎಫ್ಐಆರ್ ದಾಖಲಾಗಿದ್ದು ಅವರು ಜೈಲಿಗೆ ಹೋದದ್ದು, ನಂತರ ಅವರು ಬಿಡುಗಡೆಗೊಂಡ ಬಳಿಕ ಪರಸ್ಪರ ದೋಷಾರೋಪ ಮಾಡುತ್ತಾ ಪತ್ರಿಕಾಗೋಷ್ಠಿ ಮಾಡಿರುವುದು ಎಲ್ಲರಿಗೂ ಗೊತ್ತಿರುವ ವಿಷಯವೇ.
ಹೀಗೆ ಪ್ರಚಾರಕ್ಕಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಆಡುತ್ತಿರುವ ರಾಖಿ ಸಾವಂತ್ ಅವರು ಈಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಏಕೆಂದರೆ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಪತಿ ಆದಿಲ್ ಖಾನ್ ದುರ್ರಾನಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಂದಿದೆ. ಆದಿಲ್ ಅವರ ಖಾಸಗಿ ವಿಡಿಯೋವನ್ನು ರಾಖಿ ವೈರಲ್ ಮಾಡಿದ್ದರು. ಈ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ರಾಖಿ ಅವರಿಗೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಹೀಗಾಗಿ ಯಾವ ಕ್ಷಣದಲ್ಲಾದರೂ ರಾಖಿ ಬಂಧನಕ್ಕೆ ಒಳಗಾಗುತ್ತಾರಾ ಎಂಬ ಚರ್ಚೆಗಳು ಎದ್ದಿವೆ. ರಾಖಿ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ.
ಪ್ರಧಾನಿ ಮೋದಿಗೇ ಯೋಗ ಹೇಳಿಕೊಡಲು ಹೋಗಿ ಪೇಚಿಗೆ ಸಿಲುಕಿದ ನಟಿ ರಾಖಿ ಸಾವಂತ್!
ಆಗಸ್ಟ್ 25, 2023 ರಂದು, ರಾಖಿ ಆದಿಲ್ ಅವರ ಖಾಸಗಿ ವಿಡಿಯೋವನ್ನು ವೈರಲ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆದಿಲ್ ಖಾನ್ ದೂರು ದಾಖಲಿಸಿದ್ದರು. ಇದರಲ್ಲಿ ತಮ್ಮ ತಪ್ಪು ಏನೂ ಇಲ್ಲ ಎಂದು ರಾಖಿ ಹೇಳಿದ್ದರು. ಆದರೆ ತನಿಖೆಯ ನಂತರ ಆಕೆ ವಾಟ್ಸ್ಆ್ಯಪ್ನಲ್ಲಿ ಶೇರ್ ಮಾಡಿರುವ ವಿಡಿಯೋಗಳು ಪೊಲೀಸರ ಕೈ ಸೇರಿವೆ. ಈ ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಗಣಿಸಿರುವ ಕೋರ್ಟ್, ರಾಖಿ ಸದ್ಯ ತಪ್ಪಿತಸ್ಥರು ಎಂದು ಅಭಿಪ್ರಾಯ ಪಟ್ಟಿದೆ. ಪತಿ ತಮ್ಮ ವಿರುದ್ಧ ದೂರು ದಾಖಲು ಮಾಡುತ್ತಿದ್ದಂತೆಯೇ ಪೊಲೀಸರು ತಮ್ಮನ್ನು ಬಂಧಿಸಬಹುದು ಎಂದುಕೊಂಡಿದ್ದ ರಾಖಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇದೀಗ ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿರುವ ಕೋರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿದೆ. ಕಳೆದ ವರ್ಷ ನವೆಂಬರ್ 29 ರಂದು ರಾಖಿಗೆ ಬಂಧನದಿಂದ ರಕ್ಷಣೆ ನೀಡಲಾಗಿತ್ತು. ಅದರ ನಂತರ, ನ್ಯಾಯಾಲಯವು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಜನವರಿ 11, 2024 ರವರೆಗೆ ಸಮಯ ನೀಡಿತು, ಮತ್ತೆ ಬಂಧನದಿಂದ ರಕ್ಷಿಸಿಕೊಳ್ಳಲು ರಾಖಿಗೆ ಕಾಲಾವಕಾಶ ನೀಡಿತು. ಇದೀಗ ಅಂತಿಮ ತೀರ್ಪು ಹೊರಬಿದ್ದಿದೆ.
ಏತನ್ಮಧ್ಯೆ, ಈ ವೀಡಿಯೊಗಳನ್ನು ಆದಿಲ್ ದುರಾನಿ ಅವರ ಸ್ವಂತ ಫೋನ್‌ನಲ್ಲಿ ಚಿತ್ರೀಕರಿಸಿದ್ದಾರೆ ಮತ್ತು ಅವರು ಇದನ್ನು ಪೊಲೀಸರಿಗೆ ಬಹಿರಂಗಪಡಿಸಿಲ್ಲ ಎಂದು ರಾಖಿ ಸಾವಂತ್ ವಾದಿಸಿದ್ದಾರೆ. ಪ್ರಾಸಿಕ್ಯೂಷನ್ ಆಕೆಯ ಮನವಿಯನ್ನು ತಿರಸ್ಕರಿಸಿದೆ. ಈ ವೀಡಿಯೊಗಳ ಪ್ರಕಟಣೆಯ ಮೂಲವನ್ನು ಅವರು ಇನ್ನೂ ತನಿಖೆ ಮಾಡಬೇಕಾಗಿದೆ. ಈ ಪ್ರಕರಣದಲ್ಲಿ ಯಾರನ್ನು ವಿಚಾರಣೆಗೊಳಪಡಿಸಬೇಕು ಎಂಬುದನ್ನು ತನಿಖೆ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಸದ್ಯ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಿಲ್ಲ ಎಂದು ಕೋರ್ಟ್ ಹೇಳಿದೆ.
ರಾಖಿ ಪತಿ ಆದಿಲ್ ಜೊತೆ ಶೆರ್ಲಿನ್ ಚೋಪ್ರಾ ಮತ್ತೆ ರೊಮ್ಯಾನ್ಸ್: ವಿಡಿಯೋ ನೋಡಿ ದಂಗಾದ ಫ್ಯಾನ್ಸ್!