ರಕ್ಷಿತ್ ಶೆಟ್ಟಿ '777 ಚಾರ್ಲಿ' ಬಿಡುಗಡೆಗೆ ಡೇಟ್ ಫಿಕ್ಸ್; ಇಲ್ಲಿದೆ ಬಿಗ್ ಅಪ್ ಡೇಟ್

Published : Apr 08, 2022, 02:16 PM ISTUpdated : Apr 08, 2022, 02:18 PM IST
ರಕ್ಷಿತ್ ಶೆಟ್ಟಿ '777 ಚಾರ್ಲಿ' ಬಿಡುಗಡೆಗೆ ಡೇಟ್ ಫಿಕ್ಸ್; ಇಲ್ಲಿದೆ ಬಿಗ್ ಅಪ್ ಡೇಟ್

ಸಾರಾಂಶ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷೆಯ 777 ಚಾರ್ಲಿ ಸಿನಿಮಾದ ಬಿಡುಗಡೆ ದಿನಾಂಕ ಏಪ್ರಿಲ್ ರಂದು ಬಹಿರಂಗ ಮಾಡುವುದಾಗಿ ರಕ್ಷಿತ್ ಶೆಟ್ಟಿ ಬಹಿರಂಗ ಪಡಿಸಿದ್ದಾರೆ. 

ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್​ ಶೆಟ್ಟಿ (Rakshit Shetty) ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಅವನೇ ಶ್ರೀಮನ್ನಾರಾಯಣ ಸಿನಿಮಾ ಬಳಿಕ ರಕ್ಷಿತ್ ಯಾವುದೇ ಸಿನಿಮಾ ರಿಲೀಸ್ ಆಗಿಲ್ಲ. ಹಾಗಾಗಿ ಅಭಿಮಾನಿಗಳು ಕಾರತರಿಂದ ಕಾಯುತ್ತಿದ್ದಾರೆ. ರಕ್ಷಿತ್ ನಟನೆಯ ‘777 ಚಾರ್ಲಿ’ ಸಿನಿಮಾ (777 Charlie) ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಕೂಡ ದೊಡ್ಡಮಟ್ಟದಲ್ಲಿ ನಿರೀಕ್ಷೆ ಮೂಡಿಸಿದೆ. ನಾಯಿ ಮತ್ತು ಮನುಷ್ಯನ ನಡುವಿನ ಭಾವನಾತ್ಮಕ ಸಂಬಂಧ ಬಗ್ಗೆ ಇರುವ ಈ ಸಿನಿಮಾ ಈಗಾಗಲೇ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿತ್ತು. ಯಾವಾಗ ತೆರೆ ಮೇಲೆ ಬರಲಿದೆ ಎಂದು ಕಾಯುತ್ತಿದ್ದರು. ಇದೀಗ ಸಿನಿಮಾ ಬಿಡುಗಡೆ ಬಗ್ಗೆ ಮಾಹಿತಿ ನೀಡುವ ಮೂಲಕ ರಕ್ಷಿತ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದ್ದಾರೆ.

ಈಗಾಗಲೇ ಟೀಸರ್​, ಪೋಸ್ಟರ್, ಹಾಡುಗಳಿಂದ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸಿದೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ಕೆಲಸಗಳು ಪೂರ್ಣಗೊಳ್ಳುವ ಹಂತ ತಲುಪಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗುತ್ತಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಚಿತ್ರದ ರಿಲೀಸ್ ದಿನಾಂಕವನ್ನು ಏಪ್ರಿಲ್​ 10ರಂದು ಬಹಿರಂಗ ಮಾಡುವುದಾಗಿ ಸಿನಿಮಾತಂಡ ಘೋಷಿಸಿದೆ.

ಈ ಬಗ್ಗೆ ರಕ್ಷಿತ್ ಶೆಟ್ಟಿ ಮತ್ತು ತಂಡ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರ. ‘777 ಚಾರ್ಲಿ ಚಿತ್ರದ ಬಿಡುಗಡೆ ದಿನಾಂಕ ಏಪ್ರಿಲ್ 10ರ, ಬೆಳಗ್ಗೆ 11:04ಕ್ಕೆ ತಿಳಿಸಲಿದ್ದೇವೆ’ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ನೀಡಿದ ಅಪ್ ಡೇಟ್ ಗೆ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಸಮಯಕ್ಕಾಗಿ ಕಾಯುತ್ತಿರುವುದಾಗಿ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಚೆನ್ನಾಗಿ ಪ್ರಮೋಟ್ ಮಾಡಿ ಎಂದು ಹೇಳುತ್ತಿದ್ದಾರೆ.

ಸಿಂಪಲ್ ಸ್ಟಾರ್, ಹ್ಯಾಂಡ್ಸಂ ಬಾಯ್ ರಕ್ಷಿತ್‌ ಶೆಟ್ಟಿಗೆ ಕೂಡಿ ಬಂತಾ ಕಂಕಣ ಭಾಗ್ಯ..?

ಅಂದಹಾಗೆ ಎಲ್ಲವೂ ಅಂದುಕೊಂಡಂತ್ತೆ ಆಗಿದ್ದಾರೆ ಸಿನಿಮಾ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ ಕಾರಣಾಂತರ ಗಳಿಂದ ಸಿನಿಮಾ ಬಿಡುಗಡೆ ದಿನಾಂಕ ಮುಂದಾಡಲಾಗಿತ್ತು. ಈ ಬಗ್ಗೆ ಸಿನಿಮಾತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಬಗ್ಗೆ ಸಿನಿಮಾತಂಡ '777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ' ಎಂದು ಹೇಳಿದ್ದರು.rakshit shetty 777 charlie release update
ಮುಂದಿನವಾರ 777 Charlie ರಿಲೀಸ್‌ ಡೇಟ್‌ ಘೋಷಣೆ : ಕಿರಣ್‌ರಾಜ್‌

ಇದೀಗ ಹೊಸ ಬಿಡುಗಡೆ ದಿನಾಂಕದೊಂದಿಗೆ ರಕ್ಷಿತ್ ಆಂಡ್ ಟೀಂ ಅಭಿಮಾನಿಗಳ ಮುಂದೆ ಹಾಜರಾಗುತ್ತಿದೆ. ರಕ್ಷಿತ್ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. 777 ಚಾರ್ಲಿ ಕಿರಣ್ ರಾಜ್ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ. ರಕ್ಷಿತ್ ಶೆಟ್ಟಿ ಜೊತೆ ಸಂಗೀತ ಶೃಂಗೇರಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ಉಳಿದಂತೆ ದಾನೀಶ್ ಸೇಠ್, ರಾಜ್ ಬಿ ಶೆಟ್ಟಿ, ಬಾಬಿ ಸಿಂಹ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?