ನಿರ್ದೇಶಕ ರಾಜಮೌಳಿ ಅವರ ಆರ್ ಆರ್ ಆರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುತ್ತಿದೆ. ಈ ಸಿನಿಮಾ ಬಿಡುಗಡೆಯಾಗಿ 12 ದಿನಗಳಲ್ಲಿ 940 ಕೋಟಿ ರೂ. ಕಲೆಕ್ಷನ್ ಮಾಡುವ ಮೂಲಕ 1000 ಕೋಟಿ ರೂ.ಗೆ ತೀರ ಸಮೀಪವಾಗಿದೆ. ಈ ಮೂಲಕ ಆರ್ ಆರ್ ಆರ್ ಅನೇಕ ಸಿನಿಮಾಗಳ ದಾಖಲೆ ಬ್ರೇಕ್ ಮಾಡಿ ಅತೀ ಹೆಚ್ಚು ಗಳಿಕೆ ಮಾಡಿರುವ ಸಿನಿಮಾಗಳಲ್ಲಿ 3ನೇ ಸ್ಥಾನದಲ್ಲಿದೆ.
ಎಸ್ ಎಸ್ ರಾಜಮೌಳಿ(SS Rajamouli) ನಿರ್ದೇಶನದ ಆರ್ ಆರ್ ಆರ್(RRR) ಸಿನಿಮಾ ಹಿಂದಿ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದ್ದು ಅನೇಕ ಸಿನಿಮಾಗಳ ದಾಖಲೆಯನ್ನು ಮುರಿದು ಮುನ್ನುಗ್ಗುತ್ತಿದೆ. ಗಂಗೂಬಾಯಿ ಕಾಠಿಯಾವಾಡಿ, ಕಾಶ್ಮೀರ್ ಫೈಲ್ಸ್(Kashmir Files), ಬಾಹುಬಲಿ(Bahubali), ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 2.0 ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಿದ್ದ ಆರ್ ಆರ್ ಆರ್ ಇದೀಗ ಬಜರಂಗಿ ಭಾಯಿಜಾನ್ ಮತ್ತು ಸೀಕ್ರೆಟ್ ಸೂಪರ್ ಸ್ಟಾರ್ ಸಿನಿಮಾಗಳನ್ನು ಸಹ ಹಿಂದಿಕ್ಕಿದೆ. ಈ ಮೂಲಕ ಆರ್ ಆರ್ ಆರ್ ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳ ಲಿಸ್ಟ್ ನಲ್ಲಿ 3ನೇ ಸ್ಥಾನದಲ್ಲಿದೆ.
ಅಂದಹಾಗೆ ಆರ್ ಆರ್ ಆರ್ ಸಿನಿಮಾ 12 ದಿನಗಳಲ್ಲಿ 900 ಕೋಟಿ ರೂಪಾಯಿ ಗಡಿ ದಾಟಿ ಮುನ್ನುಗ್ಗುತ್ತಿದೆ. ಈ ವಾರದಲ್ಲಿ ಆರ್ ಆರ್ ಆರ್ ಸಿನಿಮಾ 1000 ಕೋಟಿ ಗಳಿಕ ಮಾಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಅಂದಹಾಗೆ ಆರ್ ಆರ್ ಆರ್ 12 ದಿನಗಳಲ್ಲಿ ಒಟ್ಟು 940 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಆಂಗ್ಲ ಮಾಧ್ಯಮಗಳು ವರದಿಮಾಡಿವೆ. ಈ ಬಗ್ಗೆ ಸಿನಿಮಾ ವಿಶ್ಲೇಷಕ ಮನೋಬಾಲ್ ವಿಜಯ್ ಟ್ವೀಟ್ ಮಾಡಿ, ಆರ್ ಆರ್ ಆರ್ ಲಾಭದ ವಲಯ ಪ್ರವೇಶಿಸುತ್ತಿದೆ ಎಂದು ಹೇಳಿದ್ದಾರೆ.
enters PROFIT zone.
— Manobala Vijayabalan (@ManobalaV)ಅತೀ ಹೆಚ್ಚು ಗಳಿಕೆ ಮಾಡಿರುವ ಸಿನಿಮಾಗಳು
ಭಾರತದಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದೆ ಟಾಪ್ 5 ಸಿನಿಮಾಗಳೆಂದರೆ ದಂಗಲ್, ಬಾಹುಬಲಿ ಕನ್ ಕ್ಲೂಷನ್, ಬಜರಂಗಿ ಭಾಯಿಜಾನ್, ಸೀಕ್ರೆಟ್ ಸೂಪರ್ ಸ್ಟಾರ್ ಮತ್ತು ಪಿಕೆ ಸಿನಿಮಾಗಳು. ಇದೀಗ ಆರ್ ಆರ್ ಆರ್ ಮೂರನೆ ಸ್ಥಾನಕ್ಕೆ ಜಿಗಿದಿದೆ. ಮೊದಲ ಸ್ಥಾನದಲ್ಲಿ 1899.35 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ದಂಗಲ್(Dangal) ಸಿನಿಮಾವಿದೆ. 1800 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಬಾಹುಬಲಿ -2(Bahubali 2) ಎರಡನೇ ಸ್ಥಾನದಲ್ಲಿದೆ. ಇದೀಗ ಆರ್ ಆರ್ ಆರ್ ಸಿನಿಮಾ 3ನೇ ಸ್ಥಾನದಲ್ಲಿದೆ.
'ನಾಟು ನಾಟು...'ಹಾಡು ಹೇಳಿ 'RRR' ಸಿನಿಮಾವನ್ನು ಹೊಗಳಿದ ರಣವೀರ್ ಸಿಂಗ್
ಈ ಮೂಲಕ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ರಾಜಮೌಳಿ ನಿರ್ದೇಶನದ ಎರಡು ಸಿನಿಮಾಗಳಿರುವುದು ಹೆಮ್ಮೆಯ ವಿಚಾರವಾಗಿದೆ. ಈಗಾಗಲೇ ಅನೇಕ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಿ ಮುನ್ನುಗ್ಗುತ್ತಿರುವ ರಾಜಮೌಳಿ ಅವರ ಆರ್ ಆರ್ ಆರ್ ದಂಗಲ್ ಮತ್ತು ಬಾಲಿವುಡ್-2 ಸಿನಿಮಾವನ್ನು ಬೀಟ್ ಮಾಡುತ್ತಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
RRR ತಯಾರಕರ ಬಗ್ಗೆ Alia Bhatt ಅಸಮಾಧಾನ? SS Rajamouli ಅನ್ನು unfollow ಮಾಡಿದ ನಟಿ?
ಇನ್ನು ಸಿನಿಮಾದ ಬಗ್ಗೆ ಹೇಳುವುದಾದರೆ ಆರ್ ಆರ್ ಆರ್ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತರಾಮ ರಾಜು ಮತ್ತು ಕೋಮರಾಮ್ ಭೀಮ್ ಅವರ ಜೀವನದ ಆಧರಿಸಿದ ಕಾಲ್ಪನಿಕ ಕಥೆಯಾಗಿದೆ. ಚಿತ್ರದಲ್ಲಿ ರಾಮ್ ಚರಣ್ ಅಲ್ಲೂರಿ ಸೀತರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕೋಮರಾಮ್ ಭೀಮ್ ಪಾತ್ರದಲ್ಲಿ ಜೂ.ಎನ್ ಟಿ ಆರ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಸುಮಾರು 450 ಕೋಟಿ ರೂ. ಬಜೆಟ್ ನಲ್ಲಿ ತಯಾರಾಗಿದೆ. ಡಿವಿವಿ ದಾನಯ್ಯ ನಿರ್ಮಾಣದಲ್ಲಿ ಸಿನಿಮಾ ಮೂಡಿಬಂದಿದೆ. ಚಿತ್ರದಲ್ಲಿ ಅಲಿಯಾ ಭಟ್, ಸಮುದ್ರ ಕಣಿ, ಅಜಯ್ ದೇವಗನ್, ಒಲಿವಿಯಾ ಮೋರಿಸ್ ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದಾರೆ.