ಕಾರು ಚಾಲಕನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ರಾಮ್ ಚರಣ್; ಫೋಟೋ ವೈರಲ್

Published : Jun 07, 2022, 04:15 PM IST
ಕಾರು ಚಾಲಕನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ರಾಮ್ ಚರಣ್; ಫೋಟೋ ವೈರಲ್

ಸಾರಾಂಶ

ರಾಮ್ ಚರಣ್ ತನ್ನ ಚಾಲಕನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ರಾಮ್ ಚರಣ್ ಚಾಲಕ ನರೇಶ್ ಗೆ ಇತ್ತೀಚಿಗಷ್ಟೆ ಹುಟ್ಟುಹಬ್ಬದ ಸಂಭ್ರಮ. ನರೇಶ್ ಹುಟ್ಟುಹಬ್ಬವನ್ನು ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಮತ್ತು ಅವರ ತಂಡ ಅದ್ದೂರಿಯಾಗಿ ಆಚರಣೆ ಮಾಡಿದೆ.   

ತೆಲುಗು ಸ್ಟಾರ್ ನಟ ರಾಮ್ ಚರಣ್(Ram Charan) ನಟನೆಯ ಆರ್ ಆರ್ ಆರ್(RRR) ಸಿನಿಮಾ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿದೆ. ಈ ಸಿನಿಮಾ ಬಳಿಕ ರಾಮ್ ಚರಣ್ ಆಚಾರ್ಯ ಮೂಲಕ ಮತ್ತೆ ಅಭಿಮಾನಿಗಳ ಮುಂದೆ ಬಂದರು. ಆದರೆ ಆಚಾರ್ಯ ಹೇಳಿಕೊಳ್ಳುವಷ್ಟು ಯಶಸ್ಸು ಕಾಣಲಿಲ್ಲ. ಚಿರಂಜೀವಿ ನಾಯಕನಾಗಿ ಕಾಣಿಸಿಕೊಂಡಿದ್ದ ಆಚಾರ್ಯ ಸಿನಿಮಾದಲ್ಲಿ ರಾಮ್ ಚರಣ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ರಾಮ್ ಚರಣ್ ಆಚಾರ್ಯ ಸಿನಿಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರು. ಆದರೆ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಾಣುವ ಮೂಲಕ ಭಾರಿ ನಷ್ಟ ಅನುಭವಿಸಿತು.

ರಾಮ್ ಚರಣ್ ಸದ್ಯ ಮುಂದಿನ ಸಿನಿಮಾದ ತಯಾರಿಯಲ್ಲಿದ್ದಾರೆ. ಈ ನಡುವೆ ರಾಮ್ ತನ್ನ ಚಾಲಕನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ. ರಾಮ್ ಚರಣ್ ಚಾಲಕ ನರೇಶ್ ಗೆ ಇತ್ತೀಚಿಗಷ್ಟೆ ಹುಟ್ಟುಹಬ್ಬದ ಸಂಭ್ರಮ. ನರೇಶ್ ಹುಟ್ಟುಹಬ್ಬವನ್ನು ರಾಮ್ ಚರಣ್ ಮತ್ತು ಪತ್ನಿ ಉಪಾಸನಾ ಮತ್ತು ಅವರ ತಂಡ ಅದ್ದೂರಿಯಾಗಿ ಆಚರಣೆ ಮಾಡಿದೆ. ಹೈದರಾಬಾದ್ ನಲ್ಲಿ ಬರ್ತಡೇ ಸೆಲೆಬ್ರೇಟ್ ಮಾಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾಜಮೌಳಿಯ RRRನಲ್ಲಿದೆ ಸಲಿಂಗಕಾಮದ ಕಥೆ; ಸಿನಿಮಾದ ಬಗ್ಗೆ ಕೇಳಿ ಬರ್ತಿದೆ ಹೊಸ ಆರೋಪ

ಅಂದಹಾಗೆ ತನ್ನ ಕಾರು ಚಾಲಕನಿಗಾಗಿ ರಾಮ್ ಚರಣ್ ವಿಶೇಷವಾದ ಕೇಕ್ ತರಿಸಿದ್ದಾರೆ. ಕೇಕ್ ಕತ್ತರಿಸಿ ನರೇಶ್ ಹುಟ್ಟುಹಬ್ಬ ಸಂಭ್ರಮಿಸಿದ್ದಾರೆ. ಆ ಸಮಯದಲ್ಲಿ ರಾಮ್ ಚರಣ್ ಚಾಲಕ ನರೇಶ್ ಭುಜದ ಮೇಲೆ ಕೈ ಇಟ್ಟು ಪ್ರೀತಿಯಿಂದ ವಿಸ್ ಮಾಡಿದ್ದಾರೆ. ರಾಮ್ ಚರಣ್ ಈ ನಡೆ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಸಹ ರಾಮ್ ಚರಣ್ ಕಾರು ಚಾಲಕ ನರೇಶ್ ಗೆ ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ. ಆ ಸಮಯದಲ್ಲಿ ರಾಮ್ ಚರಣ್ ವೈಟ್ ಟಿ ಶರ್ಟ್ ಮತ್ತು ಬ್ಲ್ಯಾಕ್ ಡೆನಿಮ್ ನಲ್ಲಿ ಕಾಣಿಸಿಕೊಂಡಿದ್ದರು. ರಾಮ್ ಲುಕ್ ಕೂಡ ಅಭಿಮಾನಿಗಳ ಗಮನ ಸೆಳೆದಿದೆ. 

Happy Birthday Jr. NTR; ಸಹೋದರ, ಸ್ನೇಹಿತ, ಸಹನಟ ಏನೆಂದು ಕರೆಯಲಿ, ರಾಮ್ ಚರಣ್ ಪ್ರೀತಿಯ ವಿಶ್

ರಾಮ್ ಚರಣ್ ಸಿನಿಮಾ ವಿಚಾರಕ್ಕೆ ಬರುವುದಾದರೆ, ಸದ್ಯ ತನ್ನ 15ನೇ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಸಾರಥ್ಯದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ರಾಮ್ ಚರಣ್ ಐಎಎಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ರಾಮ್ ಚರಣ್ ಗೆ ನಾಯಕಿಯಾಗಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಕಾಣಿಸಿಕೊಳ್ಳುತ್ತಿದ್ದಾರೆ. ಭಾರಿ ಕುತೂಹಲ ಮೂಡಿಸಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾ ಬಳಿಕ ರಾಮ್ ಚರಣ್, ಜೆರ್ಸಿ ಸಿನಿಮಾದ ನಿರ್ದೇಶಕ ಗೌತಮ್ ಅವರ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ವಿಶೇಷ ಎಂದರೇ ರಾಮ್ ಚರಣ್ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಜೊತೆಯೂ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಲ್ಲ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಅತ್ತ ಪಂಚೆ ಉದುರಿ ಹೋಗುತ್ತಿದೆ.. ಇತ್ತ ಕುಣಿದು ಕುಪ್ಪಳಿಸಿ ಇಳಯರಾಜಾ ಕಂಪೋಸ್ ಮಾಡಿದ ಮಜವಾದ ಹಾಡು ಯಾವುದು?
ಅಖಂಡ 2 ರಿಲೀಸ್ ನಿಲ್ಲೋಕೆ ಅಸಲಿ ಕಾರಣ ಇದೇನಾ? ಅಷ್ಟಕ್ಕೂ ಬಾಲಯ್ಯ ಮುಂದೆ ಏನ್ಮಾಡ್ತಾರೆ?