
ರಾಕಿಂಗ್ ಸ್ಟಾರ್ ಯಶ್ ಮತ್ತೊಮ್ಮೆ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದಿಂದ ಪ್ಯಾನ್ ಇಂಡಿಯಾ ಮಟ್ಟಕ್ಕೆ ಬೆಳೆದು ನಿಂತಿರುವ ಯಶ್, ಇದೀಗ ಭಾರತೀಯ ಚಿತ್ರರಂಗದ ಅಪರೂಪದ ದಾಖಲೆಯೊಂದರ ಮೂಲಕ ಸುದ್ದಿಯಾಗಿದ್ದಾರೆ. ದೇಶದ ಐದು ಪ್ರಮುಖ ಸಿನಿಮಾ ಮಾರುಕಟ್ಟೆಗಳಲ್ಲಿ ತಲಾ 50 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿದ ಎರಡು ಸಿನಿಮಾಗಳನ್ನು ನೀಡಿದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆ ಯಶ್ ಪಾತ್ರರಾಗಿದ್ದಾರೆ.
ದೇಶದ ಐದು ಪ್ರಮುಖ ಸಿನಿಮಾ ಮಾರುಕಟ್ಟೆಗಳಲ್ಲಿ ತಲಾ 50 ಕೋಟಿ ರೂಪಾಯಿಗೂ ಹೆಚ್ಚು ಗಳಿಕೆ ಮಾಡಿದ ಸಿನಿಮಾಗಳನ್ನು ನೀಡಿದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆ ಯಶ್ ಪಾಲಾಗಿದೆ. ಈ ಚರ್ಚೆಗೆ ಪ್ರಮುಖ ಕಾರಣವಾಗಿರುವುದು ಯಶ್ ಅಭಿನಯದ ಕೆಜಿಎಫ್: ಚಾಪ್ಟರ್ 2 ಮತ್ತು ರಾಮಾಯಣ ಸಿನಿಮಾಗಳು.
ಕನ್ನಡ, ಹಿಂದಿ, ಆಂಧ್ರ ಪ್ರದೇಶ ಮತ್ತು ತೆಲಂಗಾಣ, ತಮಿಳುನಾಡು ಹಾಗೂ ಕೇರಳ ಈ ಐದು ಪ್ರಮುಖ ಮಾರುಕಟ್ಟೆಗಳಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿರುವುದು ಈ ದಾಖಲೆಯ ಪ್ರಮುಖ ಅಂಶ. ಒಂದು ಭಾಷೆಯಲ್ಲಿ ಮಾತ್ರವಲ್ಲದೆ, ಬೇರೆ ಬೇರೆ ಭಾಷೆಗಳ ಪ್ರೇಕ್ಷಕರನ್ನೂ ಚಿತ್ರಮಂದಿರಗಳಿಗೆ ಸೆಳೆಯುವ ಸಾಮರ್ಥ್ಯ ಯಶ್ ಅವರ ಸಿನಿಮಾಗಳಿಗಿದೆ ಎಂಬುದಕ್ಕೆ ಇದು ಸಾಕ್ಷಿ.
2022ರಲ್ಲಿ ಬಿಡುಗಡೆಯಾದ ಪ್ರಶಾಂತ್ ನೀಲ್ ನಿರ್ದೇಶನದ 'ಕೆಜಿಎಫ್: ಚಾಪ್ಟರ್ 2' ಸಿನಿಮಾ ಭಾರತೀಯ ಚಿತ್ರರಂಗದ ಬಾಕ್ಸ್ಆಫೀಸ್ನಲ್ಲಿ ಹೊಸ ಸಂಚಲನ ಸೃಷ್ಟಿಸಿತ್ತು. ಯಶ್ ಅಭಿನಯದ ಈ ಸಿನಿಮಾ ವಿಶ್ವಾದ್ಯಂತ ಸುಮಾರು 1,215 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಭಾರತದಲ್ಲೇ ಚಿತ್ರದ ಗಳಿಕೆ ಸುಮಾರು 1,000 ಕೋಟಿ ರೂಪಾಯಿ ದಾಟಿತ್ತು. ಕರ್ನಾಟಕದಲ್ಲಿ ಸುಮಾರು 174 ಕೋಟಿ ರೂಪಾಯಿ, ತೆಲುಗು ರಾಜ್ಯಗಳಲ್ಲಿ 174 ಕೋಟಿ ರೂಪಾಯಿ, ತಮಿಳುನಾಡಿನಲ್ಲಿ 107 ಕೋಟಿ ರೂಪಾಯಿ ಹಾಗೂ ಕೇರಳದಲ್ಲಿ 64 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇನ್ನುಳಿದ ಭಾರತದ ಮಾರುಕಟ್ಟೆಗಳಿಂದಲೂ ಸುಮಾರು 482 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ವಿಶೇಷವೆಂದರೆ, ಕನ್ನಡದಲ್ಲಿ ನಿರ್ಮಾಣವಾದ ಸಿನಿಮಾ ಹಿಂದಿ ಮಾರುಕಟ್ಟೆಯಲ್ಲೂ ಭರ್ಜರಿ ಯಶಸ್ಸು ಕಂಡಿತ್ತು. ಉತ್ತರ ಭಾರತದಲ್ಲೂ ಯಶ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿಯಾಗಲು 'ಕೆಜಿಎಫ್ 2' ಪ್ರಮುಖ ಕಾರಣವಾಯಿತು.
ರಾಮಾಯಣದ ಮೂಲಕ ಮತ್ತೊಂದು ಮೈಲಿಗಲ್ಲು
ಇದೀಗ ರಾಮಾಯಣ ಸಿನಿಮಾದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಯಶ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ನಟಿಸಿದ್ದಾರೆ. ನವೆಂಬರ್ 5ರಂದು ಬಿಡುಗಡೆಯಾದ ಸಿನಿಮಾ ಮೊದಲ 13 ದಿನಗಳಲ್ಲೇ ವಿಶ್ವಾದ್ಯಂತ ಸುಮಾರು 1,483 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಪೈಕಿ ಭಾರತದಲ್ಲಿ ಚಿತ್ರದ ಒಟ್ಟು ಗಳಿಕೆ ಸುಮಾರು 981 ಕೋಟಿ ರೂಪಾಯಿ ಆಗಿದ್ದರೆ, ವಿದೇಶಿ ಮಾರುಕಟ್ಟೆಗಳಿಂದ ಸುಮಾರು 502 ಕೋಟಿ ರೂಪಾಯಿ ಬಂದಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.