ಧ್ರುವ ಸರ್ಜಾ 'ಕೆಡಿ'ಗೆ ಭರ್ಜರಿ ಎಂಟ್ರಿ ಕೊಟ್ಟ ಕನ್ನಡದ ಮತ್ತೊಬ್ಬ ಸ್ಟಾರ್ ನಟ!

Published : Sep 22, 2023, 05:02 PM ISTUpdated : Sep 22, 2023, 05:05 PM IST
ಧ್ರುವ ಸರ್ಜಾ 'ಕೆಡಿ'ಗೆ ಭರ್ಜರಿ ಎಂಟ್ರಿ ಕೊಟ್ಟ ಕನ್ನಡದ ಮತ್ತೊಬ್ಬ ಸ್ಟಾರ್ ನಟ!

ಸಾರಾಂಶ

ಧ್ರುವ ಸರ್ಜಾ ನಾಯಕತ್ವದ 'ಕೆಡಿ-ದಿ ಡೆವಿಲ್' ಚಿತ್ರದಲ್ಲಿ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ರೀಷ್ಮಾ ಭಾಗದ ಚಿತ್ರೀಕರಣ ಮರಳುಗಾಡಿನಲ್ಲಿ ನಡೆಯುತ್ತಿದ್ದು, ಬಿಡುವಿನ ವೇಳೆಯಲ್ಲಿ ನಟಿ ಮರಳಿನ ಜತೆ ಆಟವಾಡುತ್ತ ಎಂಜಾಯ್ ಮಾಡುತ್ತಿದ್ದಾರಂತೆ.

ಕನ್ನಡದ ಜನಪ್ರಿಯ ನಟ, ನಿರೂಪಕ ರಮೇಶ್ ಅರವಿಂದ್ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಶೀಘ್ರದಲ್ಲಿ ನಟ ರಮೇಶ್ ಅರವಿಂದ್ ಜೋಗಿ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ನಾಯಕತ್ವದ, ಸದ್ಯ ಚಿತ್ರಕರಣದ ಹಂತದಲ್ಲಿರುವ 'KD-The devil' ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಧ್ರುವ ಸರ್ಜಾ ಚಿತ್ರ 'ಕೆಡಿ-ದಿ ಡೆವಿಲ್' ಚಿತ್ರದಲ್ಲಿ ಈಗಾಗಲೇ ಬಾಲಿವುಡ್ ನಟ ಸಂಜಯ್ ದತ್, ಶಿಲ್ಪಾ ಶೆಟ್ಟಿ, ಕನ್ನಡದ ಕ್ರೇಜಿ ಸ್ಟಾರ್ ರವಿಚಂದ್ರನ್ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದಾರೆ. ಇದೀಗ ರಮೇಶ್ ಅರವಿಂದ ಚಿತ್ರತಂಡವನ್ನು ಸೇರಿಕೊಳ್ಳುವ ಮೂಲಕ ಇನ್ನಷ್ಟು ನಿರೀಕ್ಷೆ ಮೂಡಲು ಕಾರಣರಾಗಿದ್ದಾರೆ. 

ಹೌದು, ನಟ ರಮೇಶ್ ಅರವಿಂದ್ 'ಕೆಡಿ' ಚಿತ್ರದಲ್ಲಿ ನಾಯಕ ಧ್ರುವ ಸರ್ಜಾ ಅಣ್ಣನ ಪಾತ್ರ ಪೋಷಿಸುತ್ತಿದ್ದಾರೆ. ಈ ವಿಷಯವನ್ನು ಜೋಗಿ ಪ್ರೇಮ್ ಸ್ವತಃ ಬಹಿರಂಗಗೊಳಿಸಿದ್ದು, ಸದ್ಯದಲ್ಲೇ ರಮೇಶ್ ತಮ್ಮ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ. 'ಕೆಡಿ' ಚಿತ್ರವು ಸ್ಯಾಂಡಲ್‌ವುಡ್ ಅಭಿಮಾನಿಗಳಲ್ಲಿ ಈಗಾಗಲೇ ಬಹಳಷ್ಟು ನಿರೀಕ್ಷೆ ಹುಟ್ಟುಹಾಕಿದೆ ಎನ್ನಬಹುದು.

ವಾಟ್ಸಪ್ ಚಾನೆಲ್‌ನಲ್ಲಿ ಪ್ರಧಾನಿ ಮೋದಿ, ಅಕ್ಷಯ್‌ಕುಮಾರ್‌ ಹಿಂದಿಕ್ಕಿದ ಕತ್ರಿನಾ ಕೈಫ್‌! 

'ಕೆಡಿ-ದಿ ಡೆವಿಲ್' ಚಿತ್ರದಲ್ಲಿ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ರೀಷ್ಮಾ ಭಾಗದ ಚಿತ್ರೀಕರಣ ಮರಳುಗಾಡಿನಲ್ಲಿ ನಡೆಯುತ್ತಿದ್ದು, ಬಿಡುವಿನ ವೇಳೆಯಲ್ಲಿ ನಟಿ ಮರಳಿನ ಜತೆ ಆಟವಾಡುತ್ತ ಎಂಜಾಯ್ ಮಾಡುತ್ತಿದ್ದಾರಂತೆ. 'ಪೊಗರು' ಚಿತ್ರದ ಬಳಿಕ ಧ್ರುವ ಸರ್ಜಾ ನಟಿಸುತ್ತಿರುವ 'KD' ಚಿತ್ರವು ಬಿಗ್ ಬಜೆಟ್ ಚಿತ್ರವಾಗಿದೆ. ಚಿತ್ರೀಕರಣ ಮುಗಿಸಿ ಈ ವರ್ಷದೊಳಗೆ ತೆರೆಗೆ ಬರಲಿದ್ದು, 'ಜೋಗಿ ಪ್ರೇಮ್-ಧ್ರುವ ಸರ್ಜಾ' ಕಾಂಬಿನೇಷನ್ ಅಭಿಮಾನಿಗಳಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. 
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

3 idiots 2 : ಬಾಕ್ಸ್ ಆಫೀಸ್ ನಲ್ಲಿ ಸುನಾಮಿ, ಬರ್ತಿದೆ 3 ಈಡಿಯಟ್ಸ್ ಸೀಕ್ವೆಲ್
ಚಿರಂಜೀವಿ ನಂತರ ಜೂ.ಎನ್‌ಟಿಆರ್ ಟಾರ್ಗೆಟ್? ಸಂಚಲನ ಮೂಡಿಸಿದ ನಿರ್ಧಾರ, ಇನ್ಮುಂದೆ ಹೀಗೆ ಮಾಡಿದ್ರೆ ಕಷ್ಟ!