ದೇವರಕೊಂಡ ಜೊತೆ ಬ್ರೇಕಪ್ ಮಾಡ್ಕೊಂಡ್ರಾ ರಶ್ಮಿಕಾ? ಮತ್ತೊಬ್ಬ ತೆಲುಗು ಹೀರೋ ಜೊತೆ ಕಿರಿಕ್ ಬ್ಯೂಟಿ ಸುತ್ತಾಟ

Published : Apr 01, 2023, 07:17 PM ISTUpdated : Apr 03, 2023, 01:43 PM IST
ದೇವರಕೊಂಡ ಜೊತೆ ಬ್ರೇಕಪ್ ಮಾಡ್ಕೊಂಡ್ರಾ ರಶ್ಮಿಕಾ? ಮತ್ತೊಬ್ಬ ತೆಲುಗು ಹೀರೋ ಜೊತೆ ಕಿರಿಕ್ ಬ್ಯೂಟಿ ಸುತ್ತಾಟ

ಸಾರಾಂಶ

ದೇವರಕೊಂಡ ಜೊತೆ ಬ್ರೇಕಪ್ ಮಾಡ್ಕೊಂಡ್ರಾ ರಶ್ಮಿಕಾ ಎನ್ನುವ ಅನುಮಾನ ಮೂಡಿಸಿದೆ. ಇದಕ್ಕೆ ಕಾರಣವಾಗಿದ್ದು ಕಿರಿಕ್ ಬ್ಯೂಟಿ ಮತ್ತೋರ್ವ ಹೀರೋ ಜೊತೆ ಸುತ್ತಾಟ ನಡೆಸುತ್ತಿದ್ದಾರೆ. 

ನಟಿ ರಶ್ಮಿಕಾ ಮಂದಣ್ಣ ಸದ್ಯ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು, ತಮಿಳು, ಹಿಂದಿ ಅಂತ ಬಹುಭಾಷಾ ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ಭಾರಿ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ರಶ್ಮಿಕಾ ಸಿನಿಮಾಗಿಂತ ಹೆಚ್ಚಾಗಿ ಬೇರೆ ಬೇರೆ ವಿಚಾಗಳಿಗೆ ಸುದ್ದಿಯಾಗುತ್ತಿರುತ್ತಾರೆ. ಡೇಟಿಂಗ್, ವಿವಾದಾತ್ಮಕ ಹೇಳಿಗಳು, ಟ್ರೋಲ್ ವಿಚಾರಗಳಲ್ಲಿ ರಶ್ಮಕಾ ಸದಾ ಸುದ್ದಿಯಲ್ಲಿರುತ್ತಾರೆ. ಅಂದಹಾಗೆ ರಶ್ಮಿಕಾ ಸದ್ಯ ತೆಲುಗು ನಟ ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಇಬ್ಬರೂ ಪ್ರೀತಿಯಲ್ಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೀಗ ರಶ್ಮಿಕಾ ಬಗ್ಗೆ ಮತ್ತೊಂದು ಅಚ್ಚರಿಕರ ಸಂಗತಿ ವೈರಲ್ ಆಗಿದೆ. ವಿಜಯ್ ದೇವರಕೊಂಡ ಬಿಟ್ಟು ಮತ್ತೋರ್ವ ನಟನ ಜೊತೆ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಗುಲ್ಲಾಗಿದೆ.  
 
ರಶ್ಮಿಕಾ ಡೇಟಿಂಗ್ ಮಾಡುತ್ತಿರುವ ಹೀರೋ ಮತ್ಯಾರು ಅಲ್ಲ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್. ಹೌದು, ಸಾಯಿ ಶ್ರೀನಿವಾಸ್ ಜೊತೆ ರಶ್ಮಿಕಾ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಇಬ್ಬರೂ ಅನೇಕ ಕಡೆಗಳಲ್ಲಿ ಸುತ್ತಾಡುತ್ತಿದ್ದು ಕ್ಯಾಮರಾ ಕಣ್ಣಿಗೆ ಸೆರೆಯಾಗಿದ್ದಾರೆ. ಆಗಾಗ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವುದು ಈ ಸುದ್ದಿ ವೈರಲ್ ಆಗಲು ಕಾರಣವಾಗಿದೆ.  

ಇತ್ತೀಚಿನ ದಿನಗಳಲ್ಲಿ ರಶ್ಮಿಕಾ ಮತ್ತು ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಒಟ್ಟಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ರಶ್ಮಿಕಾ ಮತ್ತು ಶ್ರೀನಿವಾಸ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಇತ್ತೀಚೆಗೆ ರಶ್ಮಿಕಾ ಹಾಗೂ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಮುಂಬೈ ಏರ್​ಪೋರ್ಟ್​ನಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಇಬ್ಬರೂ ಪಾಪರಾಜಿಗಳಿಗೆ ಪೋಸ್ ನೀಡಿದ್ದರು. ಅಷ್ಟೇ ಅಲ್ಲ ಅವಾರ್ಡ್ ಫಂಕ್ಷನ್​ನಲ್ಲೂ ಈ ಜೋಡಿ ಜೊತೆಯಾಗಿ ಹಾಜರ್ ಆಗಿದ್ದರು.



ಐಪಿಎಲ್ 2023 ಅದ್ಧೂರಿ ಚಾಲನೆ, ಅರ್ಜಿತ್, ರಶ್ಮಿಕಾ, ತಮನ್ನ ಮೋಡಿಗೆ ಫ್ಯಾನ್ಸ್ ಫಿದಾ!

ಇತ್ತೀಚೆಗೆ ರಶ್ಮಿಕಾ ನಟ ವಿಜಯ್ ದೇವರಕೊಂಡ ಜೊತೆಯೂ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಹಾಗಾಗಿ ಇಬ್ಬರೂ ಬ್ರೇಕಪ್ ಮಾಡಿಕೊಂಡು ದೂರ ದೂರ ಆಗಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ವಿಜಯ್ ದೇವರಕೊಂಡ ಅವರಿಂದ ದೂರ ಆದ ಮೇಲೆ ಸಾಯಿ ಶ್ರೀನಿವಾಸ್ ಜೊತೆ ರಶ್ಮಿಕಾ ಓಡಾಡುತ್ತಿದ್ದಾರೆ. ಇಬ್ಬರೂ ಒಟ್ಟಿಗೆ ಯಾವುದೇ ಸಿನಿಮಾಗಳಲ್ಲೂ ನಟಿಸುಲ್ಲ. ಹಾಗಿದ್ದರೂ ಒಟ್ಟಿಗೆ ಸುತ್ತಾಡುತ್ತಿರುವುದು ಎಲ್ಲಾ ಅನುಮಾನಗಳಿಗೆ ಕಾರಣವಾಗಿದೆ. ಹೇಗೆ ಪರಿಚಿತರಾದರೂ, ಕ್ಲೋಸ್ ಆದರೂ ಎಂದು ಅಭಿಮಾನಿಗಳು ತಲೆಕೆಡಿಸಿಕೊಂಡಿದ್ದಾರೆ.  

ಸ್ಟಾರ್‌ ನಟಿಯರ ನಡುವೆ ತಂದಿಡುವ ಕೆಲ್ಸ ಮಾಡ್ಬೇಡಿ; ರಶ್ಮಿಕಾ ಮಂದಣ್ಣ ಬಗ್ಗೆ ಸಮಂತಾ ಹೇಳಿಕೆ

ರಶ್ಮಿಕಾ ಮಂದಣ್ಣ ಸದ್ಯ ಹಿಂದಿಯಲ್ಲಿ ‘ಅನಿಮಲ್​’ ಹಾಗೂ ತೆಲುಗಿನಲ್ಲಿ ‘ಪುಷ್ಪ 2’ ಸಿನಿಮಾದಲ್ಲಿ  ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ಇತ್ತೀಚೆಗಷ್ಟೆ ತೆಲುಗು ನಟ ನಿತಿನ್ ಜೊತೆ  ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಗಡ್‌ ಕಾಪ್‌, ಮ್ಯಾಕ್ಸಿಮಮ್‌ ಮಾಸ್‌.. 'ಮಾರ್ಕ್' ಕಥೆ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟ ಕಿಚ್ಚ ಸುದೀಪ್!
ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?