ಟೈಗರ್ ಶ್ರಾಫ್ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್

By Shruiti G Krishna  |  First Published Jul 9, 2022, 1:09 PM IST

ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ರಶ್ಮಿಕಾ ಬಾಲಿವುಡ್ ನಟ ಟೈಗರ್ ಶ್ರಾಫ್ ಜೊತೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.


ನಟಿ ರಶ್ಮಿಕಾ ಮಂದಣ್ಣ (Rashmika Mandanna) ತೆಲುಗು, ತಮಿಳು ಬಳಿಕ ಬಾಲಿವುಡ್‌ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗುತ್ತಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸಿನಿಮಾ ರಿಲೀಸ್ ಆಗುವ ಮೊದಲೇ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ಅಧಿಕೃತವಾಗಿ ಮೂರು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ  ಇದೀಗ ಮೂರನೇ ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ರಶ್ಮಿಕಾ ಬಾಲಿವುಡ್ ನಟ ಟೈಗರ್ ಶ್ರಾಫ್ ಜೊತೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್ ಸ್ಟಾರ್ ಟೈಗರ್ ಶ್ರಾಫ್ ಮುಂದಿನ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ನಿರ್ದೇಶಕ ಶಶಾಂಕ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಟೈಗರ್ ಶ್ರಾಫ್‌ (Tiger Shroff) ಜೊತೆ ಫ್ರೆಶ್ ಜೋಡಿ ಹುಡುಕುತ್ತಿದ್ದ ನಿರ್ದೇಶಕರಿಗೆ ರಶ್ಮಿಕಾ ಕಣ್ಣಿಗೆ ಬಿದ್ದಿದ್ದಾರೆ. ಹಾಗಾಗಿ ಟೈಗರ್ ಜೊತೆ ರಶ್ಮಿಕಾರನ್ನು ಜೋಡಿ ಮಾಡಲು ನಿರ್ದೇಶಕರು ನಿರ್ಧರಿಸಿದ್ದಾರೆ. 

Tap to resize

Latest Videos

ಈ ಸಿನಿಮಾದಲ್ಲಿ ಟೈಗರ್ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸ ಪ್ರಾರಂಭವಾಗಿದ್ದು ಸದ್ಯದಲ್ಲೇ ಸಿನಿಮಾತಂಡ ಚಿತ್ರೀಕರಣಕ್ಕೆ ಹೊರಡಲಿದೆ. ರಶ್ಮಿಕಾ ಸದ್ಯ ಹಿಂದಿಯ ಅನಿಮಲ್ ಸಿನಿಮಾದಲ್ಲಿ ನಿರತರಾಗಿದ್ದಾರೆ. ರಣಬೀರ್ ಕಪೂರ್ (Ranbir Kapoor) ಜೊತೆ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು ಸಾಕಷ್ಟು ಚಿತ್ರೀಕರಣ ಮುಗಿಸಿದ್ದಾರೆ. ಈ ನಡುವೆ ರಶ್ಮಿಕಾ ತಮಿಳು ಸ್ಟಾರ್ ದಳಪತಿ ವಿಜಯ್ ಜೊತೆ ನಟಿಸುತ್ತಿದ್ದಾರೆ. ಎರಡು ಸಿನಿಮಾದ ಚಿತ್ರೀಕರಣ ಒಟ್ಟೊಟ್ಟಿಗೆ ನಡೆಯುತ್ತಿದೆ. 

ಹಣ ಕೊಟ್ಟು ಕರ್ನಾಟಕ ಕ್ರಶ್ ಆದ್ರಾ ರಶ್ಮಿಕಾ ? ಶುರುವಾಯ್ತು ಕಿರಿಕ್ ಹುಡುಗಿಯರ ಕಿತ್ತಾಟ!

ಈ ಸಿನಿಮಾ ಮುಗಿಯುತ್ತಿದ್ದಂತೆ ರಶ್ಮಿಕಾ ಬಹುನಿರೀಕ್ಷೆಯ ಪುಷ್ಪ-2 ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಪುಷ್ಪ-2 ಸಿನಿಮಾದ ಚಿತ್ರೀಕರಣ ಮತ್ತು ಟೈಗರ್ ಶ್ರಾಫ್ ಜೊತೆ ಹೊಸ ಸಿನಿಮಾದ ಚಿತ್ರೀಕರಣ ಎರಡರಲ್ಲೂ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ. 

ದೇವರಕೊಂಡ ಲೈಗರ್‌ ಫಸ್ಟ್ ಪೋಸ್ಟ್ ರಿವೀಲ್: ರಶ್ಮಿಕಾ ಆದ್ರು ಫುಲ್ ಥ್ರಿಲ್ !

ಇನ್ನು ರಶ್ಮಿಕಾ ಸಿನಿಮಾ ವಿಚಾರಗಳ ಬಗ್ಗೆ ಹೇಳುವುದಾದರೆ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ನಟನೆಯ ಮಿಷನ್ ಮಜ್ನು, ಗುಡ್ ಬೈ ಸಿನಿಮಾದ ಚಿತ್ರೀಕರಣ ಮುಗಿಸಿದ್ದು ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಮಿಷನ್ ಮಜ್ನು ಸಿನಿಮಾದಲ್ಲಿ ಸಿದ್ಧಾರ್ದ್ ಮಲ್ಹೋತ್ರ ನಾಯಕನಾಗಿ ನಟಿಸಿದ್ದಾರೆ. ಇನ್ನು ಗುಡ್ ಬೈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಜೊತೆ ನಟಿಸಿದ್ದಾರೆ. ಈ ಎರಡು ಸಿನಿಮಾಗಳ ಬಿಡುಗಡೆಗೆ ರಶ್ಮಿಕಾ ಕಾಯುತ್ತಿದ್ದಾರೆ. ಈ ಎರಡು ಸಿನಿಮಾ ರಿಲೀಸ್ ಗೂ ಮೊದಲೇ ರಶ್ಮಿಕಾ ಹಿಂದಿಯಲ್ಲಿ ಇನ್ನು ಕೆಲವು ಸಿನಿಮಾಗಳನ್ನ ಒಪ್ಪಿಕೊಂಡಿದ್ದಾರೆ. ರಶ್ಮಿಕಾ ಕೊನೆಯದಾಗಿ ಪುಷ್ಪ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.   

click me!