ಬೆಂಗಳೂರಿನಲ್ಲಿದ್ದರೆ ಈ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕವೇ ಪಯಣ ಆರಂಭಿಸ್ತಾರಂತೆ ರಶ್ಮಿಕಾ ಮಂದಣ್ಣ

Published : May 25, 2022, 05:42 PM ISTUpdated : May 25, 2022, 05:46 PM IST
ಬೆಂಗಳೂರಿನಲ್ಲಿದ್ದರೆ ಈ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕವೇ ಪಯಣ ಆರಂಭಿಸ್ತಾರಂತೆ ರಶ್ಮಿಕಾ ಮಂದಣ್ಣ

ಸಾರಾಂಶ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಸಿನಿರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್ ಅಂಗಳದಲ್ಲಿಯೂ ಭಾರೀ ಬ್ಯುಸಿ ಇರುವ ನಟಿಯಾಗಿದ್ದಾರೆ. ಗಾಸಿಪ್, ಟ್ರೋಲ್, ಸಿನಿಮಾ ಹೀಗೆ ಒಂದಲ್ಲೊಂದು ವಿಚಾರದ ಮೂಲಕ ರಶ್ಮಿಕಾ ಮಂದಣ್ಣ ಸದಾ ಸುದ್ದಿಯಲ್ಲಿರುತ್ತಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಚಿತ್ರೀಕರಣ ನಡುವೆಯೂ ಬೆಂಗಳೂರಿಗೆ ಬಂದಿದ್ದಾರೆ.

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ(Rashmika Mandanna) ದಕ್ಷಿಣ ಸಿನಿರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್ ಅಂಗಳದಲ್ಲಿಯೂ ಭಾರೀ ಬ್ಯುಸಿ ಇರುವ ನಟಿಯಾಗಿದ್ದಾರೆ. ಗಾಸಿಪ್, ಟ್ರೋಲ್, ಸಿನಿಮಾ ಹೀಗೆ ಒಂದಲ್ಲೊಂದು ವಿಚಾರದ ಮೂಲಕ ರಶ್ಮಿಕಾ ಮಂದಣ್ಣ ಸದಾ ಸುದ್ದಿಯಲ್ಲಿರುತ್ತಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಚಿತ್ರೀಕರಣ ನಡುವೆಯೂ ಬೆಂಗಳೂರಿಗೆ ಬಂದಿದ್ದಾರೆ. ಅಲ್ಲದೇ ತಮ್ಮ ನಿತ್ಯ ಸಂಪ್ರದಾಯದಂತೆ ದೇವಸ್ಥಾನಕ್ಕೆ ಭೇಟಿ ನೀಡಿ ದೀವರ ಆಶೀರ್ವಾದ ಪಡೆದಿದ್ದಾರೆ.

ರಶ್ಮಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋದಲ್ಲಿ ನಟಿ ರಶ್ಮಿಕಾ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದಾರೆ. ಗುಲಾಬಿ ಬಣ್ಣದ ಸೀರೆಯನ್ನು ಧರಿಸಿದ್ದು ಮುದ್ದಾಗಿ ಕಾಣಿಸುತ್ತಿದ್ದಾರೆ. ಅಂದಹಾಗೆ ರಶ್ಮಿಕಾ ಮಂದಣ್ಣ ಬೆಂಗಳೂರಿನಲ್ಲಿ ಗಣಪನಿಗೆ ಪ್ರಾರ್ಥನೆ ಸಲ್ಲಿಸಿದರು. ಗಣಪನ ದರ್ಶನ ಮಾಡದೆ ಬೆಂಗಳೂರಿನಲ್ಲಿ ತನ್ನ ಪಯಣ ಪ್ರಾರಂಭವಾಗಲ್ಲ ಎಂದು ಹೇಳಿದ್ದಾರೆ.

ಈ ಫೋಟೋವನ್ನು ನಟಿ ರಶ್ಮಿಕಾ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋ ಜೊತೆಗೆ, ಬೆಂಗಳೂರಿನಲ್ಲಿ ನನ್ನ ಪ್ರಯಾಣ ಯಾವಾಗಲೂ ಗಣಪನ ಪೂಜೆ ಮಾಡುವ ಮೂಲಕ ಪ್ರಾರಂಭವಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಅಂದಹಾಗೆ ರಶ್ಮಿಕಾ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುವ ಮೊದಲು ಬೆಂಗಳೂರಿನಲ್ಲೇ ವಾಸವಾಗಿದ್ದರು. ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟು, ಟಾಲಿವುಡ್‌ನಲ್ಲಿ ಖ್ಯಾತಿಗಳಿಸುತ್ತಿದ್ದಂತೆ ರಶ್ಮಿಕಾ ಹೈದರಾಬಾದ್‌ಗೆ ಶಿಫ್ಟ್ ಆದರು.

ಅಲ್ಲು ಅರ್ಜುನ್ ಸಿನಿಮಾಗೆ ಭಾರಿ ಬೇಡಿಕೆ; OTT ರೈಟ್ಸ್‌ಗಾಗಿ ಇಬ್ಬರ ನಡುವೆ ಬಿಗ್ ಫೈಟ್

ರಶ್ಮಿಕಾ ಸದ್ಯ ತಮಿಳು, ತೆಲುಗು ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆಯ ರಶ್ಮಿಕಾ ಗೆಳತಿಯ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಕೊಡವ ಶೈಲಿಯಲ್ಲಿ ಸೀರೆ ಧರಿಸಿ ರಶ್ಮಿಕಾ ಅಭಿಮಾನಿಗಳ ಗಮನ ಸೆಳೆದಿದ್ದರು. ಇದೀಗ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ರಶ್ಮಿಕಾ ಬಹುನಿರೀಕ್ಷೆಯ ಪುಷ್ಪ-2 ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ. ಮೊದಲ ಭಾಗ ದೊಡ್ಡ ಮಟ್ಟದಲ್ಲಿ ಸಕ್ಸಸ್ ಕಂಡಿತ್ತು. ಹಾಗಾಗಿ ಇದೀಗ ಎರಡನೇ ಭಾಗದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಸಿನಿಮಾದಲ್ಲಿ ಮಾತ್ರ ಅಲ್ಲ ಜಾಹೀರಾತಿನಲ್ಲೂ ರಶ್ಮಿಕಾ ಮಂದಣ್ಣ ನಂ 1..!

ಇನ್ನು ತಮಿಳಿನ ದಳಪತಿ ವಿಜಯ್ ಜೊತೆ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ರಶ್ಮಿಕಾ ವಿಜಯ್ ಜೊತೆ ತೆರೆಹಂಚಿಕೊಳ್ಳುತ್ತಿದ್ದು ಚಿತ್ರದ ಬಗ್ಗೆ ಉತ್ಸುಕರಾಗಿದ್ದಾರೆ. ಇನ್ನು ಬಾಲಿವುಡ್ ನಲ್ಲೂ ರಶ್ಮಿಕಾ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮೊದಲ ಸಿನಿಮಾ ಬಿಡುಗಡೆಗೂ ಮೊದಲು ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಸಿನಿಮಾಗೆ ಸಹಿ ಹಾಕಿದ್ದಾರೆ. ಮಿಷನ್ ಮಜ್ನು, ಗುಡ್ ಬೈ ಮತ್ತು ಅಭಿಷೇಕ್ ಬಚ್ಚನ್ ಜೊತೆ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಮಾಧುರಿಗೆ 'ನಿನ್ನನ್ನು ತಾಯಿಯಾಗಿ ನೋಡುತ್ತೇನೆ' ಎಂದಿದ್ದ ಎಂಎಫ್ ಹುಸೇನ್; ಆದ್ರೆ ಮುಂದೆ ಆಗಿದ್ದೇನು?
ಮದುವೆ ಮುರಿದುಬಿದ್ದ ಬಳಿಕ ಸ್ಮೃತಿ ಮಂಧಾನ-ಪಲಾಶ್ ಲೈಫ್‌ ಸ್ಟೈಲ್‌ನಲ್ಲಿ ಏನೆಲ್ಲಾ ಆಗೋಯ್ತು ನೋಡಿ...!