
ದೇಶದೆಲ್ಲೆಡೆ ಇಂದು (ಜುಲೈ 10) ಬಕ್ರೀದ್ (Eid-ul-Adha) ಹಬ್ಬದ ಸಂಭ್ರಮ. ಸಾಮೂಹಿಕ ಪ್ರಾರ್ಥನೆಯ ಮೂಲಕ ಮುಸ್ಲಿಂ ಬಾಂಧವರು ಪರಸ್ಪರ ಆಲಿಂಗನ ಮಾಡಿ, ಶುಭಾಷಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿತ್ತು. ವಿಶ್ವದಾದ್ಯಂತ ಇಂದು ಬಕ್ರೀದ್ ಹಬ್ಬವನ್ನು ಆಚರಿಸಲಾಯ್ತು. ತ್ಯಾಗ ಬಲಿದಾನದ ಸಂಕೇತವಾಗಿ, ಪ್ರಾಣಿ ಅಂಗಾಂಗವನ್ನು ಮೂರು ಭಾಗವಾಗಿಸಿ, ಅದನ್ನ ಹಂಚುವ ಮೂಲಕ ಈ ಬಕ್ರೀದ್ ಹಬ್ಬವನ್ನು ಶ್ರದ್ಧೆ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಿಸುತ್ತಾರೆ.
ಬಕ್ರಿದ್ ಹಬ್ಬಕ್ಕೆ ಅನೇಕರು ಶುಭಾಶಯ ಕೋರುತ್ತಿದ್ದಾರೆ. ಸಿನಿ ಸೆಲೆಬ್ರಿಟಿಗಳು ಸಹ ಸಾಮಾಜಿಕ ಜಾಲತಾಣದ ಮೂಲಕ ಮುಸ್ಲಿಂ ಅಭಿಮಾನಿಗಳಿಗೆ ಶುಭಾಶಯ ತಿಳಿಸಿದ್ದಾರೆ. ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸಹ ವಿಶೇಷವಾಗಿ ಬಕ್ರಿದ್ ಗೆ ವಿಶ್ ಮಾಡಿದ್ದಾರೆ. ಹಿಜಬ್ ಧರಿಸಿದ ಫೋಟೋ ಶೇರ್ ಮಾಡುವ ಮೂಲಕ ಮುಸ್ಲಿಂ ಬಾಂಧವರಿಗೆ ವಿಶ್ ಮಾಡಿದ್ದಾರೆ. ಅಂದಹಾಗೆ ರಶ್ಮಿಕಾ ಬಕ್ರಿದ್ ದಿನ ಮುಸ್ಲಿಂ ಹುಡುಗಿ ಅಫ್ರಿನ್ ಆಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ರಶ್ಮಿಕಾ ಮುಸ್ಲಿಂ ಯುವತಿಯ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಂದಹಾಗೆ ಇದು ರಶ್ಮಿಕಾ ನಟನೆಯ ಸೀತಾ ರಾಮಮ್ (Sita Ramam) ಚಿತ್ರದ ಪೋಸ್ಟರ್. ಈ ಸಿನಿಮಾದಲ್ಲಿ ರಶ್ಮಿಕಾ ಅಫ್ರಿನ್ ಎಂಬ ಮುಸ್ಲಿಂ ಹುಡುಗಿಯ ಪಾತ್ರದಲ್ಲಿ ನಟಿಸಿದ್ದಾರೆ. ಇಂದು ಬಕ್ರಿದ್ ಹಬ್ಬದ ವಿಶೇಷವಾಗಿ ರಶ್ಮಿಕಾ ಪೋಸ್ಟರ್ ಶೇರ್ ಮಾಡಿ ಸಿನಿಮಾತಂಡ ವಿಶ್ ಮಾಡಿದೆ. ಅಂದಹಾಗೆ ಸೀತಾ ರಾಮಮ್ ಸಿನಿಮಾದಲ್ಲಿ ನಾಯಕನಾಗಿ ದುಲ್ಕರ್ ಸಲ್ಮಾನ್ ನಟಿಸಿದ್ದಾರೆ. ನಾಯಕಿಯಾಗಿ ಮೃಣಾಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅಂದಹಾಗೆ ಸಿನಿಮಾಗೆ ಹನು ರಾಘವಪುಡಿ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಪೋಸ್ಟರ್ ಮೂಲಕ ಕಿತೀಹಲ ಹೆಚ್ಚಿಸಿರುವ ಇಈ ಸಿನಿಮಾ ಆಗಸ್ಟ್ 5ರಂದು ರಿಲೀಸ್ ಆಗುತ್ತಿದೆ.
ಟೈಗರ್ ಶ್ರಾಫ್ ಜೊತೆ ರಶ್ಮಿಕಾ ಮಂದಣ್ಣ ರೊಮ್ಯಾನ್ಸ್
ರಶ್ಮಿಕಾ ಸಿನಿಮಾ ಸಿನಿಮಾ ವಿಚಾರಕ್ಕೆ ಬರುವುದಾದರೆ, ತೆಲುಗು, ತಮಿಳು ಮತ್ತುಬಾಲಿವುಡ್ ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗುತ್ತಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ಮಂದಣ್ಣ ಮೊದಲ ಸಿನಿಮಾ ರಿಲೀಸ್ ಆಗುವ ಮೊದಲೇ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ಅಧಿಕೃತವಾಗಿ ಮೂರು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ. ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಇದೀಗ ಮೂರನೇ ಹಿಂದಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ರಶ್ಮಿಕಾ ಬಾಲಿವುಡ್ ನಟ ಟೈಗರ್ ಶ್ರಾಫ್ ಜೊತೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ವಿಜಯ್ ದೇವರಕೊಂಡ-ರಶ್ಮಿಕಾ ಕೊಟ್ರು ಗುಡ್‌ನ್ಯೂಸ್; ಮದುವೆಯಾಗ್ತಾರಂತಾ..!
ರಶ್ಮಿಕಾ ತೆಲುಗಿನಲ್ಲಿ ಪುಷ್ಪ-2 ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಬೇಕಿದೆ. ಹಿಂದಿಯಲ್ಲಿ ರಶ್ಮಿಕಾ ಸದ್ಯ ರಣಬೀರ್ ಕಪೂರ್ ಜೊತೆ ಅನಿಮಲ್ ಮತ್ತು ತಮಿಳಿನಲ್ಲಿ ದಳಪತಿ ವಿಜಯ್ ಜೊತೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಳಿಕ ಅಲ್ಲು ಅರ್ಜುನ್ ಜೊತೆ ಪುಷ್ಪ-2 ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.