'ಅನಿಮಲ್'​ ಚಿತ್ರದ ಹಸಿಬಿಸಿ ದೃಶ್ಯದ ಬಳಿಕ ರಶ್ಮಿಕಾ ಮಂದಣ್ಣ ಇನ್​ಸ್ಟಾಗ್ರಾಮ್​ನಲ್ಲಿ ಬರೆದ್ರು ದಾಖಲೆ!

By Suvarna News  |  First Published Dec 6, 2023, 6:06 PM IST

Rashmika's Instagram followers Touch 40 Million after intimate scenes in Animal suc
 


 ನಟ ರಣಬೀರ್‌ ಕಪೂರ್‌ (Ranbir Kapoor)  ಮತ್ತು ರಶ್ಮಿಕಾ ಮಂದಣ್ಣ ಅವರ ಅನಿಮಲ್‌ ಚಿತ್ರ ಇದೇ 1ರಂದು ಬಿಡುಗಡೆಯಾಗಿದ್ದು, ಭಾರಿ  ಸದ್ದು ಮಾಡುತ್ತಿದೆ.  ಅಡಲ್ಟ್​ ಸರ್ಟಿಫಿಕೇಟ್​ ಪಡೆದಿರುವ ಈ ಚಿತ್ರದಲ್ಲಿನ ಕೆಲವು ಹಸಿಬಿಸಿ ದೃಶ್ಯಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಇದಾಗಲೇ ಕತ್ತರಿ ಹಾಕಿದ್ದರೂ ನಾಗಾಲೋಟದಿಂದ ಓಡುತ್ತಿದೆ.  ವಿಶ್ವಾದ್ಯಂತ 500 ಕೋಟಿ ರೂಪಾಯಿ ದಾಟಿದರೆ, ಭಾರತದಲ್ಲಿ 300 ಕೋಟಿ ರೂಪಾಯಿ ಗಳಿಸಿದೆ. ಚಿತ್ರದಲ್ಲಿ ನಟಿ ರಶ್ಮಿಕಾ ಹಸಿಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದರೆ,  ನಟಿ ತೃಪ್ತಿ ಡಿಮ್ರಿ ಸಂಪೂರ್ಣ ನಗ್ನಳಾಗಿದ್ದ ವಿಡಿಯೋ ವೈರಲ್​ ಆಗುತ್ತಿದೆ.  ಸೆನ್ಸಾರ್​ ಮಂಡಳಿ ಹಲವು ದೃಶ್ಯಗಳಿಗೆ ಕತ್ತರಿ ಹಾಕಿದ್ದರೂ ರಶ್ಮಿಕಾ ಮಂದಣ್ಣ ಜೊತೆಗಿನ ಬೆಡ್​ರೂಮ್​ ಸೀನ್​ ಲೀಕ್​ ಆಗಿರುವ ಬೆನ್ನಲ್ಲೇ,  ತೃಪ್ತಿ ಡಿಮ್ರಿಯ ವಿಡಿಯೋ ಕೂಡ ವೈರಲ್​ ಆಗಿತ್ತು. ಇದರ ಬೆನ್ನಲ್ಲೇ ತೃಪ್ತಿ ಡಿಮ್ರಿ ಅವರ ಇನ್​ಸ್ಟಾಗ್ರಾಮ್​ ಫಾಲೋವರ್ಸ್​ ರಾತ್ರೋರಾತ್ರಿ ದಿಢೀರನೆ ಏರಿಕೆಯಾಗಿದ್ದರು. ಎಷ್ಟೇ ಪ್ರಯತ್ನ ಪಟ್ಟರೂ ಫಾಲೋವರ್ಸ್​ ಸಂಖ್ಯೆ ಹೆಚ್ಚಿಸಿಕೊಳ್ಳಲು ಸಾಧ್ಯವಾಗದಿದ್ದ ನಟಿಯೀಗ ಬೆತ್ತಲಾಗಿ ಒಂದೂವರೆ ಮಿಲಿಯನ್​  ಫಾಲೋವರ್ಸ್​ ಸಂಖ್ಯೆ ಏರಿಸಿಕೊಂಡಿದ್ದರು.
 
ಇದೀಗ ನಟಿ ರಶ್ಮಿಕಾ ಮಂದಣ್ಣ ಸರದಿ. ರಶ್ಮಿಕಾ ಅವರಿಗೆ ಸಹಜವಾಗಿ ಫಾಲೋವರ್ಸ್ ಸಂಖ್ಯೆ ಹೆಚ್ಚೇ ಇದೆ. ಆದರೆ ಅನಿಮಲ್​ನಲ್ಲಿ ಹಲವು ಆಕ್ಷೇಪಾರ್ಹ ದೃಶ್ಯಗಳಲ್ಲಿ ಈಕೆ ಕಾಣಿಸಿಕೊಂಡಿದ್ದಾರೆ. ಇವರ ಹಸಿಬಿಸಿ ದೃಶ್ಯ ನೋಡಿ ಹಲವರು ನಿದ್ದೆಗೆಟ್ಟಿದ್ದೂ ಆಗಿದೆ. ಇದೇ ಕಾರಣಕ್ಕೆ ರಶ್ಮಿಕಾ ಅವರ ಫಾಲೋವರ್ಸ್​ ದಿಢೀರ್​ ಏರಿಕೆಯಾಗಿದ್ದು ಮಾತ್ರವಲ್ಲದೇ ನಟಿ ದಾಖಲೆಯನ್ನೂ ಬರೆದಿದ್ದಾರೆ. ಇವರ Instagram ನಲ್ಲಿ 40 ಮಿಲಿಯನ್ ಫಾಲೋವರ್ಸ್ ಆಗಿದ್ದಾರೆ. ಅರೆನಗ್ನರಾಗಿ ನಟಿಸುವ ಮೂಲಕ ವರ್ಚಸ್ಸು ಹೆಚ್ಚಿಸಿಕೊಂಡಿರುವ ನಟಿ ಈ ಪರಿಯ ಫಾಲೋವರ್ಸ್​ ಹೊಂದುವ ಮೂಲಕ ದಕ್ಷಿಣ ಸೌತ್ ನಾಯಕಿಯರಲ್ಲಿ  ದಾಖಲೆ ಮಾಡಿದ್ದಾರೆ.

ಸಿನಿಮಾದಲ್ಲಿ ಸಂಪೂರ್ಣ ಬೆತ್ತಲಾದ್ರೆ ಹೀಗೂ ಆಗತ್ತಾ? 'ಅನಿಮಲ್​' ನಟಿ ತೃಪ್ತಿ ದಿಮ್ರಿಗೆ ಡಬಲ್​ ಧಮಾಕಾ!

Tap to resize

Latest Videos

ಅಷ್ಟಕ್ಕೂ ಅನಿಮಲ್​ ಚಿತ್ರ ಬಿಡುಗಡೆಗೂ ಮೊದಲು ರಿಲೀಸ್​ ಆಗಿದ್ದ ಹಾಡೊಂದು ಹಲ್​ಚಲ್​ ಸೃಷ್ಟಿಸಿತ್ತು. ಅದರಲ್ಲಿ  ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರ ಲಿಪ್​ಲಾಕ್​ ಸೀನ್​ ನೋಡಿ ಫ್ಯಾನ್ಸ್​ ಉಫ್​ ಎಂದಿದ್ದರು. ವಿಮಾನವೊಂದರಲ್ಲಿ ರಶ್ಮಿಕಾ ಮಂದಣ್ಣ, ಆಲಿಯಾ ಕಪೂರ್​ ಪತಿ ರಣಬೀರ್​ ಜೊತೆ ದೀರ್ಘ ಲಿಪ್​ಲಾಕ್​  ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು, ಚಿತ್ರಕ್ಕೆ ಅಡಲ್ಟ್​ ಸರ್ಟಿಫಿಕೇಸ್​ ಕೊಟ್ಟಿದ್ದ  ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಹಲವು ದೃಶ್ಯಗಳಿಗೆ ಕತ್ತರಿ ಹಾಕಿತ್ತು. ಆ ದೃಶ್ಯಗಳೆಲ್ಲಾ ಈಗ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

ಬಾಲಿವುಡ್​ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಹವಣಿಸುತ್ತಿರುವ ನಟಿ ರಶ್ಮಿಕಾ, ಬೋಲ್ಡ್​ ಪಾತ್ರಗಳಲ್ಲಿಯೂ ಹಿಂದೆ ಬಿದ್ದಿಲ್ಲ ಎಂದು ತೋರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಉದಾಹರಣೆಯೇ ಈ ಪರಿಯ ರೊಮ್ಯಾನ್ಸ್​ ದೃಶ್ಯ.  ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಹಾಡು ಹುವಾ ಮೈನ...  ರಿಲೀಸ್​ ಆಗಿತ್ತು. ಪ್ರೈವೇಟ್ ಜೆಟ್​ನಲ್ಲಿ ರಶ್ಮಿಕಾ ಮಂದಣ್ಣ ಮತ್ತು ರಣಬೀರ್​ ಕಪೂರ್​ ಅವರ ರೊಮ್ಯಾನ್ಸ್​ ಮಾಡಿದ್ದನ್ನು ನೋಡಿದವರು ಉಫ್​ ಎಂದಿದ್ದರು.  ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್​ ದೇವರಕೊಂಡ ನಡುವೆ ಕುಚ್​ ಕುಚ್​ ನಡೆಯುತ್ತಿದೆ, ಇಬ್ಬರೂ ಸೇರಿ ಟರ್ಕಿಯಲ್ಲಿ ಎಂಜಾಯ್​ ಮಾಡಿದ್ದಾರೆ ಎಂಬೆಲ್ಲಾ ಫೋಟೋಗಳು, ಗಾಸಿಪ್​ಗಳು ಹರಿದಾಡುತ್ತಿರುವ ನಡುವೆಯೇ ಈಕೆಯ ಹಸಿಬಿಸಿ ದೃಶ್ಯಗಳು ಸಕತ್​ ಸುದ್ದಿ ಮಾಡುತ್ತಿದೆ. 

ಅನಿಮಲ್​ ಚಿತ್ರಕ್ಕಾಗಿ ಸಂಪೂರ್ಣ ಬೆತ್ತಲಾದ ನಟಿ ತೃಪ್ತಿ: ಸಿನಿಮಾದಲ್ಲಿ ಕತ್ತರಿ ಹಾಕಿದ್ದ ವಿಡಿಯೋ ವೈರಲ್​!

click me!