Kabzaa; 50 ದೇಶ, 4000ಕ್ಕೂ ಅಧಿಕ ಚಿತ್ರಮಂದಿರ, ಅದ್ದೂರಿಯಾಗಿ ತೆರೆಗೆ ಬಂದ ರಿಯಲ್ ಸ್ಟಾರ್ ಸಿನಿಮಾ

By Suvarna News  |  First Published Mar 17, 2023, 9:30 AM IST

ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಅದ್ದೂರಿಯಾಗಿ ರಿಲೀಸ್ ಆಗಿದೆ. 



ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾ ಅದ್ದೂರಿಯಾಗಿ ತೆರೆಗೆ ಬಂದಿದೆ. ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಿದೆ. ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿದ್ದ ಕನ್ನಡದ ಕಬ್ಜ ಹೇಗಿದೆ ಎಂದು ನೋಡಲು ಅಭಿಮಾನಿಗಳು ಕಾತರರಾಗಿದ್ದರು. ಇದೀಗ ಎಲ್ಲಾ ಕಾತರ ಮತ್ತು ಕುತೂಹಲಕ್ಕೆ ತೆರೆ ಬಿದ್ದಿದೆ. ಅಭಿಮಾನಿಗಳು ಬೆಳಗ್ಗೆಯೇ ಕಬ್ಜ ನೋಡಿ ಆನಂದಿಸುತ್ತಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕಬ್ಜ ಸಿನಿಮಾ ರಿಲೀಸ್ ಆಗಿದೆ.

ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರುವ ಕಬ್ಜ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.   ಮೂವರು ಸ್ಟಾರ್ ನಟರು ಒಟ್ಟಿಗೆ ಕಾಣಿಸಿಕೊಂಡಿರುವ ಕಬ್ಜ ಅಭಿಮಾನಿಗಳ ಕಣ್ಣಿಗೆ ದೊಡ್ಡ ಹಬ್ಬವಾಗಿದೆ.  ಅಂದಹಾಗೆ ಕಬ್ಜ ಸಿನಿಮಾ 7 ಭಾಷೆಗಳಲ್ಲಿ ರಿಲೀಸ್ ಆಗಿದೆ. ಸುಮಾರು 50ಕ್ಕೂ ಅಧಿಕ ದೇಶಗಳಲ್ಲಿ ಕಬ್ಜ ಬಿಡುಗಡೆಯಾಗುತ್ತಿದೆ. ವಿಶೇಷ ಎಂದರೆ 4000ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಕಬ್ಜ ತೆರೆಗೆ ಬರುತ್ತಿದೆ.  

Tap to resize

Latest Videos

ಕರ್ನಾಟಕದಲ್ಲೂ ಕಬ್ಜ ಅದ್ದೂರಿಯಾಗಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಕಬ್ಜ ಬರೋಬ್ಬರಿ 450 ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಇಂದು ವಿಶೇಷ ಎಂದರೆ ಪವರ್ ಸ್ಟಾರ್ ಪುನೀತ್ ಅವರ ಜನ್ಮ ದಿನ. ಈ ವಿಶೇಷ ದಿನದಂದು ಕಬ್ಜ ಸಿನಿಮಾ ತೆರೆಗೆ ಬರುತ್ತಿದೆ. ಅನೇಕ ಚಿತ್ರಮಂದಿರಗಳಲ್ಲಿ ಅಪ್ಪು ಕಟೌಟ್ ಕೂಡ ರಾರಾಜಿಸುತ್ತಿದೆ. ಈ ಬಗ್ಗೆ ರಿಯಲ್ ಸ್ಟಾರ್ ಪುಣ್ಯಾತ್ಮನ ಹುಟ್ಟುಹಬ್ಬದ ದಿನ ನಮ್ಮ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ ಎಂದು ಹೇಳಿದ್ದರು. 

ಬೆಂಗಳೂರಿನಲ್ಲೂ ಕಬ್ಜ ದರ್ಬಾರ್ ಜೋರಾಗಿದೆ. ರಾಜಧಾನಿಯಲ್ಲೇ ಸುಮಾರು 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಗೆ ಬರುತ್ತಿದೆ. ಈಗಾಗಲೇ ಅನೇಕ ಚಿತ್ರಮಂದಿರಗಳು ಹೌಸ್ ಆಗಿವೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಕಬ್ಜದ ಹಬ್ಬ ಜೋರಾಗಿರಲಿದೆ. ಮೂವರು ಸ್ಟಾರ್ಸ್ ಒಟ್ಟಿಗೆ ತೆರೆಮೇಲೆ ಬಂದಿರುವುದನ್ನು ನೋಡಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಇದೀಗ ಮೂವರನ್ನು ಒಟ್ಟಿಗೆ ನೋಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಿಯಲ್ ಸ್ಟಾರ್‌ಗೆ ನಾಯಕಿಯಾಗಿ ಶ್ರೀಯಾ ಶರಣ್ ಕಾಣಿಸಿಕೊಂಡಿದ್ದಾರೆ. ಶ್ರೀಯಾ ಪಾತ್ರ ಕೂಡ ಭಾರಿ ನಿರೀಕ್ಷೆ ಮೂಡಿಸಿತ್ತು. ಶ್ರೀಯಾ ಲುಕ್ ಅಭಿಮಾನಿಗಳ ಹೃದಯ ಗೆದ್ದಿತ್ತು.ಟ್ರೈಲರ್ ಮತ್ತು ಹಾಡುಗಳ ಮೂಲಕ ಭಾರಿ ಕುತೂಹಲ ಮೂಡಿಸಿದ್ದ ಕಬ್ಜ ಹೇಗಿದೆ ಎನ್ನುವ ಸುಂಪೂರ್ಣ ವರದಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದೆ. 


 

click me!