ವ್ಯಾಕ್ಸೀನ್ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ಬೇಡ: ಚುನಾವಣಾ ಆಯೋಗ ಸೂಚನೆ

Suvarna News   | Asianet News
Published : Mar 06, 2021, 02:55 PM ISTUpdated : Mar 06, 2021, 05:05 PM IST
ವ್ಯಾಕ್ಸೀನ್ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ಬೇಡ: ಚುನಾವಣಾ ಆಯೋಗ ಸೂಚನೆ

ಸಾರಾಂಶ

ಎಸೆಂಬ್ಲಿ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗ ಸ್ಟ್ರಿಕ್ಟ್ ರೂಲ್ಸ್ | ವ್ಯಾಕ್ಸೀನ್ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋ ತೆಗೆಯಲು ಚುನಾವಣಾ ಆಯೋಗ ಸೂಚನೆ

ನವದೆಹಲಿ(ಮಾ.06): ವಿಧಾನಸಭಾ ಚುನಾವಣೆಗೇ ಕೆಲವೇ ವಾರ ಮುನ್ನ ಚುನಾವಣಾ ಆಯೋಗ ಕೊರೋನಾ ವೈರಸ್ ವ್ಯಾಕ್ಸೀನ್ ಸರ್ಟಿಫಿಕೇಟ್ನಿಂದ ಮೋದಿಯ ಫೋಟೋ ತೆಗೆಯುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

4 ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಎಸೆಂಬ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಟಿಫಿಕೇಟ್ನಲ್ಲಿ ಮೋದಿ ಫೋಟೋ ತೆಗೆಯಲು ಸೂಚನೆ ನೀಡಿದೆ. ಈಗಾಗಲೇ ಎಲೆಕ್ಷನ್ ಕೋಡ್ ಆಫ್ ಕಂಡಕ್ಟ್ ಜಾರಿಯಲ್ಲಿದ್ದು, ಈ ರೀತಿ ಮಾಡುವಂತಿಲ್ಲ ಎಂದು ಹೇಳಿದೆ.

 

ಈ ವಾರದ ಆರಂಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ರಾಜ್ಯದಲ್ಲಿ ಪ್ರಧಾನ ಮಂತ್ರಿ ಅಧಿಕೃತ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಆರೋಪಿಸಿದ್ದರು.

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಗೆ ಸೂಚನೆ ನೀಡಿತ್ತು. ಈಘಟನೆಯ ಬೆನ್ನಲ್ಲೇ ಇದೀಗ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ವ್ಯಾಕ್ಸೀನ್ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಲು ಸೂಚಿಸಲಾಗಿದೆ.

 

ಕೇಂದ್ರ ಆರೋಗ್ಯ ಸಚಿವಾಲಯ ನೀಡಿದ ವ್ಯಾಕ್ಸೀನ್  ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ಇರುವುದನ್ನು ಪಶ್ಚಿಮ ಬಂಗಳಾದ ಆಡಳಿತ ಪಕ್ಷ ತೀವ್ರವಾಗಿ ವಿರೋಧಿಸಿತ್ತು. ವೈದ್ಯರು, ನರ್ಸ್, ಆರೋಗ್ಯ ಸಿಬ್ಬಂದಿ ಕೆಲಸದ ಕ್ರೆಡಿಟ್ ಮೋದಿ ತೆಗೆದುಕೊಂಡಿದ್ದಾರೆ ಎಂದು ಟಿಎಂಸಿ ಆರೋಪಿಸಿತ್ತು.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಮಾರ್ಚ್ 27ರಿಂದ ವಿಧಾನಸಭಾ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27, ಏ.01, ಏ.06, ಏ.10, ಏ.17, ಏ.22, ಏ.26, ಏ.19ರಂದು ನಡೆಯಲಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏ.06ರಂದು ಮತದಾನ ನಡೆಯಲಿದೆ. ಪುದುಚೇರಿಯಲ್ಲಿಯೂ ಅದೇ ದಿನ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಮಾರ್ಚ್ 27, ಏ.01, ಏ.06ರಂದು ಚುನಾವಣೆ ನಡೆಯಲಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
Dhurandhar Review: ಹಿಂದೂಗಳಿಗೆ ಪ್ರಥಮ ಶತ್ರು ಹಿಂದೂ-ಮೊಬೈಲ್‌ ಕೂಡ ನೋಡದಂತೆ ಮಾಡೋ Ranveer Singh ಸಿನಿಮಾ!