
‘ಕಾಂತಾರ ಅಧ್ಯಾಯ 1’ ಸಿನಿಮಾ ಬಿಡುಗಡೆಗೂ ಮೊದಲೇ ರಿಷಬ್ ಶೆಟ್ಟಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಎಸ್‌ಎಸ್ ರಾಜಮೌಳಿ ಗರಡಿಯಲ್ಲಿ ಪಳಗಿರುವ ತೆಲುಗಿನ ನಿರ್ದೇಶಕ ಅಶ್ವಿನ್ ಗಂಗರಾಜು ನಿರ್ದೇಶನದ ಐತಿಹಾಸಿಕ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಅವರು ನಾಯಕನಾಗಿ ನಟಿಸುತ್ತಿದ್ದಾರೆ.
ಇದು ರಿಷಬ್ ಶೆಟ್ಟಿ ಒಪ್ಪಿಕೊಂಡಿರುವ ಮೂರನೇ ಪ್ಯಾನ್ ಇಂಡಿಯಾ ಸಿನಿಮಾ. ಈಗಾಗಲೇ ಅವರು ‘ಜೈ ಹನುಮಾನ್’, ‘ಛತ್ರಪತಿ ಶಿವಾಜಿ ಮಹಾರಾಜ್’ ಎಂಬ ಎರಡು ಪ್ಯಾನ್ ಇಂಡಿಯಾದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಹೊಸ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದ್ದು, ‘ಸುಟ್ಟ ಭೂಮಿಯಿಂದ ಒಬ್ಬ ಬಂಡುಕೋರ ಹುಟ್ಟಿದ’ ಎಂಬ ಟ್ಯಾಗ್‌ಲೈನ್ ನೀಡಲಾಗಿದೆ.
‘ಎಲ್ಲ ಬಂಡುಕೋರರೂ ಯುದ್ಧವನ್ನು ಆಯ್ಕೆ ಮಾಡುವುದಿಲ್ಲ. ಕೆಲವರನ್ನು ವಿಧಿ ಆಯ್ಕೆ ಮಾಡುತ್ತದೆ ಮತ್ತು ಈ ಸಿನಿಮಾ ಅಂಥಾ ಒಬ್ಬ ಬಂಡುಕೋರನ ಕಥೆ ಹೇಳುತ್ತದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
18ನೇ ಶತಮಾನದಲ್ಲಿ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಪ್ರಕ್ಷುಬ್ಧತೆಯಲ್ಲಿ ಜನಜೀವನ ದುಸ್ತರವಾಗಿದ್ದಾಗ ಉದಯಿಸಿದ ಬಂಡುಕೋರನ ಕಥೆ ಈ ಚಿತ್ರದ್ದು ಎನ್ನಲಾಗಿದೆ. ಸಿತಾರಾ ಎಂಟರ್‌ಟೇನ್‌ಮೆಂಟ್‌ನ ನಾಗವಂಶಿ ಮತ್ತು ಸಾಯಿ ಸೌಜನ್ಯ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.