'RRR' ಕಲೆಕ್ಷನ್; 2ನೇ ದಿನವೂ ಭರ್ಜರಿ ಗಳಿಕೆ ಮಾಡಿದ ರಾಜಮೌಳಿ ಸಿನಿಮಾ

By Shruiti G Krishna  |  First Published Mar 27, 2022, 11:03 AM IST

ನಿರ್ದೇಶಕ ರಾಜಮೌಳಿ ಸಾರಥ್ಯದಲ್ಲಿ ಮೂಡಿಬಂದಿರುವ ಆರ್ ಆರ್ ಆರ್ ಸಿನಿಮಾ 2ನೇ ದಿನವೂ ಭರ್ಜರಿ ಕಲೆಕ್ಷನ್ ಮಾಡಿದೆ. ಹಿಂದಿ ಮತ್ತು ವಿದೇಶಗಳಲ್ಲಿ RRR ಸಿನಿಮಾ ಮೊದಲ ದಿನಕ್ಕಿಂತ ಹೆಚ್ಚಿನ ಕಲೆಕ್ಷನ್ ಮಾಡಿದೆ.


ಎಸ್ ಎಸ್ ರಾಜಮೌಳಿ ಸಾರಥ್ಯದಲ್ಲಿ ಬಂದ ಆರ್ ಆರ್ ಆರ್ ಸಿನಿಮಾ ಕೊನೆಗೂ ಚಿತ್ರಮಂದಿರಕ್ಕೆ ಎಂಟ್ರಿ ಕೊಟ್ಟಿದೆ. ಕೋಟ್ಯಾಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಆರ್ ಆರ್ ಆರ್ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಚಿತ್ರ ನೋಡಿ ಪ್ರೇಕ್ಷಕರು ಫುಲ್ ಖುಷ್ ಆಗಿದ್ದಾರೆ. ರಾಮ್ ಚರಣ್ ಮತ್ತು ಜೂ. ಎನ್ ಟಿ ಆರ್ ಅಭಿನಯಕ್ಕೆ ಪ್ರೇಕ್ಷಕರು ಮನ ಸೋತಿದ್ದಾರೆ. ಬಾಕ್ಸ್ ಆಫೀಸ್ ನಲ್ಲೂ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದೆ. ಮೊದಲ ದಿನ ಆರ್ ಆರ್ ಆರ್ ಸಿನಿಮಾ 223 ಕೋಟಿ ರೂಪಾಯಿ ಬಾಚಿಕೊಂಡಿದೆ. ಎರಡನೇ ದಿನವೂ ಕಲೆಕ್ಷನ್ ಅಬ್ಬರ ಮುಂದುವರೆದಿದೆ.

ಬಾಲಿವುಡ್ ಸಿನಿಮಾ ವಿಶ್ಲೇಷಕ ತರಣ್ ಆದರ್ಶ್ ನೀಡಿರುವ ಮಾಹಿತಿ ಪ್ರಕಾರ ಆರ್ ಆರ್ ಆರ್ ಸಿನಿಮಾ ಮೊದಲ ದಿನ, ಆಂಧ್ರ ಪ್ರದೇಶದಲ್ಲಿ 75 ಕೋಟಿ ರೂ. ಗಳಿಕೆ ಮಾಡಿದೆ. ಕರ್ನಾಟಕದಲ್ಲಿ 14.5 ಕೋಟಿ ರೂ. ಗಳಿಕೆ ಮಾಡಿದ್ರೆ ತಮಿಳುನಾಡಿನಲ್ಲಿ 10 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕೇರಳದಲ್ಲಿ 4 ಕೋಟಿ ರೂ. ಆರ್ ಆರ್ ಆರ್ ಸಿನಿಮಾ ಬಾಚಿಕೊಂಡಿದೆ. ಉತ್ತರ ಭಾರತದಲ್ಲಿ 25 ಕೋಟಿ ರೂ. ಭಾರತದಲ್ಲಿ ರಾಜಮೌಳಿ ಸಿನಿಮಾ 156 ಕೋಟಿ ರೂಪಾಯಿ ಬಾಚಿಕೊಂಡಿದೆ. ವಿದೇಶದಲ್ಲಿಯೂ ಆರ್ ಆರ್ ಆರ್ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಯು ಎಸ್ ನಲ್ಲಿ 42 ಕೋಟಿ ಕಲೆಕ್ಷನ್ ಮಾಡಿದೆ, ಬೇರೆ ಬೇರೆ ದೇಶಗಳಲ್ಲಿ 25 ಕೋಟಿ ರೂ. ಒಟ್ಟು ಆರ್ ಆರ್ ಆರ್ ಕಲೆಕ್ಷನ್ 223 ಕೋಟಿ ರೂಪಾಯಿ ಆಗಿದೆ. 

'RRR' ಸಿನಿಮಾವನ್ನು ಹಾಡಿ ಹೊಗಳಿದ ಅಲ್ಲು ಅರ್ಜುನ್ ಮತ್ತು ಮಹೇಶ್ ಬಾಬು

Tap to resize

Latest Videos

ಇನ್ನು ಎರಡನೇ ದಿನವೂ ಆರ್ ಆರ್ ಆರ್ ಕಲೆಕ್ಷನ್ ಅಬ್ಬರ ಮುಂದುವರೆದಿದೆ. ಮೊದಲ ದಿನ ಹಿಂದಿ ಭಾಷೆಯಲ್ಲಿ ಆರ್ ಆರ್ ಆರ್ 14 ಕೋಟಿ ಬಾಚಿಕೊಂಡಿತ್ತು. 2ನೇ ದಿನದ ಕಲೆಕ್ಷನ್ ಮತ್ತಷ್ಟು ಹೆಚ್ಚಾಗಿದೆ. ಎರಡನೇ ದಿನ ಹಿಂದಿಯಲ್ಲಿ ರಾಜಮೌಳಿ ಸಿನಿಮಾ 24.5 ಕೋಟಿ ರೂ.ಗಳಿಕೆ ಮಾಡಿದೆ. ಭಾನುವಾರ ರಜೆ ಇರುವುದರಿಂದ ಕಲೆಕ್ಷನ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಆಸ್ಟ್ರೇಲಿಯಾ ಮತ್ತು ಯುಎಸ್ ನಲ್ಲಿಯೂ ಆರ್ ಆರ್ ಆರ್ ಉತ್ತಮ ಕಲೆಕ್ಷನ್ ಮಾಡಿದೆ. ಚಿತ್ರದ ಹಿಂದಿ ಮತ್ತು ವಿದೇಶಿ ಕಲೆಕ್ಷನ್ ಬಗ್ಗೆ ತೆಲುಗು ಸಿನಿಮಾಗಳ ವಿಶ್ಲೇಷಕ ರಮೇಶ್ ಬಾಲ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.

improves Hindi collections on Day 2..

All-India Early Estimates ₹ 24 crs Nett..

— Ramesh Bala (@rameshlaus)

ಉತ್ತಮ ಕಲೆಕ್ಷನ್ ಮಾಡುತ್ತ ಮುನ್ನುಗ್ಗುತ್ತಿರುವ ಆರ್ ಆರ್ ಆರ್ ಸಿನಿಮಾ 2ನೇ ದಿನದ ಕಲೆಕ್ಷನ್ ನಲ್ಲಿ 500 ಕೋಟಿ ದಾಟುತ್ತಾ ಎನ್ನುವುದು ಕುತೂಹಲ ಮೂಡಿಸಿದೆ. ಚಿತ್ರದ ಸಂಪೂರ್ಣ ಕಲೆಕ್ಷನ್ ವಿವರ ಇನ್ನು ಬಹಿರಂಗವಾಗಬೇಕಿದೆ. ಇನ್ನು ಭಾನುವಾರ ರಜೆ ದಿನವಾಗಿದ್ದರಿಂದ ಸಿನಿಮಾದ ಕಲೆಕ್ಷನ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

RRR ಅಂದರೇನು? ಸಿನಿಮಾಗೆ ಸಂಬಂಧಿಸಿದ ಕೆಲವು ಇಂಟರೆಸ್ಟಿಂಗ್‌ ವಿಷಯಗಳು

ಇನ್ನು ಸಿನಿಮಾದ ಬಗ್ಗೆ ಹೇಳುವುದಾದರೆ ಆರ್ ಆರ್ ಆರ್ ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತರಾಮ ರಾಜು ಮತ್ತು ಕೋಮರಾಮ್ ಭೀಮ್ ಅವರ ಜೀವನದ ಆಧರಿಸಿದ ಕಾಲ್ಪನಿಕ ಕಥೆಯಾಗಿದೆ. ಚಿತ್ರದಲ್ಲಿ ರಾಮ್ ಚರಣ್ ಅಲ್ಲೂರಿ ಸೀತರಾಮ ರಾಜು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕೋಮರಾಮ್ ಭೀಮ್ ಪಾತ್ರದಲ್ಲಿ ಜೂ.ಎನ್ ಟಿ ಆರ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಸುಮಾರು 450 ಕೋಟಿ ರೂ. ಬಜೆಟ್ ನಲ್ಲಿ ತಯಾರಾಗಿದೆ. ಡಿವಿವಿ ದಾನಯ್ಯ ನಿರ್ಮಾಣದಲ್ಲಿ ಸಿನಿಮಾ ಮೂಡಿಬಂದಿದೆ. ಚಿತ್ರದಲ್ಲಿ ಅಲಿಯಾ ಭಟ್, ಸಮುದ್ರ ಕಣಿ, ಅಜಯ್ ದೇವಗನ್, ಒಲಿವಿಯಾ ಮೋರಿಸ್ ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದಾರೆ.

click me!