RRR Movie: ವೈಭವದ ಟ್ರೇಲರ್ ಬಿಡುಗಡೆ ದಿನಾಂಕ ಹಂಚಿಕೊಂಡ ರಾಮ್​ ಚರಣ್

Suvarna News   | Asianet News
Published : Nov 29, 2021, 07:29 PM IST
RRR Movie: ವೈಭವದ ಟ್ರೇಲರ್ ಬಿಡುಗಡೆ ದಿನಾಂಕ ಹಂಚಿಕೊಂಡ ರಾಮ್​ ಚರಣ್

ಸಾರಾಂಶ

ರಾಮ್​ ಚರಣ್ ಮತ್ತು ಜ್ಯೂ.ಎನ್​ಟಿಆರ್ ಕಾಂಬಿನೇಷನ್‌ನ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಆರ್‌ಆರ್‌ಆರ್‌ ಚಿತ್ರದ ಟ್ರೇಲರ್ ರಿಲೀಸ್​ ದಿನಾಂಕದ ಬಗ್ಗೆ ಚಿತ್ರತಂಡ ಘೋಷಣೆ ಮಾಡಿದೆ.

ರಾಮ್​ ಚರಣ್ (Ram Charan)​ ಮತ್ತು ಜ್ಯೂ.ಎನ್​ಟಿಆರ್ (Jr.NTR)  ಕಾಂಬಿನೇಷನ್‌ನ ಎಸ್‌.ಎಸ್‌.ರಾಜಮೌಳಿ (SS Rajamouli) ನಿರ್ದೇಶನದ ಬಹು ನಿರೀಕ್ಷಿತ ಚಿತ್ರ 'ಆರ್‌ಆರ್‌ಆರ್‌' (RRR) (ರೈಸ್‌–ರೋರ್‌–ರಿವೋಲ್ಟ್‌) ಚಿತ್ರ ಈಗಾಗಲೇ ಸಿನಿರಸಿಕರಲ್ಲಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಚಿತ್ರದ ಫಸ್ಟ್‌ಲುಕ್, ಪೋಸ್ಟರ್, ಪ್ರೋಮೋ ಹಾಗೂ ಹಾಡುಗಳು ಸಹ ಬಿಡುಗಡೆಯಾಗಿ ಪ್ರೇಕ್ಷಕರಲ್ಲಿ ಸಂಚಲನವನ್ನುಂಟು ಮಾಡಿದೆ. ಇದೀಗ ಚಿತ್ರದ ಬಗ್ಗೆ ಹೊಸ ಅಪ್‌ಡೇಟ್ ಸಿಕ್ಕಿದೆ. ಹೌದು! 'ಆರ್‌ಆರ್‌ಆರ್‌' ಚಿತ್ರದ ಟ್ರೇಲರ್​ (Trailer) ರಿಲೀಸ್​ ದಿನಾಂಕದ ಬಗ್ಗೆ ಚಿತ್ರತಂಡ ಘೋಷಣೆ ಮಾಡಿದೆ.

ಈ ಬಗ್ಗೆ ಚಿತ್ರದ ನಾಯಕ ರಾಮ್ ಚರಣ್ ತಮ್ಮ ಇನ್‌ಸ್ಟಾಗ್ರಾಮ್ (Instagram) ಖಾತೆಯಲ್ಲಿ 'ಆರ್‌ಆರ್‌ಆರ್‌' ಚಿತ್ರದ ವೈಭವವನ್ನು ವೀಕ್ಷಿಸಲು ಸಿದ್ಧರಾಗಿ. ಡಿಸೆಂಬರ್​ 3ಕ್ಕೆ ಸಿನಿಮಾದ ಟ್ರೇಲರ್ ರಿಲೀಸ್ ಆಗಲಿದೆ ಎಂದು ಕ್ಯಾಪ್ಷನ್ ಬರೆದು ಚಿತ್ರದ ಪೋಸ್ಟರ್‌ವೊಂದನ್ನು ಹಂಚಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳನ್ನು ಬಿಡುಗಡೆ​ ಮಾಡುವ ಮೂಲಕ ಸಾಕಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಡಿಸೆಂಬರ್​ 3ರಂದು ಚಿತ್ರದ ಟ್ರೇಲರ್​ ಬಿಡುಗಡೆಯಾಗುತ್ತಿದೆ. ಹೀಗಾಗಿ ಚಿತ್ರದ ಮೇಲೆ ಸಿನಿಪ್ರಿಯರ ಕಾತುರ ಹೆಚ್ಚಿದೆ. ಟ್ರೇಲರ್ ರಿಲೀಸ್ ಆದ ನಂತರ ಚಿತ್ರದ ಪ್ರಮೋಷನ್‌ಗಳನ್ನು ನಡೆಸುವುದಾಗಿ ಚಿತ್ರತಂಡ ತಿಳಿಸಿದೆ.

RRR Song Launch: ಕನ್ನಡದಲ್ಲಿ ಅಷ್ಟಾಗಿ ಮಾತನಾಡಕ್ಕೆ ಬರಲ್ಲವೆಂದ ರಾಜಮೌಳಿ

ವಿಶೇಷವಾಗಿ ಕರ್ನಾಟಕದಲ್ಲಿ (Karnataaka) ಗ್ರ್ಯಾಂಡ್​ ಆಗಿ ಪ್ರೀ-ರಿಲೀಸ್​ ಇವೆಂಟ್​ ನಡೆಸಲು ಚಿತ್ರತಂಡ ನಿರ್ಧರಿಸಿದ್ದು, ಈ ಬಗ್ಗೆ ರಾಜಮೌಳಿ ಇತ್ತೀಚೆಗೆ ತಿಳಿಸಿದ್ದರು. ಚಿತ್ರದ 'ಜನನಿ' (Janani) ಸಾಂಗ್​ ರಿಲೀಸ್​ ಮಾಡುವುದಕ್ಕೆ ಬೆಂಗಳೂರಿಗೆ ಆಗಮಿಸಿ, ಎಲ್ಲರಿಗೂ ಸಂದರ್ಶನ ಕೊಡುತ್ತೇನೆ. ಕಂಪ್ಲೀಟ್ ಟೀಮ್ ಜೊತೆಗೆ ಮುಂದಿನ ತಿಂಗಳು ಕರ್ನಾಟಕಕ್ಕೆ ಬರುತ್ತೇವೆ. 'ಆರ್‌ಆರ್‌ಆರ್‌' ಸಿನಿಮಾದಲ್ಲಿ ಎಲ್ಲಾ ಆ್ಯಕ್ಷನ್‍ಗಳು ಸೂಪರ್ ಆಗಿದೆ. ಎಮೋಷನಲ್ ದೃಶ್ಯಗಳು ತುಂಬಾ ಇದೆ. ಬ್ಯಾಂಗ್ ಗ್ರೌಂಡ್ ಮ್ಯೂಸಿಕ್ ಸಹ ಚೆನ್ನಾಗಿದೆ. ಇವತ್ತು ನಿಮ್ಮ ಜೊತೆ ಅನುಭವ ಶೇರ್ ಮಾಡಿದಕ್ಕೆ ಖುಷಿಯಾಗುತ್ತಿದೆ ಎಂದು ಸಿನಿಮಾ ಕುರಿತಾಗಿ ಕೆಲವು ಮಾಹಿತಿಯನ್ನು ರಾಜಮೌಳಿ ತಿಳಿಸಿದ್ದರು.

ಇತ್ತೀಚೆಗಷ್ಟೇ 'ಆರ್‌ಆರ್‌ಆರ್‌' ಚಿತ್ರದ ಗ್ಲಿಂಪ್ಸ್ (Glimpse) ವಿಡಿಯೋ ಬಿಡುಗಡೆಯಾಗಿ ಯೂಟ್ಯೂಬ್‌ನಲ್ಲಿ ಭರ್ಜರಿ ವೀಕ್ಷಣೆ ಪಡೆದಿತ್ತು.ಗ್ಲಿಂಪ್ಸ್ ವಿಡಿಯೋದಲ್ಲಿ ಅಪ್ಪಟ ದೇಶಿ ಸಿನಿಮಾದಂತಿರುವ ಪಾತ್ರಗಳು ಸಿನಿರಸಿಕರ ಮನಸೆಳೆದಿತ್ತು. ಡಿವಿವಿ ದಾನಯ್ಯ (DVV Danayya) ಚಿತ್ರವನ್ನು ನಿರ್ಮಾಣ ಮಾಡಿದ್ದು, ಈ ಚಿತ್ರವು 1920ನೇ ಇಸವಿಯ ಆರಂಭದಲ್ಲಿ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೊಮರಂ ಭೀಮ್ ಅವರ ಜೀವನವನ್ನು ಆಧರಿಸಿದ ಕಾಲ್ಪನಿಕ ಕಥೆ. ಈ ಚಿತ್ರದಲ್ಲಿ ಚರಣ್ ರಾಮರಾಜು ಪಾತ್ರದಲ್ಲಿ, ಜೂನಿಯರ್ ಎನ್‌ಟಿಆರ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 

'ಆರ್‌ಆರ್‌ಆರ್‌' ಚಿತ್ರದ ಹೊಸ ಹಾಡು ರಿಲೀಸ್: ರಾಮ್​ ಚರಣ್​, ಜ್ಯೂ.ಎನ್​ಟಿಆರ್​ ಜಬರ್ದಸ್ತ್ ಡ್ಯಾನ್ಸ್

ಡಿವಿವಿ ಎಂಟರ್‌ಟೈನ್ಮೆಂಟ್ (DVV Entertainment) ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿ.ವಿಜಯೇಂದ್ರ ಪ್ರಸಾದ್ ಕಥೆ, ಮತ್ತು ಶ್ರೀಕರ್ ಪ್ರಸಾದ್ ಸಂಕಲನವಿದೆ. ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿರುವ 'ಆರ್‌ಆರ್‌ಆರ್‌' ಚಿತ್ರವು ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ. ಬಿಗ್‌ ಬಜೆಟ್‌ನಲ್ಲಿ ತಯಾರಾದ ಈ ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಒಲಿವಿಯಾ ಮೋರಿಸ್, ಸಮುದ್ರಕನಿ, ಅಲಿಸನ್ ಡೂಡಿ ಹಾಗೂ ರೇ ಸ್ಟೀವನ್ಸನ್ (Ray Stevenson) ಈ ಚಿತ್ರದಲ್ಲಿ ನಟಿಸಿದ್ದಾರೆ. ಜನವರಿ 7ರಂದು 'ಆರ್​ಆರ್​ಆರ್​' ಸಿನಿಮಾ ತೆರೆಗೆ ಬರುತ್ತಿದೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಡಾರ್ಲಿಂಗ್.. ಆ ಪ್ರೀತಿಯನ್ನು ಕಂಡು ನಿನಗೆ ಆನಂದಬಾಷ್ಪ ಬಂದಿರುತ್ತದೆ; ರಾಜಮೌಳಿ ಪತ್ರದ ಮರ್ಮವೇನು?
'ರೀನಾ, ಕಿರಣ್ & ಲವರ್ ಗೌರಿ.. 'ನಾವೆಲ್ಲರೂ ಒಂದೇ ಫ್ಯಾಮಿಲಿ' ಎಂದ ಅಮೀರ್ ಖಾನ್; ಒಳಗೊಳಗೇ ನಕ್ಕ ನೆಟ್ಟಿಗರು!