ಮಲೆನಾಡಿನ ಸಹಜ ಮಳೆಯಲ್ಲಿ 'ಸಲಗ' ಡ್ಯುಯೆಟ್ ಸಾಂಗ್ ಶೂಟಿಂಗ್..!

Suvarna News   | Asianet News
Published : Aug 12, 2020, 02:32 PM ISTUpdated : Aug 14, 2020, 03:33 PM IST
ಮಲೆನಾಡಿನ ಸಹಜ ಮಳೆಯಲ್ಲಿ 'ಸಲಗ' ಡ್ಯುಯೆಟ್ ಸಾಂಗ್ ಶೂಟಿಂಗ್..!

ಸಾರಾಂಶ

ಕೊರೋನ ಮಹಾಮಳೆಯಲ್ಲಿ ಮಲೆನಾಡ ರಮಣೀಯ ತಾಣಗಳಲ್ಲಿ ಮಧುರ ಸುಮಧುರ ಡ್ಯುಯೆಟ್ ಸಾಂಗ್‌ಗಳನ್ನು ನಯನ ಮನೋಹರವಾಗಿ ಚಿತ್ರಿಸಿ ಸಲಗ ಚಿತ್ರತಂಡ ಮತ್ತೊಮ್ಮೆ ಸುದ್ದಿ ಮಾಡಿದೆ.

ಕೊರೋನ ಮಹಾಮಳೆಯಲ್ಲಿ ಮಲೆನಾಡ ರಮಣೀಯ ತಾಣಗಳಲ್ಲಿ ಮಧುರ ಸುಮಧುರ ಡ್ಯುಯೆಟ್ ಸಾಂಗ್‌ಗಳನ್ನು ನಯನ ಮನೋಹರವಾಗಿ ಚಿತ್ರಿಸಿ ಸಲಗ ಚಿತ್ರತಂಡ ಮತ್ತೊಮ್ಮೆ ಸುದ್ದಿ ಮಾಡಿದೆ.

ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರೋ ಈ ಚಿತ್ರದಲ್ಲಿ ಡಾಲಿ ಧನಂಜಯ ಪ್ರಮುಖ‌ ಪಾತ್ರದಲ್ಲಿ‌ಕಾಣಿಸಿಕೊಂಡಿದ್ದು, ಸಂಜನಾ ಆನಂದ್ ನಾಯಕಿಯಾಗಿ‌ ಕಾಣಿಸಿಕೊಂಡಿದ್ದಾರೆ.

ಅಣ್ಣವ್ರ ಹುಟ್ಟು ಹಬ್ಬಕ್ಕೆ 'ಸಲಗ' ತಂಡದ ಸತ್ಕಾರ್ಯ; ವಿಡಿಯೋ ನೋಡಿ...

ಟಗರು ಕೆ.ಪಿ ಶ್ರೀಕಾಂತ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಈಗಾಗಲೇ ಹತ್ತು ಹಲವು ವಿಶೇಷಗಳಿಂದ ಉದ್ಯಮದಲ್ಲಿ ಹಾಗೂ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ನಡುವೆ ಕೋವಿಡ್ ಹಾವಳಿಯಿಂದ ಎಲ್ಲಾ ಲಾಕ್ ಆಗಿದ್ರೂ ಸಲಗ ಮಾತ್ರ ಮತ್ತೊಂದು ವಿಶೇಷ ವಿಚಾರದಿಂದ ಸಖತ್ತಾಗೇ ಸೌಂಡ್ ಮಾಡಿದೆ.

"

ಕೋವಿಡ್ ನಡುವೆ ಸರ್ಕಾರ ನೀಡಿರೋ ಎಲ್ಲಾ ಸೂಚನೆಗಳನ್ನು ಪಾಲಿಸಿ,   ನಾಯಕ ನಾಯಕಿ ಸೇರಿ ಕೇವಲ 12 ಮಂದಿ ತಂತ್ರಜ್ಞಾನದೊಂದಿಗೆ ಸಲಗದ ಈ ಬ್ಯೂಟಿಫುಲ್ ಹಾಡನ್ನ ಚಿತ್ರಿಸಿರೋದು ವಿಶೇಷ.

'ಕೆಮಿಸ್ಟ್ರಿ ಆಫ್‌ ಕರಿಯಪ್ಪ'ದಲ್ಲಿ ಮಿಂಚಿ 'ಸಲಗ' ಜೊತೆ ನಿಂತಿರುವ ನಟಿ ಇವರೇ!

ಸಲಗ ಚಿತ್ರಕ್ಕಾಗಿ ಚರಣ್ ರಾಜ್ ಸಂಯೋನೆಯ ಮಳೆಯೇ ಮಳೆಯೇ ಅಂಬೆಗಾಲಿಡುತ್ತಾ ಸುರಿಯೇ...ಅನ್ನೋ ರೊಮ್ಯಾಂಟಿಕ್ ಹಾಡನ್ನ ಸಾಹಿತ್ಯಕ್ಕೆ ತಕ್ಕಂತೆ ಜಡಿ‌ಮಳೆಯಲ್ಲೇ ಚಿತ್ರತಂಡ ಚಿತ್ರಿಸಿಕೊಂಡು ಬಂದಿದೆ.

ದುನಿಯಾ ವಿಜಯ್ ಸಂಜನಾ ಆನಂದ್ ನಡುವಿನ ಈ ಪ್ರಣಯ ಗೀತೆಯನ್ನು ಮಳೆ,ಚಳಿ ನಡುವೆ ಯಾವುದನ್ನು ಲೆಕ್ಕಿಸದೆ ಚಿತ್ರೀಕರಿಸಲಾಗಿದೆ. ಅದರಲ್ಲೂ ಛಾಯಾಗ್ರಹಕ ಶಿವಸೇನ ಕೆಲ‌ ಸೀಕ್ವೆನ್ಸ್ ಗಳನ್ನ ಒರಿಜಿನಲ್ ಮಳೆಯಲ್ಲೇ ಚಿತ್ರಿಸಿರೋದು ಮತ್ತೊಂದು ವಿಶೇಷ. ಇದೇ ಕಾರಣಕ್ಕೆ ಜಡಿ ಮಳೆಯ ಒಂದು ಶಾಟ್ ಗಾಗಿ ಚಿತ್ರತಂಡ ನಾಲ್ಕೈದು ಗಂಟೆ ಕಾದು 12 ಜನರೂ ಕೂಡಿ ತಲೆಗೊ‌ಂದು ಕೆಲಸದಂತೆ ಮಳೆ ‌ಕೆಸರಲ್ಲಿ ನಾಲ್ಕು ದಿನ ಎದ್ದು ಬಿದ್ದು ಅದ್ಭುತ ಹಾಡಿನ ಚಿತ್ರೀಕರಣ ಮಾಡಿದ್ದಾರೆ.

ಸಂಜನಾ ಆನಂದ್‌ಗೆ 5 ಪ್ರಶ್ನೆಗಳು;ಸಲಗ ಚಿತ್ರದ ನಾಯಕಿ ಜತೆ ಮಾತುಕತೆ!

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಹಾಸನದ ಸಕಲೇಶಪುರ ಸೇರಿ ಪಶ್ಚಿಮ ಘಟ್ಟಗಳ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಸಲಗ ಚಿತ್ರದಲ್ಲಿ ಈ ಹಾಡು ಮತ್ತೊಂದು ಸ್ಪೆಷಲ್ ಮತ್ತು‌ ಹೈಲೈಟ್ ಗಳಲ್ಲೊಂದಾಗಲಿದೆ ಎನ್ನಲಾಗುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ನಾನೇನು ಸಾಧುವಲ್ಲ.. ಹೀಗೆ ಮಾತಾಡೋಕೆ ನನಗೂ ಬರುತ್ತೆ: ಪುಷ್ಪ ನಟಿ ಹೇಳಿದ್ದೇನು?
ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?