ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕ ಬೇಕು; ಸಲ್ಮಾನ್ ಖಾನ್ ಹೇಳಿಕೆಗೆ ನೆಟ್ಟಿಗರು ಕೆಂಡಾಮಂಡಲ

Published : May 01, 2023, 03:21 PM IST
ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕ ಬೇಕು; ಸಲ್ಮಾನ್ ಖಾನ್ ಹೇಳಿಕೆಗೆ ನೆಟ್ಟಿಗರು ಕೆಂಡಾಮಂಡಲ

ಸಾರಾಂಶ

ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕ ಬೇಕು ಎಂದ ಸಲ್ಮಾನ್ ಖಾನ್  ಹೇಳಿಕೆಗೆ ನೆಟ್ಟಿಗರು ಕೆಂಡಾಮಂಡಲವಾಗಿದ್ದಾರೆ. 

ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸಿನಿಮಾ ಜೊತೆಗೆ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕವೂ ಸದ್ದು ಮಾಡುತ್ತಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಕಿಸಿ ಕಾ ಭಾಯ್ ಕಿಸಿ ಜಾನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಪೂಜಾ ಹೆಗ್ಡೆ ಜೊತೆ ಸಲ್ಮಾನ್ ಖಾನ್ ನಟಿಸಿದ್ದಾರೆ. ಸದ್ಯ ಸಿನಿಮಾ ಪ್ರಚಾರದಲ್ಲಿರುವ ಸಲ್ಮಾನ್ ಖಾನ್ ಹೆಣ್ಮಕ್ಕಳ ಬಟ್ಟೆ ವಿಚಾರವಾಗಿ ನೀಡಿರುವ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಲ್ಮಾನ್ ಖಾನ್ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. 

ಕಲವು ದಿನಗಳ ಹಿಂದೆ ಹಿಂದೆ ನಟಿ ಪಲಕ್​ ತಿವಾರಿ ಶೂಟಿಂಗ್ ಸೆಟ್ ನಲ್ಲಿ ಹೆಣ್ಮಕ್ಕಳು ಮೈ ತುಂಬಾ ಬಟ್ಟೆ ಹಾಕಿಕೊಂಡು ಬರಬೇಕು  ಎಂದು ಸಲ್ಮಾನ್ ಖಾನ್ ನಿಯಮ ಮಾಡಿದ್ದರು ಎಂದು ಹೇಳಿದ್ದರು. ಆ ಹೇಳಿಕೆ ವೈರಲ್ ಆಗುತ್ತಿದ್ದಂತೆ ತಮ್ಮ ಹೇಳಿಕೆಗೆ ಬೇರೆ ರೀತಿಯ ಸಮರ್ಥನೆ ನೀಡಲು ಪ್ರಯತ್ನಿಸಿದ್ದರು. ಆದರೆ ಈಗ ಈ ಬಗ್ಗೆ ಸ್ವತಃ ಸಲ್ಮಾನ್​ ಖಾನ್​ ಮೌನ ಮುರಿದಿದ್ದಾರೆ. ಮಹಿಳೆಯರ ಬಟ್ಟೆ  ಬಗ್ಗೆ ತಮಗೆ ಇರುವ ಅಭಿಪ್ರಾಯ ಏನು ಎಂಬುದನ್ನು ಬಹಿರಂಗವಾಗಿ ಹೇಳಿದ್ದಾರೆ. 

ಸಂದರ್ಶನದಲ್ಲಿ ಸಲ್ಮಾನ್ ಖಾನ್, 'ಮಹಿಳೆಯ ದೇಹ ಪವಿತ್ರವಾದುದು. ಅದನ್ನು ಎಷ್ಟು ಮುಚ್ಚಿಟ್ಟುಕೊಳ್ಳುತ್ತೀರೋ ಅಷ್ಟು ಉತ್ತಮ' ಎಂದು ಹೇಳಿದ್ದರು. 'ಸಮಸ್ಯೆ ಇರುವುದು ಹುಡುಗಿಯರಲ್ಲಿ ಅಲ್ಲ. ಸಮಸ್ಯೆ ಇರುವುದು ಹುಡುಗರಲ್ಲಿ. ನಿಮ್ಮ ತಾಯಿ, ತಂಗಿ, ಪತ್ನಿಯನ್ನು ಹುಡುಗರು ಆ ದೃಷ್ಟಿಯಿಂದ ನೋಡುವುದು ನನಗೆ ಇಷ್ಟ ಆಗುವುದಿಲ್ಲ' ಎಂದು ಸಲ್ಮಾನ್ ಖಾನ್ ಹೇಳಿದ್ದರು. 

ಪ್ರೀತಿಯಲ್ಲಿ ನಾನು ಅನ್‌ಲಕ್ಕಿ, ಈಗ ಕೇವಲ ಭಾಯ್ ಅಷ್ಟೆ; ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ನೆಟ್ಟಿಗರು ಬ್ಯಾಡ್ ಬಾಯ್‌ಯನ್ನು ತರಾಟೆ ತೆಗೆದುಕೊಂಡಿದ್ದಾರೆ. ಹೆಣ್ಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮಹಿಳೆಯ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಇದೆಲ್ಲ ಬೂಟಾಟಿಕೆ ಮಾತುಗಳು ಎಂದು ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನು ಕೆಲವು ನೀವು ಯಾಕೆ ಶರ್ಟ್ ತೆಗೆದುಕೊಂಡು ಓಡಾಡುತ್ತೀರಿ ಎಂದು ಕೇಳಿದ್ದಾರೆ. ಇನ್ನು ಕೆಲವರು ಸಲ್ಮಾನ್ ಪರ ವಾದಿಸುತ್ತಿದ್ದಾರೆ. ಸಲ್ಮಾನ್ ಖಾನ್ ಹೇಳಿದ್ದುಸರಿ ಇದೆ ಎನ್ನುತ್ತಿದ್ದಾರೆ.

ಐಶ್ವರ್ಯಾನ ಕಿತ್ತಾಕಿ ಕತ್ರಿನಾನ ಹಾಕೊಳ್ಳಿ; ನಿರ್ದೇಶಕ ಬನ್ಸಾಲಿಗೆ ಸಲ್ಮಾನ್ ಖಾನ್ ಹೇಳಿದ್ದ ಮಾತು ಈಗ ವೈರಲ್

ಸಲ್ಮಾನ್ ಖಾನ್ ಸದ್ಯ ಟೈಗರ್ -3 ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಶಾರುಖ್ ಖಾನ್ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಸಲ್ಮಾನ್ ಖಾನ್ ಜೊತೆ ಕತ್ರಿನಾ ಕೈಫ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಮನೀಶ್ ಶರ್ಮಾ ಆಕ್ಷನ್ ಕಟ್ ಹೇಳಿದ್ದಾರೆ. ನವೆಂಬರ್ 10 ಸಿನಿಮಾ ರಿಲೀಸ್ ಆಗುತ್ತಿದೆ. ಸಲ್ಮಾನ್ ಖಾನ್ ಹೊಸ ಸಿನಿಮಾ ಯಾವುದು? ಯಾರ ಜೊತೆ ಸಿನಿಮಾ ಮಾಡುತ್ತಾರೆ ಎಂದು ಕಾದುನೋಡಬೇಕಿದೆ.
 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ದೇಶಮುದುರು ಹೊಡೆತಕ್ಕೆ ಅಡ್ರೆಸ್ ಇಲ್ಲದಂತಾದ ಪ್ರಭಾಸ್ ಸಿನಿಮಾ.. ಒಂದೇ ವರ್ಷ ಬ್ಯಾಕ್ ಟು ಬ್ಯಾಕ್ ಫ್ಲಾಪ್