ಜಾಕ್ವೆಲಿನ್‌ಗೆ ಕಿಸ್ ಮಾಡಿ ತನ್ನದೇ ಬಟ್ಟೆಯಿಂದ ಬಾಯಿ ಒರೆಸಿಕೊಂಡ ಸಲ್ಮಾನ್ ಖಾನ್; ವಿಡಿಯೋ ವೈರಲ್

By Shruthi Krishna  |  First Published Apr 1, 2023, 3:35 PM IST

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಕಿಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  


ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೆ ಕೊಲೆ ಬೆದರಿಕೆ ವಿಚಾರವಾಗಿ ಸಲ್ಮಾನ್ ಖಾನ್ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಇದೀಗ ಸಲ್ಮಾನ್ ಖಾನ್ ಅವರ ಒಂದು ವಿಡಿಯೋ ವೈರಲ್ ಆಗಿದೆ. ಬಾಲಿವುಡ್ ಮೋಸ್ಟ್ ಬ್ಯಾಚುಲರ್ ಸಲ್ಮಾನ್ ಖಾನ್ ಆಗಾಗ ಡೇಟಿಂಗ್ ವಿಚಾರಕ್ಕೂ ಚರ್ಚೆಯಲ್ಲಿರುತ್ತಾರೆ. ಬಹು ಬೇಡಿಕೆಯ ಹೀರೋ ಸಲ್ಮಾನ್ ಹಲವು ಸೂಪರ್​ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅನೇಕ ನಾಯಕಿಯರ ಜೊತೆ ಒಳ್ಳೆಯ ಒಡನಾಟವಿದೆ. ಹಲವರನ್ನು ಚಿತ್ರರಂಗಕ್ಕೆ ಪರಿಚಯಿಸಿದ ಖ್ಯಾತಿ ಅವರಿಗೆ ಇದೆ. ಬಾಲಿವುಡ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ನಟಿಯರಲ್ಲಿ ಶ್ರೀಲಂಕಾದ ಸುಂದರಿ ಜಾಕ್ವೆಲಿನ್ ಫರ್ನಾಂಡಿಸ್ ಕೂಡ ಒಬ್ಬರು. ಇದೀಗ ಸಲ್ಮಾನ್ ಮತ್ತು ಜಾಕ್ವೆಲಿನ್ ಇನಡುವಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಸಲ್ಮಾನ್ ಖಾನ್ ಮತ್ತು ಜಾಕ್ವೆಲಿನ್ ಇಬ್ಬರೂ ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. ಕಿಕ್ ಸಿನಿಮಾದಲ್ಲಿ ಮೊದಲ ಬಾರಿಗೆ ಒಟ್ಟಿಗೆ ತೆರೆಹಂಚಿಕೊಂಡರು. 2014ರಲ್ಲಿ ರಿಲೀಸ್ ಆದ ಈ ಸಿನಿಮಾ ಜಾಕ್ವೆಲಿನ್ ದೊಡ್ಡ ಮಟ್ಟದ ಸಕ್ಸಸ್ ತಂದುಕೊಟ್ಟಿತು. ಈ ಸಿನಿಮಾ ಬಳಿಕ ಜಾಕ್ವೆಲಿನ್ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ಬೇರೂರಿದರು. ಈ ಸಿನಿಮಾ ಬಳಿಕ ಇಬ್ಬರೂ ರೇಸ್-3, ರಾಧೆ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದರು.  

Tap to resize

Latest Videos

ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಸಲ್ಮಾನ್ ಖಾನ್, ಜಾಕ್ವೆಲಿನ್ ಫರ್ನಾಂಡಿಸ್‌ಗೆ ಕಿಸ್ ಮಾಡಿದ್ದಾರೆ. ಅಷ್ಟೆಯಲ್ಲ ಕಿಸ್ ಮಾಡಿದ ಬಳಿಕ ತನ್ನದೇ ಟೀ ಶರ್ಟ್‌ನಿಂದ ಒರೆಸೆಕೊಂಡಿದ್ದಾರೆ. ಇದು ಶೂಟಿಂಗ್ ಸೆಟ್‌ ವಿಡಿಯೋ ಎನ್ನುವುದು ಗೊತ್ತಾಗುತ್ತಿದೆ. ಜಾಕ್ವೆಲಿನ್ ಫರ್ನಾಂಡಿಸ್ ನಿಂತಿರುತ್ತಾರೆ. ಸಲ್ಮಾನ್ ಖಾನ್ ಬಂದು ಪದೆ ಪದೇ ಕಿಸ್ ಮಾಡುತ್ತಾರೆ. ಬಳಿಕ ತನ್ನದೇ ಟೀ ಶರ್ಟ್‌ನಿಂದ ಒರೆಸಿಕೊಳ್ಳುತ್ತಾರೆ. ಬಾಯಿತುಂಬಾ ಮೇಕಪ್ ಹಿಡಿದಿರುವುದನ್ನು ಸಲ್ಮಾನ್ ಖಾನ್ ಒರೆಸಿಕೊಳ್ಳುತ್ತಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Salman Khan: ಪತ್ರಕರ್ತ ದಾಖಲಿಸಿದ್ದ ಕ್ರಿಮಿನಲ್ ಕೇಸ್​ನಿಂದ ಸಲ್ಲುಗೆ ಮುಕ್ತಿ

ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. 1 ಕೆಜಿ ಮೇಕಪ್ ಇತ್ತಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಅನೇಕರು ತರಹೇವಾರಿ ಕಾಮೆಂಟ್ ಮಾಡಿ ಸಲ್ಮಾನ್ ಖಾನ್ ಕಾಲೆಳೆಯುತ್ತಿದ್ದಾರೆ. ಸಲ್ಮಾನ್ ಖಾನ್ ಮತ್ತು ಜಾಕ್ವೆಲಿನ್ ನಡುವೆ ಡೇಟಿಂಗ್ ವದಂತಿ ಇತ್ತು. ಇಬ್ಬರೂ ಡೇಟಿಂಗ್‌ನಲ್ಲಿದ್ದಾರೆ ಎನ್ನಲಾಗುತ್ತಿತ್ತು. ಅಲ್ಲದೆ ಕೊರೊನಾ ಲಾಕ್‌ಡೌನ್ ಸಮಯದಲ್ಲಿ ಜಾಕ್ವೆಲಿನ್ ಮತ್ತು ಸಲ್ಮಾನ್ ಒಟ್ಟಿಗೆ ಫಾರ್ಮ್‌ಹೌಸ್ ನಲ್ಲಿ ಉಳಿದುಕೊಂಡಿದ್ದರು. ಇಬ್ಬರ ಒಂದಿಷ್ಟು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್‌ಸ್ಟಾಗ್ರಾಮ್‌: ಮಾಜಿಯರನ್ನು ಫಾಲೋ ಮಾಡ್ತಾರೆ ಸಲ್ಮಾನ್ ; ಐಶ್ವರ್ಯಾ ರೈ ಇದ್ದಾರಾ?

ಇಬ್ಬರೂ ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಇನ್ನೂ ಜಾಕ್ವೆಲಿನ್ ಫರ್ನಾಂಡಿಸ್ ಕೂಡ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಜೊತೆಗೆ ಅಕ್ರಮ ಹಣ ವರ್ಗಾವಣ ಪ್ರಕರಣದಲ್ಲಿ ಜೈಲುುಸೇರಿರುವ ಸುಕೇಶ್ ಚಂದ್ರಶೇಖರ್ ಪ್ರಕರಣದಲ್ಲಿ ಜಾಕ್ವೆಲಿನ್ ಹೆಸರು ಇದ್ದೂ ವಿಚಾರಣೆ ಎದುರಿಸುತ್ತಿದ್ದಾರೆ.  

 

click me!