ಸಲ್ಮಾನ್ ಖಾನ್‌ಗೆ ಮತ್ತೊಮ್ಮೆ ಜೀವ ಬೆದರಿಕೆ ಹಾಕಲಾಗಿದ್ದು, 2 ಕೋಟಿ ರೂಪಾಯಿಗಳಿಗೆ ಬೇಡಿಕೆ ಇಡಲಾಗಿದೆ. ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಸಲ್ಮಾನ್ ಖಾನ್‌ಗೆ ಮತ್ತೊಮ್ಮೆ ಜೀವ ಬೆದರಿಕೆ ಹಾಕಲಾಗಿದ್ದು, 2 ಕೋಟಿ ರೂಪಾಯಿಗಳಿಗೆ ಬೇಡಿಕೆ ಇಡಲಾಗಿದೆ. ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಟನಿಗೆ ಹೊಸ ಜೀವ ಬೆದರಿಕೆ ಬಂದಿದೆ. ಸುಲಿಗೆಗೆ ಬೇಡಿಕೆಯನ್ನೂ ಇಡಲಾಗಿದೆ. ಪೊಲೀಸ್ ಅಧಿಕಾರಿಗಳು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.
ಮುಂಬೈ ಟ್ರಾಫಿಕ್ ಕಂಟ್ರೋಲ್‌ಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ವರದಿಗಳಲ್ಲಿ ಮುಂಬೈ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಲಾಗಿದೆ. ಈ ಸಂದೇಶದಲ್ಲಿ ಸಲ್ಮಾನ್ ಖಾನ್‌ರನ್ನು ಕೊಲ್ಲುವ ಬಗ್ಗೆ ಹೇಳಲಾಗಿದೆ.
ರಾಮಾಯಣದಲ್ಲಿ ಯಾರಿಗೆ ಯಾವ ಪಾತ್ರ, ಇಲ್ಲಿದೆ ಫುಲ್ ಡೀಟೇಲ್ಸ್
ಸಂದೇಶದಲ್ಲಿ ಸಲ್ಮಾನ್ ಖಾನ್‌ರಿಂದ 2 ಕೋಟಿ ರೂಪಾಯಿಗೆ ಬೇಡಿಕೆ ಇಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗದಿದ್ದರೆ ಅವರನ್ನು ಕೊಲ್ಲುವುದಾಗಿ ಹೇಳಲಾಗಿದೆ. ಬೆದರಿಕೆ ಬೆಳಕಿಗೆ ಬರುತ್ತಿದ್ದಂತೆ ಮುಂಬೈನ ವರ್ಲಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಒಂದು ದಿನ ಮೊದಲು ಸಲ್ಮಾನ್‌ಗೆ ಇದೇ ರೀತಿಯ ಬೆದರಿಕೆ ಬಂದಿತ್ತು.
ಒಂದು ದಿನ ಮೊದಲು ನೋಯ್ಡಾದ 20 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು, ಈತ ಸಲ್ಮಾನ್ ಖಾನ್ ಮತ್ತು ಬಾಬಾ ಸಿದ್ದಿಕಿ ಪುತ್ರ ಜೀಶಾನ್ ಸಿದ್ದಿಕಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ನೋಯ್ಡಾದಿಂದ ಬಂಧಿತನಾದ ಮೊಹಮ್ಮದ್ ತೈಯಬ್ ಜೀಶಾನ್ ಸಿದ್ದಿಕಿ ಅವರ ಪಿಆರ್ ಕಚೇರಿಗೆ ಕರೆ ಮಾಡಿ ಸುಲಿಗೆಗೆ ಬೇಡಿಕೆ ಇಟ್ಟಿದ್ದಲ್ಲದೆ, ಅವರಿಗೆ ಮತ್ತು ಸಲ್ಮಾನ್‌ಗೆ ಜೀವ ಬೆದರಿಕೆ ಹಾಕಿದ್ದ ಎಂದು ಹೇಳಲಾಗುತ್ತಿದೆ.
ಕೆಲವು ದಿನಗಳ ಮೊದಲು ಮುಂಬೈ ಟ್ರಾಫಿಕ್ ಪೊಲೀಸರಿಗೆ ಒಂದು ವಾಟ್ಸಾಪ್ ಸಂದೇಶ ಬಂದಿತ್ತು, ಅದರಲ್ಲಿ ಲಾರೆನ್ಸ್ ಬಿಷ್ಣೋಯ್ ಜೊತೆಗಿನ ದ್ವೇಷವನ್ನು ಕೊನೆಗೊಳಿಸಲು ಸಲ್ಮಾನ್‌ರಿಂದ 5 ಕೋಟಿ ರೂಪಾಯಿ ಬೇಡಿಕೆ ಇಡಲಾಗಿತ್ತು.
ಅಭಿಷೇಕ್ ಪ್ರೇಮ ವೈಫಲ್ಯಗಳು: 2ಬ್ರೇಕಪ್ 1 ಮುರಿದ ನಿಶ್ಚಿತಾರ್ಥ, ಈಗ ವಿಚ್ಛೇದನ?
ಟ್ರಾಫಿಕ್ ಪೊಲೀಸರಿಗೆ ಬಂದ ವಾಟ್ಸಾಪ್ ಸಂದೇಶದಲ್ಲಿ, ಸಲ್ಮಾನ್ ಲಾರೆನ್ಸ್ ಬಿಷ್ಣೋಯ್ ಜೊತೆಗಿನ ದ್ವೇಷವನ್ನು ಕೊನೆಗೊಳಿಸದಿದ್ದರೆ ಅವರ ಪರಿಸ್ಥಿತಿ ಬಾಬಾ ಸಿದ್ದಿಕಿಗಿಂತ ಕೆಟ್ಟದಾಗಿರುತ್ತದೆ ಎಂದು ಬರೆಯಲಾಗಿತ್ತು.
ಈ ಮಧ್ಯೆ, ಸಲ್ಮಾನ್ ಖಾನ್ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಅವರು 'ಸಿಂಘಮ್ ಅಗೇನ್' ಚಿತ್ರಕ್ಕಾಗಿ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಅವರು 'ಬಿಗ್ ಬಾಸ್' ಮತ್ತು ತಮ್ಮ ಮುಂಬರುವ ಚಿತ್ರ 'ಸಿಕಂದರ್' ಚಿತ್ರೀಕರಣದಲ್ಲೂ ಬ್ಯುಸಿಯಾಗಿದ್ದಾರೆ.