ಚಿರಂಜೀವಿಗಾಗಿ ಸಂಭಾವನೆ ಪಡೆಯದೆ 'ಗಾಡ್ ಫಾದರ್'ನಲ್ಲಿ ನಟಿಸಲು ಒಪ್ಪಿಕೊಂಡ್ರಾ ಸಲ್ಮಾನ್?

Suvarna News   | Asianet News
Published : Mar 17, 2022, 03:30 PM IST
ಚಿರಂಜೀವಿಗಾಗಿ ಸಂಭಾವನೆ ಪಡೆಯದೆ 'ಗಾಡ್ ಫಾದರ್'ನಲ್ಲಿ ನಟಿಸಲು ಒಪ್ಪಿಕೊಂಡ್ರಾ ಸಲ್ಮಾನ್?

ಸಾರಾಂಶ

ನಟ ಸಲ್ಮಾನ್ ಖಾನ್, ಮೆಗಾಸ್ಟಾರ್ ಚಿರಂಜೀವಿ ಮೇಲಿನ ಪ್ರೀತಿ ಮತ್ತು ಗೌರವದಿಂದ ಗಾಡ್ ಫಾದರ್ ಸಿನಿಮಾದಲ್ಲಿ ಸಂಭಾವನೆ ಪಡೆಯದೆ ನಟಿಸುತ್ತಿದ್ದಾರಂತೆ. ಗಾಡ್ ಫಾದರ್ ಚಿತ್ರದಲ್ಲಿ ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.  

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್(Salman Khan) ಮೊದಲ ಬಾರಿಗೆ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟನೆಯ ಬಹುನಿರೀಕ್ಷೆಯ ಗಾಡ್ ಫಾದರ್(Godfather) ಸಿನಿಮಾದಲ್ಲ ಸಲ್ಮಾನ್ ಖಾನ್ ನಟಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಚಿರಂಜೀವಿ ಖಚಿತ ಪಡಿಸಿದ್ದಾರೆ. ದಕ್ಷಿಣ ಭಾರತೀಯ ಸಿನಿಮಾರಂಗಕ್ಕೆ ಸಲ್ಮಾನ್ ಖಾನ್ ಎಂಟ್ರಿ ಅಭಿಮಾನಿಗಳಲ್ಲಿ ಸಂಭ್ರಮ ಮತ್ತಷ್ಟು ಹೆಚ್ಚಿದೆ. ಸಲ್ಮಾನ್ ಎಂಟ್ರಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆದೀಗ ಚಿರಂಜೀವಿ ಜೊತೆ ನಟಿಸಲು ಸಲ್ಮಾನ್ ಪಡೆದ ಸಂಭಾವನೆ(Remuneration) ವಿಚಾರ ಚರ್ಚೆಯಾಗುತ್ತಿದೆ.

ಇತ್ತೀಚಿಗಷ್ಟೆ ಸಲ್ಮಾನ್ ಎಂಟ್ರಿ ಬಗ್ಗೆ ಮೆಗಾಸ್ಟಾರ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬಹಿರಂಗ ಪಡಿಸುವ ಮೂಲಕ ಕುತೂಹಲಕ್ಕೆ ಬ್ರೇಕ್ ಹಾಕಿದ್ದರು. ಸಲ್ಮಾನ್ ಖಾನ್ ಅವರಿಗೆ ಹೂ ಗುಚ್ಛ ನೀಡುತ್ತಿರುವ ಫೋಟೋವನ್ನು ಶೇರ್ ಮಾಡುವ ಮೂಲಕ ಗಾಡ್ ಫಾದರ್ ಗೆ ಸ್ವಾಗತ ಕೋರಿದ್ದರು. 'ಗಾಡ್ ಪಾಧರ್ ಚಿತ್ರಕ್ಕೆ ಸಲ್ಮಾನ್ ಖಾನ್ ಗೆ ಸ್ವಾಗತ. ನಿಮ್ಮ ಪ್ರವೇಶ ಎಲ್ಲರಿಗೂ ಶಕ್ತಿ ತುಂಬಿದೆ ಮತ್ತು ಉತ್ಸಾಹ ಮತ್ತಷ್ಟು ಹೆಚ್ಚಾಗಿದೆ. ನಿಮ್ಮ ಜೊತೆ ತೆರೆಹಂಚಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷವಾಗುತ್ತಿದೆ. ನಿಮ್ಮ ಎಂಟ್ರಿ ಪ್ರೇಕ್ಷಕರಿಗೆ ಕಿಕ್ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ' ಎಂದು ಚಿರಂಜೀವಿ ಟ್ವೀಟ್ ಮಾಡಿದ್ದರು.

Chiranjeevi- Pawan Kalyan ತಾಯಿ ಅಂಜಮ್ಮಗೆ ಕ್ಷಮೆ ಕೇಳಿದ ನಟಿ ಶ್ರೀ ರೆಡ್ಡಿ!

ಇದೀಗ ಸಂಭಾವನೆ ವಿಚಾರ ಸದ್ದು ಮಾಡುತ್ತಿದೆ. ಸದ್ಯ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ಸಲ್ಮಾನ್ ಖಾನ್, ಚಿರಂಜೀವಿ ಜೊತೆ ನಟಿಸಲು ಒಂದು ಪೈಸೆಯನ್ನು ಪಡೆದಿಲ್ಲ ಎನ್ನಲಾಗುತ್ತಿದೆ. ಸಂಭಾವನೆ ಪಡೆಯದೆ(Free Of Cost) ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನುವ ಮಾತುಕೇಳಿಬರುತ್ತಿದೆ. ನಿರ್ಮಾಪಕರು ಸಲ್ಮಾನ್ ಖಾನ್ ಅವರಿಗೆ ದೊಡ್ಡ ಮೊತ್ತದ ಸಂಭಾವನೆ ನೀಡಲು ಉತ್ಸುಕರಾಗಿದ್ದರು. ಆದರೆ ಸಲ್ಮಾನ್ ಖಾನ್, ಚಿರಂಜೀವಿ ಮೇಲಿನ ಪ್ರೀತಿ ಮತ್ತು ಗೌರವದಿಂದ ಈ ಸಿನಿಮಾ ಮಾಡುವುದಾಗಿ ಹೇಳಿ ಸಂಭಾವನೆ ನಿರಾಕರಿಸಿದ್ದಾರಂತೆ.

ಗಾಡ್ ಫಾದರ್ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡುವ ಮೊದಲೆ ಸಲ್ಮಾನ್ ಖಾನ್ ಸಂಭಾವನೆ ತೆಗೆದುಕೊಳ್ಳುವುದಿಲ್ಲ ಎನ್ನುವ ಷರತ್ತನ್ನು ವಿಧಿಸಿಯೇ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಮತ್ತು ಚಿರಂಜೀವಿ ಇಬ್ಬರು ಉತ್ತಮ ಸ್ನೇಹಿತರು. ಚಿರಂಜೀವಿ ಬಾಲಿವುಡ್ ನ ಅನೇಕ ಕಲಾವಿದರ ಜೊತೆ ಉತ್ತಮ ಸ್ನೇಹ ಸಂಬಂಧ ಇಟ್ಟುಕೊಂಡಿದ್ದಾರೆ. ಚಿರಂಜೀವಿ ಮೇಲಿನ ಸ್ನೇಹದಿಂದನೇ ಸಲ್ಮಾನ್ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅಲ್ಲದೆ ಸಂಭಾವನೆ ಪಡೆಯದೆ ಹಣಕ್ಕಿಂತ ಸ್ನೇಹ ಮುಖ್ಯ ಎನ್ನುವುದನ್ನು ನಿರೂಪಿಸಿದ್ದಾರೆ.

Chiranjeevi Daughter Married Life: ಓಡಿ ಹೋಗಿ ಮದ್ವೆಯಾಗಿ ಡಿವೋರ್ಸ್ ಕೊಟ್ಟು ಮತ್ತೊಂದು ಮದ್ವೆ, ಈಗ ಮತ್ತೆ ಡಿವೋರ್ಸಾ ?

ಅಂದಹಾಗೆ ಚಿರಂಜೀವಿ ಮತ್ತು ಸಲ್ಮಾನ್ ಖಾನ್ ನಟನೆಯ ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಪೊಲಿಟಿಕಲ್ ಥ್ರಿಲ್ಲರ್ ಲೂಸಿಫರ್(Lucifer) ಸಿನಿಮಾದ ರಿಮೇಕ್ ಆಗಿದೆ. ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಲೂಸಿಫರ್ ಚಿತ್ರದಲ್ಲಿ ಖ್ಯಾತ ನಟ ಮೋಹನ್ ಲಾಲ್ ಕಾಣಿಸಿಕೊಂಡಿದ್ದರು. ಈ ಸಿನಿಮಾ ತೆಲುಗಿನಲ್ಲಿ ಗಾಡ್ ಫಾದರ್ ಆಗಿ ರಿಮೇಕ್ ಆಗುತ್ತಿದೆ. ತೆಲುಗಿನಲ್ಲಿ ಚಿತ್ರಕ್ಕೆ ಮೋಹನ್ ರಾಜ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದಲ್ಲಿ ನಾಯಕಿಯಾಗಿ ನಯನತಾರಾ(Nayanathara) ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ಇನ್ನು ಈ ಚಿತ್ರದ ಮತ್ತೊಂದು ವಿಶೇಷ ಎಂದರೆ ಚಿತ್ರದ ಪ್ರಮುಖ ಹಾಡಿಗೆ ಖ್ಯಾತ ಪಾಪ್ ಗಾಯಕಿ ಬ್ರಿಟ್ನಿ ಸ್ಪಿಯರ್ಸ್ ಅವರನ್ನು ಕರೆತರುವ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಹೆಜ್ಜೆ ಹಾಕುವ ಸಾಧ್ಯತೆಯೂ ಇದೆ. ಚಿತ್ರದಲ್ಲಿ ಸಲ್ಮಾನ್ ಖಾನ್ ಮಲಯಾಳಂನಲ್ಲಿ ಪೃಥ್ವಿರಾಜ್ ನಿಭಾಯಿಸಿದ್ದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಸಲ್ಮಾನ್ ಖಾನ್ ಇತ್ತೀಚಿಗಷ್ಟೆ ಟೈಗರ್ ಪ್ರಾಂಚೈಸಿಯ 3ನೇ ಆವೃತ್ತಿ ಟೈಗರ್ 3 ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳ ಸಂತಸ ಹೆಚ್ಚಿಸಿದ್ದರು. ಈ ಸಿನಿಮಾ ಜೊತೆಗೆ ಸಲ್ಮಾನ್ ಖಾನ್ ಕಬಿ ಈದ್ ಕಬಿ ದಿವಾಲಿ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲೂ ಸಲ್ಮಾನ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಕೊನೆಯದಾಗಿ ಸಲ್ಮಾನ್ ಖಾನ್ ಅಂತಿಮ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ರಾಜ್ ಜೊತೆ ರೊಮ್ಯಾಂಟಿಕ್ ಹನಿಮೂನ್ ಟ್ರಿಪ್ ಪ್ಲಾನ್ ಮಾಡಿದ ಸಮಂತಾ.. ಎಲ್ಲಿಗೆ ಹೋಗ್ತಿದ್ದಾರೆ?
ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?