ಬಾಲಿವುಡ್ ನಟ ಸಲ್ಮಾನ್ ಖಾನ್, ಚಿರಂಜೀವಿ ಅವರ ಗಾಡ್ ಫಾದರ್ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಈ ಬ್ಗಗೆ ನಿರ್ದೇಶಕ ಮೋಹನ್ ರಾಜ ಬಹಿರಂಗ ಪಡಿಸಿದ್ದಾರೆ.
ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್(Salman Khan) ಮೊದಲ ಬಾರಿಗೆ ತೆಲುಗು ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟನೆಯ ಬಹುನಿರೀಕ್ಷೆಯ ಗಾಡ್ ಫಾದರ್(Godfather) ಸಿನಿಮಾದಲ್ಲಿ ನಟಿಸುವ ಮೂಲಕ ದಕ್ಷಿಣದ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಗಾಡ್ ಫಾದರ್ ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದ ಸಲ್ಮಾನ್ ಖಾನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದಕ್ಷಿಣ ಭಾರತೀಯ ಸಿನಿಮಾರಂಗಕ್ಕೆ ಸಲ್ಮಾನ್ ಖಾನ್ ಎಂಟ್ರಿ ಅಭಿಮಾನಿಗಳಲ್ಲಿ ಸಂಭ್ರಮ ಮತ್ತಷ್ಟು ಹೆಚ್ಚಿಸಿತ್ತು. ಸಲ್ಮಾನ್ ಎಂಟ್ರಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಸಲ್ಮಾನ್ ಎಂಟ್ರಿ ಕೊಟ್ಟಿದ್ದಾರೆ ಎಂದು ಸುದ್ದಿ ವೈರಲ್ ಆದ ಬೆನ್ನಲ್ಲೇ ಚಿತ್ರೀಕರಣ ಮುಗಿಸಿ ವಾಪಾಸ್ ಆಗಿದ್ದಾರೆ.
ಈ ಬಗ್ಗೆ ನಿರ್ದೇಶಕ ಮೋಹನ್ ರಾಜ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 'ಸಲ್ಮಾನ್ ಭಾಯ್ ಜೊತೆಗಿನ ಅದ್ಭುತ ಹಂತದ ಚಿತ್ರೀಕರಣ ಮುಕ್ತಾಯಗೊಳಿಸಿದ್ದೇವೆ. ಈ ಅದ್ಭುತವಾದ ವೇಳಪಟ್ಟಿಯನ್ನು ಸ್ಮರಣೀಯವಾಗಿಸಿದ್ದಕ್ಕೆ ಧನ್ಯವಾದಗಳು ಭಾಯ್. ನಮ್ಮ ಆಧಾರ ಸ್ತಂಬ ಚಿರಂಜೀವಿ ಅವರಿಗೂ ಧನ್ಯವಾದಗಳು. ಇಡೀ ತಂಡಕ್ಕೆ' ಎಂದು ಹೇಳಿದ್ದಾರೆ.
ಅಂದಹಾಗೆ ಸಿನಿಮಾದ ಚಿತ್ರೀಕರಣ ಮುಗಿಸಿದ ಬಗ್ಗೆ ಬಹಿರಂಗ ಪಡಿಸಿರುವ ನಿರ್ದೇಶಕ ಮೋಹನ್ ಚಿತ್ರದಲ್ಲಿ ಸಲ್ಮಾನ್ ಖಾನ್ ಯಾವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಬಹಿರಂಗ ಪಡಿಸಿಲ್ಲ. ಸದ್ಯಕ್ಕೆ ಸಲ್ಮಾನ್ ಪಾತ್ರದ ಬಗ್ಗೆ ರಹಸ್ಯ ಕಾಪಾಡಲಾಗಿದೆ. ಮೊದಲ ಬಾರಿಗೆ ಸಲ್ಮಾನ್ ಖಾನ್ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ಅದರಲ್ಲೂ ಮೆಗಾಸ್ಟಾರ್ ಚಿರಂಜೀವಿ ಜೊತೆ ತೆರೆಹಂಚಿಕೊಂಡಿರುವುದನ್ನು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.
ಪತ್ರಕರ್ತನಿಗೆ ಬೆದರಿಕೆ; ನಟ ಸಲ್ಮಾನ್ ಖಾನ್ ಗೆ ಸಮನ್ಸ್ ಜಾರಿಮಾಡಿದ ಕೋರ್ಟ್
ಅಂದಹಾಗೆ ಚಿತ್ರದಲ್ಲಿ ನಟಿಸಲು ಸಲ್ಮಾನ್ ಖಾನ್ ಸಂಭಾವನೆ ಪಡೆದಿಲ್ಲ ಎನ್ನುವ ಮಾತು ಕೇಳಿಬಂದಿದೆ. ಚಿರಂಜೀವಿಗಾಗಿ ಸಲ್ಮಾನ್ ಖಾನ್ ಉಚಿತವಾಗಿ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಗಾಡ್ ಫಾದರ್ ಸಿನಿಮಾದಲ್ಲಿ ನಟಿಸಲು ಒಪ್ಪಿಗೆ ನೀಡುವ ಮೊದಲೆ ಸಲ್ಮಾನ್ ಖಾನ್ ಸಂಭಾವನೆ ತೆಗೆದುಕೊಳ್ಳುವುದಿಲ್ಲ ಎನ್ನುವ ಷರತ್ತನ್ನು ವಿಧಿಸಿಯೇ ಸಿನಿಮಾಗೆ ಸಹಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಮತ್ತು ಚಿರಂಜೀವಿ ಇಬ್ಬರು ಉತ್ತಮ ಸ್ನೇಹಿತರು. ಚಿರಂಜೀವಿ ಬಾಲಿವುಡ್ ನ ಅನೇಕ ಕಲಾವಿದರ ಜೊತೆ ಉತ್ತಮ ಸ್ನೇಹ ಸಂಬಂಧ ಇಟ್ಟುಕೊಂಡಿದ್ದಾರೆ. ಚಿರಂಜೀವಿ ಮೇಲಿನ ಸ್ನೇಹದಿಂದನೇ ಸಲ್ಮಾನ್ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅಲ್ಲದೆ ಸಂಭಾವನೆ ಪಡೆಯದೆ ಹಣಕ್ಕಿಂತ ಸ್ನೇಹ ಮುಖ್ಯ ಎನ್ನುವುದನ್ನು ನಿರೂಪಿಸಿದ್ದಾರೆ.
ಸಲ್ಮಾನ್ ಖಾನ್ 'ಕೃಷ್ಣಮೃಗ ಬೇಟೆ ಪ್ರಕರಣ' ರಾಜಸ್ಥಾನ ಹೈಕೋರ್ಟ್ ಗೆ ವರ್ಗಾವಣೆ
'ಗಾಡ್ ಫಾದರ್' ಮಲಯಾಳಂ ಸಿನಿಮಾದ ರಿಮೇಕ್
ಅಂದಹಾಗೆ ಚಿರಂಜೀವಿ ಮತ್ತು ಸಲ್ಮಾನ್ ಖಾನ್ ನಟನೆಯ ಗಾಡ್ ಫಾದರ್ ಮಲಯಾಳಂನ ಸೂಪರ್ ಹಿಟ್ ಪೊಲಿಟಿಕಲ್ ಥ್ರಿಲ್ಲರ್ ಲೂಸಿಫರ್(Lucifer) ಸಿನಿಮಾದ ರಿಮೇಕ್ ಆಗಿದೆ. ಮಲಯಾಳಂನ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಲೂಸಿಫರ್ ಚಿತ್ರದಲ್ಲಿ ಖ್ಯಾತ ನಟ ಮೋಹನ್ ಲಾಲ್ ಕಾಣಿಸಿಕೊಂಡಿದ್ದರು. ಇದೇ ಸಿನಿಮಾ ತೆಲುಗಿನಲ್ಲಿ ಗಾಡ್ ಫಾದರ್ ಆಗಿ ರಿಮೇಕ್ ಆಗುತ್ತಿದೆ. ತೆಲುಗು ರಿಮೇಕ್ ನಲ್ಲಿ ಚಿರಂಜೀವಿಗೆ ನಾಯಕಿಯಾಗಿ ನಯನತಾರಾ(Nayanathara) ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಇನ್ನು ಈ ಚಿತ್ರದ ಮತ್ತೊಂದು ವಿಶೇಷ ಎಂದರೆ ಚಿತ್ರದ ಪ್ರಮುಖ ಹಾಡಿಗೆ ಖ್ಯಾತ ಪಾಪ್ ಗಾಯಕಿ ಬ್ರಿಟ್ನಿ ಸ್ಪಿಯರ್ಸ್ ಅವರನ್ನು ಕರೆತರುವ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ಹೆಜ್ಜೆ ಹಾಕುವ ಸಾಧ್ಯತೆಯೂ ಇದೆ. ಚಿತ್ರದಲ್ಲಿ ಸಲ್ಮಾನ್ ಖಾನ್ ಮಲಯಾಳಂನಲ್ಲಿ ಪೃಥ್ವಿರಾಜ್ ನಿಭಾಯಿಸಿದ್ದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಬಹಿರಂಗ ಪಡಿಸಿಲ್ಲ. ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.