ನಾಗ ಚೈತನ್ಯ ಮತ್ತು ರೂಮರ್ ಗರ್ಲ್‌ಫ್ರೆಂಡ್ ಶೋಭಿತಾ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತೆಲುಗು ಸ್ಟಾರ್ ನಾಗಚೈತನ್ಯ ವಿಚ್ಛೇದನದ ಬಳಿಕ ಒಂದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುತ್ತಾರೆ. ಈ ವರ್ಷ ನಾಗ ಚೈತನ್ಯ ಸಿನಿಮಾ ವಿಚಾರಕ್ಕಿಂತ ಡೇಟಿಂಗ್ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಇತ್ತೀಚಿಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ತೆಲುಗು ಸ್ಟಾರ್ ಇದೀಗ ಮತ್ತೆ ಪ್ರೀತಿ-ಪ್ರೇಮದ ವಿಚಾರಕ್ಕೆ ಸುದ್ದಿಯಲ್ಲಿದ್ದಾರೆ. ಸಮಂತಾ ಅವರಿಂದ ವಿಚ್ಛೇದನ ಪಡೆದ ಬಳಿಕ ನಾಗ ಚೈತನ್ಯ ಮತ್ತೋರ್ವ ನಟಿಯ ಜೊತೆ ಪ್ರೀತಿಯಲ್ಲಿ ಬಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳಿಂದ ಹರಿದಾಡುತ್ತಿದೆ. ತೆಲುಗು ನಟಿ ಶೋಭಿತಾ ಜೊತೆ ನಾಗ ಚೈತನ್ಯ ಡೇಟಿಂಗ್ ಮಾಡುತ್ತಿದ್ದಾರೆ, ಇಬ್ಬರೂ ಆಗಾಗ ಪ್ರವಾಸ, ಔಟಿಂಗ್ ಅಂತ ಸುತ್ತಾಡುತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇದೀಗ ಹರಿದಾಡುತ್ತಿದ್ದ ಸುದ್ದಿಗೆ ಪುಷ್ಠಿ ನೀಡುವಂತೆ ನಾಗ ಚೈತನ್ಯ ಮತ್ತು ಶೋಭಿತಾ ಇಬ್ಬರ ಫೋಟೋ ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.
ಶೋಭಿತಾ ಮತ್ತು ನಾಗಚೈತನ್ಯ ಇಬ್ಬರೂ ಒಟ್ಟಿಗೆ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಬ್ಬರೂ ಉದ್ದ ಜಾಕೆಟ್ ಹಾಕಿ ಕ್ಯಾಮರಾ ಮುಂದೆ ಪೋಸ್ ನೀಡಿದ್ದಾರೆ. ಅಂದಹಾಗೆ ಈ ಫೋಟೋಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಅನೇಕರು ಈ ಫೋಟೋ ಫೇಕ್ ಎಂದು ಹೇಳುತ್ತಿದ್ದಾರೆ. ಈ ಫೋಟೋವನ್ನು ಎಡಿಟಿ ಮಾಡಲಾಗಿದೆ ಸ್ಪಷ್ಟವಾಗಿ ನೋಡಿದ್ರೆ ಗೊತ್ತಾಗಲಿದೆ ಎಂದು ಹೇಳುತ್ತಿದ್ದಾರೆ. ಇನ್ನು ಅನೇಕರು ಇಬ್ಬರ ಡೇಟಿಂಗ್ ರೂಮರ್ ನಿಜ ಎಂದು ಹೇಳುತ್ತಿದ್ದಾರೆ. ಶೋಭಿತಾ ಕಾರಣಕ್ಕೆ ನಾಗಚೈತನ್ಯ ಸಮಂತಾ ಅವರಿಂದ ದೂರ ಆದರು ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಸಮಂತಾ ಅವರಿಗೆ ಅನ್ಯಾಯವಾಗಿದೆ ಎಂದು ಅಭಿಮಾನಿಗಳು ಬೇಸರ ಹೊರಹೊಕುತ್ತಿದ್ದಾರೆ.
ಅಭಿಮಾನಿಗಳಿಗೆ ಗುಡ್ ನ್ಯೂಸ್; ವಿಚ್ಛೇದನ ಬಳಿಕ ಮತ್ತೆ ಒಂದಾಗ್ತಿದ್ದಾರೆ ನಾಗ ಚೈತನ್ಯ-ಸಮಂತಾ
ಈ ಹಿಂದೆ ಸಂದರ್ಶನವೊಂದರಲ್ಲಿ ನಾಗ ಚೈತನ್ಯ ಡೇಟಿಂಗ್ ರೂಮರ್ ಬಗ್ಗೆ ಮಾತನಾಡಿದ್ದರು. ನಿರೂಪಕರು ಶೋಭಿತಾ ಬಗ್ಗೆ ಕೇಳಿದ ಪ್ರಶ್ನೆಗೆ ನಾಗಚೈತನ್ಯ ಜೋರಾಗಿ ನಗಲು ಪ್ರಾರಂಭಿಸಿದರು. ಇದಕ್ಕೆ ನನ್ನ ನಗುವೆ ಉತ್ತರ ಎಂದು ಹೇಳಿದ್ದರು. ನಾಗಚೈತನ್ಯ ನಗುವಿನ ಉತ್ತರ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿತ್ತು. ಇದೀಗ ಇಬ್ಬರ ಫೋಟೋ ವೈರಲ್ ಆಗಿದೆ. ಆಗಾಗ ನಾಗ ಚೈತನ್ಯ ಮತ್ತು ಶೋಭಿತಾ ಡೇಟಿಂಗ್ ವಿಚಾರ ಸದ್ದು ಮಾಡುತ್ತಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
Ayite rumors nijamenaa!! pic.twitter.com/cuF1WfOGWT
— नाని ! (@urstrulyNANIii)ಸಮಂತಾರ ಜೊತೆ ಡಿವೋರ್ಸ್ to ಬಾಲಿವುಡ್ ಎಂಟ್ರಿ: ನಾಗಚೈತನ್ಯರ ಇಂಟರೆಸ್ಟಿಂಗ್ ವಿಷಯಗಳು
ನಾಗ ಚೈತನ್ಯ ಸಿನಿಮಾ ವಿಚಾರಕ್ಕೆ ಬರುವುದಾದರೆ ಸದ್ಯ ನಿರ್ದೇಶಕ ವೆಂಕಟ್ ಪ್ರಭು ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ನಾಗ ಚೈತನ್ಯ ಕಾಣಿಸಿಕೊಂಡಿದ್ದಾರೆ. ಇನ್ನು ಕೊನೆಯದಾಗಿ ನಾಗ ಚೈತನ್ಯ ಆಮೀರ್ ಖಾನ್ ನಟನೆಯ ಲಾಲ್ ಸಿಂಗ್ ಚಡ್ಡಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನಿಮಾ ಮೂಲಕ ನಾಗ್ ಮೊದಲ ಬಾರಿಗೆ ಬಾಲಿವುಡ್ದಗೆ ಎಂಟ್ರಿ ಕೊಟ್ಟಿದ್ದರು.