ಶೂಟಿಂಗ್ ವೇಳೆ ಅವಘಡ; ಪ್ರಪಾತಕ್ಕೆ ಉರುಳಿದ ವಾಹನ, ಸಮಂತಾ - ವಿಜಯ್ ದೇವರಕೊಂಡಗೆ ಗಾಯ

By Shruiti G Krishna  |  First Published May 24, 2022, 12:58 PM IST

ಟಾಲಿವುಡ್ ಸ್ಟಾರ್ ನಟಿ ಸಮಂತಾ(Samantha) ಮತ್ತು ನಟ ವಿಜಯ್ ದೇವರಕೊಂಡ(Vijay Deverakonda) ಇಬ್ಬರೂ ಸದ್ಯ ಖುಷಿ(Khushi) ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಖುಷಿ ಚಿತ್ರದ ಚಿತ್ರೀಕರಣ ಸದ್ಯ ಕಾಶ್ಮೀರದಲ್ಲಿ ನಡೆಯುತ್ತಿದೆ. ಚಿತ್ರೀಕರಣ ವೇಳೆ ಸಂಭವಿಸಿದ ಅವಘಡದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.


ಟಾಲಿವುಡ್ ಸ್ಟಾರ್ ನಟಿ ಸಮಂತಾ(Samantha) ಮತ್ತು ನಟ ವಿಜಯ್ ದೇವರಕೊಂಡ(Vijay Deverakonda) ಇಬ್ಬರೂ ಸದ್ಯ ಖುಷಿ(Khushi) ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಖುಷಿ ಚಿತ್ರದ ಚಿತ್ರೀಕರಣ ಸದ್ಯ ಕಾಶ್ಮೀರದಲ್ಲಿ ನಡೆಯುತ್ತಿದೆ. ಚಿತ್ರೀಕರಣ ವೇಳೆ ಸಂಭವಿಸಿದ ಅವಘಡದಲ್ಲಿ ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಸಮಂತಾ ಮತ್ತು ವಿಜಯ್ ದೇವರಕೊಂಡ ಇದ್ದ ವಾಹನ ಪ್ರಪಾತಕ್ಕೆ ಉರುಳಿ ಬಿದ್ದಿದೆ. ತಕ್ಷಣ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ ಎಂದು ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದ ಪ್ರಕಾರ, ಸಿನಿಮಾ ಆಕ್ಷನ್ ದೃಶ್ಯ ಚಿತ್ರೀಕರಣ ವೇಳೆ ಅವಘಡ ಸಂಭವಿಸಿದೆ. ಇಬ್ಬರಿಗೂ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ತುಂಬಾ ಕಠಿಣವಾದ ದೃಶ್ಯಗಳನ್ನು ಸೆರೆಹಿಡಿಯಲಾಗುತ್ತಿತ್ತು. ಹಗ್ಗದ ಮೇಲೆ ವಾಹನ ಓಡಿಸುವ ದೃಶ್ಯ ಇದಾಗಿತ್ತು. ಆದರೆ ಆಯತಪ್ಪಿ ವಾಹನ ಆಳವಾಗಿದ್ದ ನೀರಿರುವ ಪ್ರಪಾತಕ್ಕೆ ಬಿದ್ದಿದೆ. ಇಬ್ಬರಿಗೂ ಗಾಯವಾಗಿತ್ತು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಆರೋಗ್ಯವಾಗಿದ್ದಾರೆ ಎಂದು ವರದಿ ಮಾಡಿದೆ.

Tap to resize

Latest Videos

ಈ ಘಟನೆ ಯಿಂದ ಚಿತ್ರೀಕರಣ ನಿಲ್ಲಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಚಿತ್ರತಂಡದ ಸಿಬ್ಬಂದಿ ಒಬ್ಬರು ಮಾಹಿತಿ ನೀಡಿದ ಪ್ರಕಾರ, ಇಬ್ಬರನ್ನು ತಕ್ಷಣ ದಾಲ್ ಸರೋವರದ ಪಕ್ಕದಲ್ಲೇ ಇದ್ದ ಹೋಟೆಲ್‌ಗೆ ಸಾಗಿಸಲಾಯಿತು. ಅಲ್ಲಿಗೆ ಫಿಸಿಯೋಥೆರಪಿಸ್ಟ್ ಕರೆಸಿ ಚಿಕಿತ್ಸೆ ನೀಡಲಾಯಿತು ಎಂದು ಹೇಳಿದ್ದಾರೆ. ಈ ಘಟನೆ ನಡೆದು ಎರಡು ದಿನ ಕಳೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ವಿಜಯ್ ದೇವರಕೊಂಡ ಮತ್ತು ಸಮಂತಾ ಇಬ್ಬರೂ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ತಮ್ಮ ಭಾಗದ ಚಿತ್ರೀಕರಣ ಮುಂದುವರೆಸಿದ್ದಾರೆ.

ಸಮಂತಾ-ವಿಜಯ್ ದೇವರಕೊಂಡ ಸಿನಿಮಾದ ಟೈಟಲ್ ರಿವೀಲ್; ಫಸ್ಟ್ ಲುಕ್ ವೈರಲ್

ಭಾರಿ ಬಿಗಿ ಭದ್ರತೆಯ ನಡುವೆ ಚಿತ್ರೀಕರಣ ಮಾಡಲಾಗುತ್ತಿದ್ದು ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಲು ಯಾರಿಗೂ ಅನುಮತಿ ಇಲ್ಲ. ಹಾಗಾಗಿ ಈ ಮಾಹಿತಿ ಎಲ್ಲೂ ಸೋರಿಕೆಯಾಗಬಾರದು ಎಂದು ಚಿತ್ರತಂಡ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ ಎನ್ನಲಾಗಿದೆ. ಆದರೂ ಅವಗಡ ಸಂಭವಿಸಿದ್ದು ಎಲ್ಲರಿಗೂ ಗೊತ್ತಾಗಿದೆ.

Vijay Devarakonda Birthday; ಫೋಟೋ ಶೇರ್ ಮಾಡಿ ಕ್ಯೂಟ್ ವಿಶ್ ಮಾಡಿದ ಸಮಂತಾ

ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ ಸಿನಿಮಾದ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದರು. ಖುಷಿ ಕಾಮಿಡಿ ರೊಮ್ಯಾಂಟಿಕ್ ಸಿನಿಮಾ ವಾಗಿದ್ದು ಡಿಸೆಂಬರ್ 23, 2022ರಂದು ತೆರೆಗೆ ಬರಲು ಸಿದ್ಧವಾಗಿದೆ. ತೆಲುಗು ಜೊತೆಗೆ ತಮಿಳು, ಮಲಯಾಳಂ ಮತ್ತು ಕನ್ನಡದಲ್ಲೂ ತೆರೆಗೆ ಬರುತ್ತಿದೆ. ಚಿತ್ರಕ್ಕೆ ಶಿವ ನಿರ್ವಾಣ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಮಂತಾ ಮತ್ತು ವಿಜಯ್ ದೇವರಕೊಂಡ ಇಬ್ಬರು 2018ರಲ್ಲಿ ಬಿಡುಗಡೆಯಾಗಿದ್ದ ಮಹಾನಟಿ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಇದೀಗ ಮತ್ತೊಮ್ಮೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ.

click me!