ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಡೆಸಿದ ಅಧಿಕಾರಿ ಸಮೀರ್ ವಾಂಖೆಡೆ ಪತ್ನಿ, ನಟಿಯೂ ಆಗಿರುವ ಕ್ರಾಂತಿ ರೆಡ್ಕರ್ ವಾಂಖೆಡೆ ಅವರಿಗೆ ಪಾಕಿಸ್ತಾನದಿಂದ ಜೀವ ಬೆದರಿಕೆ ಬರುತ್ತಿರುವುದಾಗಿ ಹೇಳಿದ್ದಾರೆ.
2021ರಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ನಲ್ಲಿ ಸಿಲುಕಿರುವುದು ಎಲ್ಲರಿಗೂ ತಿಳಿದೇ ಇದೆ. ಕ್ರೂಸ್ ಡ್ರಗ್ಸ್ ಪ್ರಕರಣ (Cruise Drugs Case) ಎಂದು ಇದು ಫೇಮಸ್ ಆಗಿತ್ತು. ಶಾರುಖ್ ಪುತ್ರ ಆರ್ಯನ್ ಸೇರಿದಂತೆ ದೊಡ್ಡ ದೊಡ್ಡ ಸೆಲೆಬ್ರಿಟಿಗಳು, ಅವರ ಮಕ್ಕಳು ಈ ಕೇಸ್ನಲ್ಲಿ ಸಿಲುಕಿದ್ದರಿಂದ ಇದು ಭಾರಿ ಸದ್ದು ಮಾಡಿತ್ತು. ಈ ಘಟನೆಯಿಂದ ಶಾರುಖ್ ಖಾನ್ ಝರ್ಜರಿತರಾಗಿದ್ದೂ ಸುಳ್ಳಲ್ಲ. ಇಂದಿಗೂ ಇದರ ಕುರಿತು ಚರ್ಚೆಯಾಗುತ್ತಲೇ ಇದೆ. 2021 ಅಕ್ಟೋಬರ್ 2 ರಂದು, ಕ್ರೂಸ್ ಶಿಪ್ ಮೇಲೆ ಎನ್ ಸಿಬಿ ದಾಳಿ ನಡೆಸಿತ್ತು. ಇದರಲ್ಲಿ ಡ್ರಗ್ಸ್ ಪತ್ತೆ ಇದರಲ್ಲಿ ಆರ್ಯನ್ ಖಾನ್ ಸೇರಿದಂತೆ ಒಟ್ಟು 19 ಮಂದಿಯನ್ನು ಬಂಧಿಸಲಾಗಿತ್ತು. ಮುಂಬೈನ ಸಮುದ್ರ ತೀರದ ಐಷಾರಾಮಿ ಹಡಗಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಈ ಕಾರ್ಯಾಚರಣೆ ನಡೆದಿತ್ತು. ನಂತರ ಆರ್ಯನ್ ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. 28 ದಿನಗಳವರೆಗೆ ಜೈಲಿನಲ್ಲಿದ್ದ ಆರ್ಯನ್ ಅವರಿಗೆ ನಂತರ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಕೊನೆಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು.
ಅಂತಿಮವಾಗಿ ಅವರು ಅಕ್ಟೋಬರ್ 30 ರಂದು ತಮ್ಮ ತಂದೆಯ ಹುಟ್ಟುಹಬ್ಬದ (Birthday) ಸಮಯದಲ್ಲಿ ಜೈಲಿನಿಂದ ಹೊರಬಂದಿದ್ದರು. ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶುಕ್ರವಾರ 6 ಸಾವಿರ ಪುಟಗಳ ಚಾರ್ಜ್ ಶೀಟ್ (Chargesheet) ಸಲ್ಲಿಕೆ ಮಾಡಿದ್ದು, 14 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಿದೆ. ಹಲವರು ಇನ್ನೂ ಕೇಸ್ನಲ್ಲಿ ಒಳಗೇ ಇದ್ದರೆ, ಆರ್ಯನ್ ಖಾನ್ ನಿರಪರಾಧಿ ಎನ್ನುವುದನ್ನು ಸಾಬೀತು ಮಾಡುವಲ್ಲಿ ವಕೀಲರು ಯಶಸ್ವಿಯಾಗಿದ್ದರು. ಆದರೆ ಕುತೂಹಲದ ಬೆಳವಣಿಗೆಯಲ್ಲಿ, ಆರ್ಯನ್ ಖಾನ್‌ಗೆ ಕ್ಲೀನ್‌ಚಿಟ್ (Cleanchit) ಅಂದರೆ ಅವರ ನಿರಪರಾಧಿ ಎಂದು ಸಾಬೀತು ಮಾಡಲು ರಾಷ್ಟ್ರೀಯ ಮಾದಕವಸ್ತು ನಿಗ್ರಹ ದಳದ ಹಿಂದಿನ ಅಧಿಕಾರಿ ಸಮೀರ್ ವಾಂಖೇಡೆ 25 ಕೋಟಿ ರೂ. ಲಂಚ ಕೇಳಿದ್ದ ಗಂಭೀರ ಆರೋಪ ಕೇಳಿಬಂದಿತ್ತು. ಡ್ರಗ್ಸ್ ಪ್ರಕರಣದಲ್ಲಿ ತಾವೇ ಹಿಡಿದಿದ್ದ ಆರ್ಯನ್ ಖಾನ್‌ಗೆ ಕ್ಲೀನ್‌ಚಿಟ್ ಕೊಡಿಸಲು ಸಮೀರ್ ವಾಂಖೇಡೆ ತಂತ್ರ ರೂಪಿಸಿದ್ದರು. ಇದಕ್ಕಾಗಿ 25 ಕೋಟಿ ರೂ. ಕೇಳಿದ್ದರು ಎನ್ನಲಾಗಿತ್ತು. ಆದರೆ ಆರ್ಯನ್ ಖಾನ್ ಅವರನ್ನು ಅರೆಸ್ಟ್ ಮಾಡಿದುದಕ್ಕಾಗಿ ತಮ್ಮನ್ನು ಹೇಗೆ ಸಿಲುಕಿಸುತ್ತಿದ್ದಾರೆ ಎಂದು ವಾಂಖೆಡೆ ಈ ಹಿಂದೆಯೇ ಹೇಳಿದ್ದರು. ನಿಯತ್ತಾಗಿ ಕೆಲಸ ಮಾಡಿದರೆ ಸಿಗುವ ಶಿಕ್ಷೆ ಇದು ಎಂದು ಅವರ ಪತ್ನಿ ಕ್ರಾಂತಿ ರೆಡ್ಕಾರ್ (Kranti Redkar) ಕೂಡ ದುಃಖಿತರಾಗಿದ್ದರು. ಇದೊಂದು ದೊಡ್ಡ ಷಡ್ಯಂತ್ರ ಎಂದೂ ಹೇಳಲಾಗುತ್ತಿದ್ದು, ಅದರ ಸತ್ಯಾಸತ್ಯತೆ ಇನ್ನಷ್ಟೇ ತಿಳಿಯಬೇಕಿದೆ.
ಶಾರುಖ್ಗೆ ಕರಣ್ ಜೋಹರ್, ಪ್ರಿಯಾಂಕಾ ಜೊತೆ ಸಂಬಂಧವಿತ್ತಾ? ನಿರ್ಮಾಪಕ ವಿವೇಕ್ ವಾಸ್ವಾನಿ ಹೇಳಿದ್ದೇನು?
ಇದೀಗ ವಾಂಖೆಡೆ ಪತ್ನಿ, ನಟಿಯೂ ಆಗಿರುವ ಕ್ರಾಂತಿ ರೆಡ್ಕರ್ ವಾಂಖೆಡೆ ಅವರು ತಮಗೆ ಪಾಕಿಸ್ತಾನದ ನಂಬರ್ ಗಳಿಂದ ಜೀವ ಬೆದರಿಕೆ ಮತ್ತು ಅಶ್ಲೀಲ ಸಂದೇಶಗಳು ಬರುತ್ತಿವೆ ಎಂದು ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೇಳಿಕೊಂಡಿದ್ದು, ಈ ವಿಷಯ ಇದೀಗ ಹಲ್ಚಲ್ ಸೃಷ್ಟಿಸಿದೆ. ಕೆಲವು ತಿಂಗಳುಗಳಿಂದ ತಮಗೆ ಈ ರೀತಿಯ ಬೆದರಿಕೆ ಮೇಲ್ಗಳು ಬರುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಅದರಲ್ಲಿ ಜೀವ ತೆಗೆಯುವುದಾಗಿ ಬೆದರಿಕೆ ಹಾಕಲಾಗಿದೆ. ಇದನ್ನು ಪರಿಶೀಲಿಸಿದಾಗ ಅವು ಪಾಕಿಸ್ತಾನದಿಂದ ಬಂದಿರುವ ಮೇಲ್ ಆಗಿದೆ ಎಂದು ತಿಳಿದುಬಂದಿದೆ ಎಂದಿದ್ದಾರೆ.
ಅಂದಹಾಗೆ, ಕ್ರಾಂತಿ ರೆಡ್ಕರ್(Kranti redkar) ಮುಂಬೈ ಮೂಲದ ನಟಿರಾಗಿದ್ದು, 2000 ರಲ್ಲಿ ಮರಾಠಿ ಚಲನಚಿತ್ರ ಸೂನ್ ಅಸವಿ ಆಶಿ ಮೂಲಕ ನಟನಾ ಲೋಕಕ್ಕೆ ಎಂಟ್ರಿ ಕೊಟ್ಟರು. ಪ್ರಕಾಶ್ ಅವರ 2003 ರ ಹಿಟ್ ಚಿತ್ರ ಗಂಗಾಜಲ್ ನಲ್ಲಿ ಅಜಯ್ ದೇವಗನ್ ಮತ್ತು ಗ್ರೇಸಿ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ರೆಡ್ಕರ್ ತನ್ನ ಅಸಾಧಾರಣ ನೃತ್ಯ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಮರಾಠಿ ಚಿತ್ರ ಜಾತ್ರಾ: ಹ್ಯಾಲಗಡ್ ರೆ ತ್ಯಲಗಡ್‌ನಲ್ಲಿ ಕೊಂಬಡಿ ಪಳಲಿ ಎಂಬ ಹಿಟ್ ಹಾಡನ್ನು ಪ್ರದರ್ಶಿಸಿದ್ದಾರೆ. ರೆಡ್ಕರ್ ಸಹ ಶಹನ್ಪನ್ ದೇಗಾ ದೇವಾ, ಶಿಕ್ಷಣಾಚ್ಯಾ ಐಚಾ ಘೋ, ಖೋ ಖೋ ಮತ್ತು ಮರ್ಡರ್ ಮೇಸ್ಟ್ರಿಯಂತಹ ಇತರ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. 2015 ರಲ್ಲಿ, ಊರ್ಮಿಳಾ ಕನಿತ್ಕರ್ ಮತ್ತು ಜಿತೇಂದ್ರ ಜೋಶಿ ನಟಿಸಿದ ಕಾಕನ್ ಚಿತ್ರದ ಮೂಲಕ ರೆಡ್ಕರ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದ್ದಾರೆ. ನೊಬೆಲ್ ಪ್ರಶಸ್ತಿ ವಿಜೇತ ಮದರ್ ತೆರೇಸಾ ಬರೆದ ಪತ್ರವನ್ನು ಆಧರಿಸಿ ಜೂಲಿಯೆಟ್ ಸ್ಟೀವನ್ಸನ್ ನಟಿಸಿದ 2014 ರ ಅಮೇರಿಕನ್ ಚಲನಚಿತ್ರ ದಿ ಲೆಟರ್ಸ್ ನ ಭಾಗವಾಗಿದ್ದರು ಇವರು. ಕ್ರಾಂತಿ ರೆಡ್ಕರ್ 2017 ರಲ್ಲಿ ಸಮೀರ್ ವಾಂಖೆಡೆ ಅವರನ್ನು ವಿವಾಹವಾದರು. ದಂಪತಿಗೆ ಅವಳಿ ಹೆಣ್ಣು ಮಕ್ಕಳಿದ್ದಾರೆ.
ಅನಂತ್ ಅಂಬಾನಿ ಮದ್ವೆಯಲ್ಲಿ ರಾಮ್‌ಚರಣ್‌ಗೆ ಶಾರುಖ್ ಖಾನ್ ಇದೆಂಥ ಇನ್‌ಸಲ್ಟ್? ಫ್ಯಾನ್ಸ್ ಕಿಡಿಕಿಡಿ