ಮರಳು ಶಿಲ್ಪದ ತವರೂರು ಒರಿಸ್ಸಾದ ಪುರಿ ಬೀಚ್‌ನಲ್ಲಿ ಅರಳಿತು ಕಿಚ್ಚ ಸುದೀಪ್​ ಮರಳು ಶಿಲ್ಪ

By Govindaraj S  |  First Published Sep 1, 2022, 10:58 PM IST

ಮಾನಸ್ ಕುಮಾರ್ ಎಂಬ ಹೆಸರಾಂತ ಮರಳು ಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 


ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹವನ್ನು ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳು ಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ. 

ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ತಿಳಿಸಿದ್ದಾರೆ. ಸುದೀಪ್ ಅವರ ಆಪ್ತರಾದ ವೀರಕಪುತ್ರ ಶ್ರೀನಿವಾಸ ಅವರು ಯಾವ ಫೋಟೋ ಬಳಸಬೇಕು ಮತ್ತು ಕನ್ನಡ ಬರವಣಿ ಹೇಗಿರಬೇಕು ಎಂಬ ಗೊಂದಲಕ್ಕೆ ಅಗತ್ಯವಿದ್ದ ಮಾಹಿತಿಯನ್ನು ನೀಡಿರುವುದನ್ನು ತಿಳಿಸಿದರು. 

Tap to resize

Latest Videos

ಫೈಟ್ ನೋಡಿ ನಾನು ಸುದೀಪ್ ಅಚ್ಚರಿ ಪಟ್ವಿ; 'ಸೂಪರ್‌ಸ್ಟಾರ್' ನಿರಂಜನ್ ಹೊಗಳಿದ ಉಪೇಂದ್ರ

ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ ಎರಡನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಅವರು ಮಾತ್ರ. ಈ ಹಿಂದೆ 2020ರಲ್ಲಿ ಡಾ.ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು ಎಂಬುದು ಬಿಟ್ಟರೆ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ. ಈಗ ಎರಡನೆಯವರಾಗಿ ಕಿಚ್ಚ ಸುದೀಪ್ ಅವರು ಅಂತಹ ಗೌರವವಕ್ಕೆ ಪಾತ್ರರಾಗಿದ್ದಾರೆ. ನಿನ್ನೆ (ಬುಧವಾರ) ತಾನೇ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವವನ್ನು ಪಡೆದಿದ್ದಂತಹ ಸುದೀಪ್ ಅವರು ಈಗ ಮರಳು ಶಿಲ್ಪ ಗೌರವಕ್ಕೂ ಪಾತ್ರರಾಗಿರುವುದು ಅವರ ಅಭಿಮಾನಿಗಳನ್ನು ಖುಷಿಯಿಂದ ಕುಣಿಯುವಂತೆ ಮಾಡಿದೆ. 

ಮರಳು ಶಿಲ್ಪದ ಕುರಿತ ಇತರೆ ಮಾಹಿತಿಗಳಿಗಾಗಿ ಶಿಲ್ಪಿ ಮಾನಸ್ ಕುಮಾರ್ ಅವರನ್ನು ಸಂಪರ್ಕಿಸಬಹುದು: 9437280477

11.45ಕ್ಕೆ ನನಗೆ ಊಟ ಬಡಿಸಿಲ್ಲ ಅಂದರೆ ಕೊಲೆನೂ ಆಗ್ಬಹುದು; ಊಟದ ಸೀಕ್ರೆಟ್ ರಿವೀಲ್ ಮಾಡಿದ ಸುದೀಪ್

ಸುದೀಪ್‌ ಸಾಧನೆಗೆ ಅಂಚೆ ಲಕೋಟೆ: ಕಿಚ್ಚ ಸುದೀಪ್‌ ಸಿನಿಮಾ ರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಸುದೀಪ್‌ ಅವರ ವಿಶೇಷ ಲಕೋಟೆ ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯ ಅಧೀಕ್ಷಕ ಮಾದೇಶ್‌ ಹಾಗೂ ಉದ್ಯಮಿ ವೀರಕಪುತ್ರ ಶ್ರೀನಿವಾಸ್‌, ಸುದೀಪ್‌ ಮನೆಗೆ ಆಗಮಿಸಿ ಅವರಿಂದ ನಿರಾಕ್ಷೇಪಣಾ ಪತ್ರ (ಎನ್‌ಓಸಿ) ಪಡೆದರು. ಜೊತೆಗೆ ಸುದೀಪ್‌ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಈ ಅಂಚೆ ಲಕೋಟೆ ಶೀಘ್ರ ಬಿಡುಗಡೆಯಾಗಲಿದೆ.

click me!