ಪತಿ, ಮಾವನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಚೈತ್ರಾ ಹಳ್ಳಿಕೇರಿ; ದೂರು ದಾಖಲು

Published : May 24, 2022, 10:58 AM ISTUpdated : May 24, 2022, 11:37 AM IST
ಪತಿ, ಮಾವನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಚೈತ್ರಾ ಹಳ್ಳಿಕೇರಿ; ದೂರು ದಾಖಲು

ಸಾರಾಂಶ

ನಟಿ ಚೈತ್ರಾ ಹಳ್ಳಿಕೇರಿ(Chitra Hallikeri) ತನ್ನ ಪತಿ ಮತ್ತು ಮಾವನ ವಿರುದ್ಧ ತನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡಿರುವ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್ ಮತ್ತು ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ.

ನಟಿ ಚೈತ್ರಾ ಹಳ್ಳಿಕೇರಿ(Chitra Hallikeri) ತನ್ನ ಪತಿ ಮತ್ತು ಮಾವನ ವಿರುದ್ಧ ತನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡಿರುವ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಅನುಮತಿ ಇಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್ ಮತ್ತು ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಗೋಲ್ಡ್ ಲೋನ್ ಪಡೆಯುವಾಗ ತನ್ನ ಸಹಿಯನ್ನು ನಕಲು ಮಾಡಿದ್ದಾರೆ ಎಂದು ಚೈತ್ರಾ ಆರೋಪ ಮಾಡಿದ್ದಾರೆ. ಈ ಅವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ ಶಾಮೀಲಾಗಿದ್ದಾರೆ ಎಂದು ದೂರಿದ್ದಾರೆ. ಈ ಪ್ರಕರಣ ಸಂಬಂಧ ತನಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮೂರು ದಿನಗಳ ಹಿಂದೆಯೇ ದೂರು ನೀಡಿದ್ದರು.

ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಸ್ಟೇಷನ್ ನಲ್ಲಿ ಎಫ್ ಐ ಆರ್ ದಾಖಲಾಗಿದೆ. ಜೀವ ಬೆದರಿಕೆ ಇದೆ ಸೂಕ್ತ ರಕ್ಷಣೆ ಕೊಡಿ ಎಂದು ಕೇಳಿದ್ದಾರೆ. ಗಂಡ, ಮಾವನ ಷಡ್ಯಂತರದ ವಹಿವಾಟಿಗೆ ಜಯಲಕ್ಷ್ಮೀಪುರಂನ ಸೌತ್ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ ಕೂಡ ನೆರವಾಗಿದ್ದಾರೆ ಎಂದಿದ್ದಾರೆ. ತನ್ನ ಖಾತೆ ಮೂಲಕ 13 ಲಕ್ಷ ಮೌಲ್ಯದ ಚಿನ್ನ ಅಡವಿಟ್ಟು ವಂಚಿಸಲಾಗಿದೆ. ಪತಿ ವಿರುದ್ಧ ಈಗಾಗಲೇ ದೈಹಿಕ ಹಲ್ಲೆ ಆರೋಪಿಸಿ ಕೇಸ್ ಹಾಕಿದ್ದೇನೆ. ನನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿದ್ದು ಗೊತ್ತಾಗಿ ಈಗ ಮತ್ತೊಂದು ಪ್ರಕರಣ ದಾಖಲಿಸಿದ್ದೇನೆ ಎಂದು ಹೇಳಿದರು.

Bengaluru Crime: ಕೆಲಸಕ್ಕಿದ್ದ ಅಂಗಡಿಯಲ್ಲಿ 8 ಕೆಜಿ ಬೆಳ್ಳಿ ಕಳ್ಳತನ: ಮೂವರ ಬಂಧನ

ನಟಿ ಚೈತ್ರಾ ಖುಷಿ, ಶಿಷ್ಯ, ಗುನ್ನ ಸೇರಿದಂತೆ ಇನ್ನು ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಚೈತ್ರಾ ನಟನೆಯ ಅನೇಕ ಸಿನಿಮಾಗಳ ಹಾಡುಗಳು ಸಹ ಸೂಪರ್ ಹಿಟ್ ಆಗಿವೆ. ಸಿನಿಮಾರಂಗದಲ್ಲಿ ಆಕ್ಟೀವ್ ಆಗಿರುವಾಗಲೇ ಚೈತ್ರಾ, ಬಾಲಾಜಿ ಪೋತರಾಜ್ ಎಂಬ ಉದ್ಯಮಿ ಜೊತೆ ಹಸೆಮಣೆ ಏರಿದರು. ಮದುವೆ ಬಳಿಕ ನಟನೆ ಬಿಡಬೇಕು ಎನ್ನುವ ಷರತ್ತು ಹಾಕಿದ್ದರು. ಅದನ್ನು ಒಪ್ಪಿಕೊಂಡೆ ಎಂದು ಹೇಳಿದರು.

PSI Recruitment Scam: ಅಭ್ಯರ್ಥಿಗಳಿಂದಲೂ ಒಎಂಆರ್‌ ತಿದ್ದಿಸಿದ್ದ ದಿವ್ಯಾ ಹಾಗರಗಿ..!

ಮದುವೆ ಬಳಿಕ ತುಂಬಾ ಕಷ್ಟವಾಗುತ್ತಿತ್ತು. ಆದರೂ ಹೇಗೊ ಕಷ್ಟಪಟ್ಟು ಧಾರಾವಾಹಿ ನಿರ್ಮಿಸಿದೆ. ಅದರಲ್ಲಿ ಬಂದ ಸಂಪಾದನೆಯನ್ನು ಪತಿ ಕಿತ್ತುಕೊಂಡರು. ಅಷ್ಟೇ ಅಲ್ಲದೇ ನನ್ನನ್ನು ಥಳಿಸಿದರು ಎಂದು ಚೈತ್ರಾ 2018ರಲ್ಲಿ ಬಸವನಗುಡಿ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಿಸಿದ್ದರು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಡಾರ್ಲಿಂಗ್.. ಆ ಪ್ರೀತಿಯನ್ನು ಕಂಡು ನಿನಗೆ ಆನಂದಬಾಷ್ಪ ಬಂದಿರುತ್ತದೆ; ರಾಜಮೌಳಿ ಪತ್ರದ ಮರ್ಮವೇನು?
'ರೀನಾ, ಕಿರಣ್ & ಲವರ್ ಗೌರಿ.. 'ನಾವೆಲ್ಲರೂ ಒಂದೇ ಫ್ಯಾಮಿಲಿ' ಎಂದ ಅಮೀರ್ ಖಾನ್; ಒಳಗೊಳಗೇ ನಕ್ಕ ನೆಟ್ಟಿಗರು!