#HappyBirthdaySamantha; ಶಾಕುಂತಲಾ ಆದ ಸಮಂತಾ, ಫೋಟೋ ವೈರಲ್

Published : Apr 28, 2022, 01:11 PM IST
#HappyBirthdaySamantha; ಶಾಕುಂತಲಾ ಆದ ಸಮಂತಾ, ಫೋಟೋ ವೈರಲ್

ಸಾರಾಂಶ

ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಹುಟ್ಟುಹಬ್ಬದ ಸಂಭ್ರಮ. 35ನೇ ವರ್ಷದ ಹುಟ್ಟುಹಬ್ಬ(Samantha 35th birthday)ಆಚರಿಸಿಕೊಳ್ಳುತ್ತಿರುವ ಸಮಂತಾಗೆ ಅಭಿಮಾನಿಗಳು ಮತ್ತು ಸ್ಟಾರ್ ಕಲಾವಿದರು ವಿಶ್ ಮಾಡಿ ಶುಭಹಾರೈಸುತ್ತಿದ್ದಾರೆ.   

ದಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ರುತ್ ಪ್ರಭು ಅವರಿಗೆ ಇಂದು (ಏಪ್ರಿಲ್ 28) ಹುಟ್ಟುಹಬ್ಬದ ಸಂಭ್ರಮ. 35ನೇ ವರ್ಷದ ಹುಟ್ಟುಹಬ್ಬ(Samantha 35th birthday)ಆಚರಿಸಿಕೊಳ್ಳುತ್ತಿರುವ ಸಮಂತಾಗೆ ಅಭಿಮಾನಿಗಳು ಮತ್ತು ಸ್ಟಾರ್ ಕಲಾವಿದರು ವಿಶ್ ಮಾಡಿ ಶುಭಹಾರೈಸುತ್ತಿದ್ದಾರೆ. ಸ್ಯಾಂಡಲ್ ವುಡ್ ನಟಿ ರಮ್ಯಾ(Ramya), ಕಾಜಲ್ ಅಗರ್ವಾಲ್, ತಮನ್ನಾ, ರಾಮ್ ಚರಣ್(Ram Charan) ಸೇರಿದಂತೆ ಅನೇಕ ಸ್ಟಾರ್ ಕಲಾವಿದರು ಸಮಂತಾ ಅವರಿಗೆ ಪ್ರೀತಿಯ ವಿಶ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಮಂತಾ ಫೋಟೋ ಶೇರ್ ಮಾಡುವ ಮೂಲಕ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಇಂದು ಹುಟ್ಟುಹಬ್ಬದ ದಿನ ಸಮಂತಾ ಶಾಕುಂತಲಾ ಆಗಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಸಮಂತಾ ಶಾಕುಂತಲಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೌದು, ಸಮಂತಾ ಶಾಕುಂತಲಂ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಸ್ಯಾಮ್ ಶಾಕುಂತಲ ಪಾತ್ರಕ್ಕೆ ಬಣ್ಣ ಹಚ್ಚಿದ್ದರು. ತುಂಬಾ ಇಷ್ಟಪಟ್ಟು ಪ್ರೀತಿಯಿಂದ ಮಾಡಿದ ಶಾಕುಂತಲಂ ಸಿನಿಮಾದ ಮೊದಲ ಲುಕ್ ಬಿಡುಗಡೆಯಾಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಥೇಟ್ ಶಾಕುಂತಲ ಹಾಗೆ ಕಾಣಿಸುತ್ತಿರುವ ಸಮಂತಾ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದದಾರೆ.

ಬಳಿ ಬಣ್ಣದ ಬಟ್ಟೆ ಧರಿಸಿರುವ ಸಮಂತಾ ಉದ್ದವಾದ ಕೂದಲು ಬಿಟ್ಟು ಬಳಿ ಹೂವುಗಳಿಂದ ಕೂದಲನ್ನು ಅಲಂಕರಿಸಿದ್ದಾರೆ. ಕಂಬಕ್ಕೆ ವರಗಿ ನಿಂತು ಯಾರೋ ಬರುವಿಕೆಯನ್ನು ಕಾಯುತ್ತಿರುವ ಹಾಗೆ ಇರುವ ಲುಕ್ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ಪಡೆದಿದೆ. ಈ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಅಭಿಮಾನಿಗಳು ಶಾಕುಂತಲ ಸ್ಯಾಮ್ ಫೋಟೋ ಶೇರ್ ಮಾಡಿ ವಿಶ್ ಮಾಡುತ್ತಿದ್ದಾರೆ.

IPL 2022: MS Dhoni ಮತ್ತು CSK ಆಟಗಾರರ ಡ್ಯಾನ್ಸ್‌ಗೆ Samantha ಫುಲ್‌ ಫಿದಾ!

ಪೋಸ್ಟರ್ ಶೇರ್ ಮಾಡಿ ಸಿನಿಮಾತಂಡ ಸಮಂತಾ ಅವರಿಗೆ ಹುಟ್ಟುಹಬ್ಬದ ವಿಶ್ ಮಾಡಿದ್ದಾರೆ. ಅಂದಹಾಗೆ ಶಾಕುಂತಲಂ ನಿರ್ದೇಶಕ ಗುಣಶೇಖರನ್ ಸಾರಥ್ಯದಲ್ಲ ಮೂಡಿಬಂದ ಸಿನಿಮಾ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಅಂದಹಾಗೆ ಸಮಂತಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟ ನಾಗ ಚೈತನ್ಯರಿಂದ ವಿಚ್ಛೇದನ ಪಡದೆ ಬಳಿಕ ಸಿನಿಮಾರಂಗದಲ್ಲಿ ಮತ್ತಷ್ಟು ಸಕ್ರೀಯರಾಗಿದ್ದು ದಕ್ಷಿಣಭಾರತದ ಸಿನಿಮಾರಂಗ ಮಾತ್ರವಲ್ಲದೆ ಬಾಲಿವುಡ್ ನಲ್ಲೂ ಬ್ಯುಸಿಯಾಗಿದ್ದಾರೆ.

ಇತ್ತೀಚಿಗಷ್ಟೆ ಸಮಂತಾ ಹೊಸ ಸಿನಿಮಾಗೆ ಗ್ರೀನ್ ಸಿಗ್ನಲ್ ಮಾಡಿದ್ದು ನಟ ವಿಜಯ್ ದೇವರಕೊಂಡ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು ಕಾಶ್ಮೀರದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅಂದಹಾಗೆ ಸಮಂತಾ ಮತ್ತು ವಿಜಯ್ ದೇವರಕೊಂಡ 2ನೇ ಬಾರಿ ಒಟ್ಟಿಗೆ ನಟಿಸುತ್ತಿದ್ದು ಮಜಿಲಿ ಖ್ಯಾತಿಯ ನಿರ್ದೇಶಕ ಶಿವ ನಿರ್ವಾನ ಆಕ್ಷನ್ ಕಟ್ ಹೇಳುತ್ತಿದ್ದಾರೆ.


'ಡಾರ್ಲಿಂಗ್' ಸಮಂತಾ ಜೊತೆ ವಿಜಯ್ ದೇವರಕೊಂಡ ಹೊಸ ಸಿನಿಮಾ

 

ದಿ ಫ್ಯಾಮಿಲಿ ಮ್ಯಾನ್ ಮತ್ತು ಪುಷ್ಪ ಸಿನಿಮಾದ ಸಕ್ಸಸ್ ಸಮಂತಾ ಅವರಿಗೆ ಅವಕಾಶಗಳು ಮತ್ತಷ್ಟು ಹೆಚ್ಚಾಗಿದೆ. ಸದ್ಯ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಮಂತಾ ಬಾಲಿವುಡ್ ಕಡೆಯೂ ಮುಖ ಮಾಡಿದ್ದಾರೆ. ತೆಲುಗಿನಲ್ಲಿ ಯಶೋದಾ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದು ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ಈ ಸಿನಿಮಾ ಬಹುಭಾಷೆಯಲ್ಲಿ ತಯಾರಾಗುತ್ತಿದೆ. ಚಿತ್ರದಲ್ಲಿ ಆಕ್ಷನ್ ದೃಶ್ಯಗಳು ಜಾಸ್ತಿ ಇರಲಿದ್ದು ಸ್ಟಂಟ್ ನಿರ್ದೇಶನ ಮಾಡಲು ಹಾಲಿವುಡ್ ಸ್ಟಂಟ್ ಮಾಸ್ಟರ್ ಸಮಂತಾ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರಾಜ್ ಮತ್ತು ಡಿಕೆ ನಿರ್ದೇಶನದ ಹೊಸ ವೆಬ್ ಸೀರಿಸ್ ನಲ್ಲಿ ಸಮಂತಾ ನಟಿಸುತ್ತಿದ್ದು, ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದವರು: ನಟ ಶಿವಣ್ಣ ಹೇಳಿದ್ದೇನು?
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?